ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.
ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಮಣಿಯರ ದಿನನಿತ್ಯದ ಜಡೆಜಗಳದಿಂದ ಅಲ್ಲಿನ ಸಿಬ್ಬಂದಿ ಹಾಗೂ ಇತರೆ ಕೈದಿಗಳು ರೋಸಿಹೋಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಇವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವುದು ಜೈಲಿನಲ್ಲಿರುವವರಿಗೆ ಮತ್ತಷ್ಟು ತಲೆನೋವು ತಂದುಕೊಡಬಹುದು.
ಇಬ್ರೂ ಯಾವಾಗ ಬೇಲ್ ತಗೊಂಡು ಹೋಗ್ತಾರೋ -ಜಡೆಜಗಳಕ್ಕೆ ಸಿಬ್ಬಂದಿ, ಕೈದಿ ಕಂಗಾಲು
Published On - 2:19 pm, Fri, 9 October 20