AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ದೋಷಿ: ಮಹಿಳೆಯರಿಗೆ ದೊರೆತ ನ್ಯಾಯ ಎಂದ ರಮ್ಯಾ

Prajwal Revanna case: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಬಗ್ಗೆ ನಟಿ ರಮ್ಯಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟವಾಗುತ್ತಿರುವುದು ಎಲ್ಲ ಮಹಿಳೆಯರಿಗೂ ದೊರೆತ ನ್ಯಾಯ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ದೋಷಿ: ಮಹಿಳೆಯರಿಗೆ ದೊರೆತ ನ್ಯಾಯ ಎಂದ ರಮ್ಯಾ
Ramya
ಮಂಜುನಾಥ ಸಿ.
|

Updated on: Aug 01, 2025 | 3:29 PM

Share

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2) ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಹಲವಾರು ಮಂದಿ ಪ್ರಜ್ವಲ್ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟಿ ರಮ್ಯಾ ಸಹ ಪ್ರಜ್ವಲ್ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಎಲ್ಲ ಮಹಿಳೆಯರಿಗೂ ನ್ಯಾಯ ಸಂದಿದೆ, ಹೈಕೋರ್ಟ್ ಒಳ್ಳೆಯ ಕೆಲಸ ಮಾಡಿದೆ ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ ರಮ್ಯಾ, ರಾಜ್ಯದ ಪ್ರಮುಖ ಘಟನೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಬಂದಿದ್ದಾರೆ. ವಿಶೇಷವಾಗಿ ಮಹಿಳೆಯರ ಪರವಾಗಿ ದನಿ ಎತ್ತುಲೇ ಬಂದಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿತ್ತು. ಆದರೆ ರಮ್ಯಾ ತಪ್ಪು ಗ್ರಹಿಕೆಯಿಂದ ಹೈಕೋರ್ಟ್​ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕೆಲ ದಿನಗಳ ಹಿಂದೆ ದರ್ಶನ್ ಜಾಮೀನು ಪ್ರಕರಣ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆದಾಗಲೂ ಸಹ ರಮ್ಯಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಅವಸರದಲ್ಲಿ ಜಾಮೀನು ನೀಡಿದೆ ಎಂಬ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ವ್ಯಕ್ತಪಡಿಸಿತ್ತು. ಸುಪ್ರೀಂಕೋರ್ಟ್​ನ ಈ ಹೇಳಿಕೆಯನ್ನು ಆಧರಿಸಿ, ‘ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕುವ ಸಾಧ್ಯತೆ ಇದೆ’ ಎಂದು ರಮ್ಯಾ ಹೇಳಿದ್ದರು. ಆದರೆ ರಮ್ಯಾರ ಹೇಳಿಕೆಯಿಂದ ಆಕ್ರೋಶಗೊಂಡ ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್ ಮಾಡಲು ಆರಂಭಿಸಿದರು.

ಇದನ್ನೂ ಓದಿ:ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳಿದ ನಟಿ ರಮ್ಯಾ 

ಇದೀಗ ನಟಿ ರಮ್ಯಾ, ದರ್ಶನ್ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದು, ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ದರ್ಶನ್ ಅಭಿಮಾನಿಗಳು ಅಶ್ಲೀಲ ಕಮೆಂಟ್ ಮಾಡಿದ್ದನ್ನು ರಮ್ಯಾ ಖಂಡಿಸಿ ಪೋಸ್ಟ್ ಹಾಕಿದ್ದಾಗ, ಟಿವಿ9 ಜೊತೆಗೆ ಮಾತನಾಡಿದ್ದ ರಮ್ಯಾ, ‘ನಾನು ಯಾವುದೇ ವಿಷಯವಾದರೂ ಆ ಬಗ್ಗೆ ನನ್ನ ಅಭಿಪ್ರಾಯವನ್ನು ಪ್ರಾಮಾಣಿಕವಾಗಿ ಹಂಚಿಕೊಳ್ಳುತ್ತೇನೆ. ಅದು ತಪ್ಪಲ್ಲ, ವಿಶೇಷವಾಗಿ ಮಹಿಳೆಯರ ಪರವಾಗಿ ನಾನು ದನಿ ಎತ್ತುತ್ತಾ ಬಂದಿದ್ದೇನೆ’ ಎಂದಿದ್ದರು. ಅದರಂತೆ ಈಗಲೂ ಸಹ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ