ಅಂದು ಬಿಕಿನಿ, ಇಂದು ಗನ್; ‘ವಾರ್ 2’ ಸಿನಿಮಾದಲ್ಲಿ ಕಿಯಾರಾ ಹೊಸ ಅವತಾರ

ಭಾರಿ ನಿರೀಕ್ಷೆ ಸೃಷ್ಟಿ ಮಾಡಿರುವ ‘ವಾರ್ 2’ ಸಿನಿಮಾದ ಬಿಡುಗಡೆಗೆ 50 ದಿನ ಬಾಕಿ ಇದೆ. ಈಗಲೇ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಹೊಸ ಪೋಸ್ಟರ್ ರಿಲೀಸ್ ಆಗಿದೆ. ಹೃತಿಕ್ ರೋಷನ್, ಕಿಯಾರಾ ಅಡ್ವಾಣಿ, ಜೂನಿಯರ್ ಎನ್​ಟಿಆರ್ ಅವರ ಈ ಪೋಸ್ಟರ್​ಗಳು ವೈರಲ್ ಆಗುತ್ತಿವೆ.

ಅಂದು ಬಿಕಿನಿ, ಇಂದು ಗನ್; ‘ವಾರ್ 2’ ಸಿನಿಮಾದಲ್ಲಿ ಕಿಯಾರಾ ಹೊಸ ಅವತಾರ
Kiara Advani, Jr Ntr

Updated on: Jun 26, 2025 | 7:25 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ವಾರ್ 2’ (War 2) ಚಿತ್ರ ಕೂಡ ಇದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಹೆಚ್ಚು ಹೈಪ್ ಕ್ರಿಯೇಟ್ ಮಾಡಿದೆ. ಜೂನಿಯರ್ ಎನ್​ಟಿಆರ್​ (Jr NTR), ಹೃತಿಕ್ ರೋಷನ್, ಕಿಯಾರಾ ಅಡ್ವಾಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮೊದಲು ಬಿಡುಗಡೆಯಾದ ಟೀಸರ್ ಗಮನ ಸೆಳೆದಿತ್ತು. ಈಗ ಎಲ್ಲ ಪಾತ್ರಗಳ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ಕಿಯಾರಾ ಅಡ್ವಾಣಿ (Kiara Advani) ಅವರು ಗನ್ ಹಿಡಿದು ಪೋಸ್ ನೀಡಿದ್ದಾರೆ. ಅಭಿಮಾನಿಗಳ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಪೋಸ್ಟರ್ ವೈರಲ್ ಆಗಿದೆ.

‘ವಾರ್ 2’ ಸಿನಿಮಾ ಟೀಸರ್ ಬಿಡುಗಡೆ ಆದಾಗ ಕಿಯಾರಾ ಅಡ್ವಾಣಿ ಅವರು ಬಿಕಿನಿ ಧರಿಸಿ ಕಾಣಿಸಿಕೊಂಡಿದ್ದರು. ಅವರನ್ನು ಹಾಟ್ ಅವತಾರದಲ್ಲಿ ನೋಡಿ ಎಲ್ಲರೂ ಹುಬ್ಬೇರಿಸಿದ್ದರು. ಹಾಗಂತ ಈ ಸಿನಿಮಾದಲ್ಲಿ ಅವರು ಕೇವಲ ಗ್ಲಾಮರ್ ಗೊಂಬೆ ರೀತಿ ಕಾಣಿಸಿಕೊಳ್ಳುತ್ತಾರಾ ಎಂಬ ಅನುಮಾನ ಇತ್ತು. ಆದರೆ ಅವರು ಗನ್ ಹಿಡಿದು ಆ್ಯಕ್ಷನ್ ದೃಶ್ಯಗಳಲ್ಲಿ ಕೂಡ ಕಾಣಿಸಿಕೊಳ್ಳುತ್ತಾರೆ ಎಂಬುದಕ್ಕೆ ಈ ಪೋಸ್ಟರ್ ಸಾಕ್ಷಿ ಒದಗಿಸುತ್ತಿದೆ.

ಆಗಸ್ಟ್ 14ರಂದು ‘ವಾರ್ 2’ ಸಿನಿಮಾ ಬಿಡುಗಡೆ ಆಗಲಿದೆ. ಅದ್ದೂರಿ ಬಜೆಟ್​​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ‘ಯಶ್ ರಾಜ್ ಫಿಲ್ಮ್ಸ್​’ ಸಂಸ್ಥೆಯು ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ಅವರು ಈ ಚಿತ್ರದಲ್ಲಿ ಮುಖಾಮುಖಿ ಆಗಲಿದ್ದಾರೆ. ಅದರ ಝಲಕ್ ಈಗಾಗಲೇ ಟೀಸರ್​ನಲ್ಲಿ ತೋರಿಸಲಾಗಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಇದನ್ನೂ ಓದಿ: ನಟಿ ಕಿಯಾರಾ ಬಿಕಿನಿ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ರಾಮ್ ಗೋಪಾಲ್ ವರ್ಮಾ

ಇದು ಪಕ್ಕಾ ಆ್ಯಕ್ಷನ್ ಸಿನಿಮಾ. ಹಾಗಾಗಿಯೇ ಹೊಸ ಪೋಸ್ಟರ್​ನಲ್ಲಿ ಜೂನಿಯರ್ ಎನ್​ಟಿಆರ್, ಕಿಯಾರಾ ಅಡ್ವಾಣಿ ಮತ್ತು ಹೃತಿಕ್ ರೋಷನ್ ಅವರು ಯುದ್ಧಕ್ಕೆ ಸಜ್ಜಾಗಿ ನಿಂತವರಂತೆ ಕಾಣಿಸಿಕೊಂಡಿದ್ದಾರೆ. ‘ವಾರ್ 2’ ಬಿಡುಗಡೆ ಆಗಲು ಇನ್ನು 50 ದಿನಗಳ ಮಾತ್ರ ಬಾಕಿ ಇವೆ. ಈಗಿನಿಂದಲೇ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ.

ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಿದ ‘ವಾರ್’ ಸಿನಿಮಾ 2019ರಲ್ಲಿ ತೆರೆಕಂಡಿತ್ತು. ಅದರ ಸೀಕ್ವೆಲ್ ಆಗಿ ‘ವಾರ್ 2’ ಬರುತ್ತಿದೆ. ಈ ಸಿನಿಮಾಗೆ ಅಯಾನ್ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಸ್ಟಾರ್ ನಟರು ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us