K Shivaram: ಸಿನಿಮಾ ಹೀರೋ ಆಗಿದ್ದ ಮೊದಲ ಐಎಎಸ್​ ಅಧಿಕಾರಿ ಕೆ. ಶಿವರಾಮ್​

ಅನಾರೋಗ್ಯದಿಂದ ಕೆ. ಶಿವರಾಮ್​ ಅವರು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಶಿವರಾಮ್​ ಅವರ ಅಗಲಿಕೆ ಸುದ್ದಿ ತಿಳಿದು, ಶ್ರದ್ಧಾಂಜಲಿ ಅರ್ಪಿಸುವುದರ ಜೊತೆಗೆ ಸಿನಿಮಾ ಜರ್ನಿಯನ್ನು ಮೆಲಕು ಹಾಕಲಾಗುತ್ತಿದೆ. ಐಎಎಸ್​ ಅಧಿಕಾರಿ, ಸಿನಿಮಾ ನಟನಾಗಿ ಅವರು ಜನಮನ ಗೆದ್ದಿದ್ದರು. ರಾಜಕೀಯದಲ್ಲೂ ಅವರು ಗುರುತಿಸಿಕೊಂಡಿದ್ದರು.

K Shivaram: ಸಿನಿಮಾ ಹೀರೋ ಆಗಿದ್ದ ಮೊದಲ ಐಎಎಸ್​ ಅಧಿಕಾರಿ ಕೆ. ಶಿವರಾಮ್​
ಕೆ. ಶಿವರಾಮ್, ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on:Feb 29, 2024 | 6:38 PM

ಸಿನಿಮಾ ನಟ, ನಿವೃತ್ತ ಐಎಎಸ್​ ಅಧಿಕಾರಿ ಕೆ. ಶಿವರಾಮ್​ ಅವರ ನಿಧನಕ್ಕೆ (K Shivaram Death) ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದ ಶಿವರಾಮ್​ ಅವರು ಚಿತ್ರರಂಗದಲ್ಲೂ ತೊಡಗಿಕೊಂಡಿದ್ದರು. 1993ರಲ್ಲಿ ತೆರೆಕಂಡ ‘ಬಾ ನಲ್ಲೆ ಮಧುಚಂದ್ರಕೆ’ (Baa Nalle Madhuchandrake) ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಬಂದ ಅವರು ಮೊದಲ ಚಿತ್ರದಲ್ಲೇ ಯಶಸ್ಸು ಕಂಡಿದ್ದರು. ಆ ಸಿನಿಮಾದ ಹಾಡುಗಳು ಇಂದಿಗೂ ಎವರ್​ಗ್ರೀನ್​ ಆಗಿವೆ. ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ ಅವರು ಗುರುತಿಸಿಕೊಂಡಿದ್ದರು. ಈಗ ಶಿವರಾಮ್​ ಅವರ ಅಗಲಿಕೆಗೆ ರಾಜಕೀಯ ಮತ್ತು ಸಿನಿಮಾ ಕ್ಷೇತ್ರದ ಅನೇಕರು ಸಂತಾಪ ಸೂಚಿಸಿದ್ದಾರೆ. ಕೆ. ಶಿವರಾಮ್​ (K Shivaram) ಅವರು ಸಾಗಿಬಂದ ಹಾದಿಯ ಬಗ್ಗೆ ಇಲ್ಲಿದೆ ಮಾಹಿತಿ..

ಬಡ ಕುಟುಂಬದಿಂದ ಬಂದು, ಕೆಎಎಸ್​ ಹಾಗೂ ಐಎಎಸ್​ ಅಧಿಕಾರಿಯಾಗಿ ಸಾಧನೆ ಮಾಡಿದ ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದರು. ನಟ ಆಗಬೇಕು ಎಂಬ ಆಸೆ ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಸ್ನೇಹಿತರೊಬ್ಬರ ಜೊತೆ ಸುಮ್ಮನೇ ಮಾತನಾಡುವಾಗ ಸಿನಿಮಾ ಮಾಡಬೇಕು ಎಂಬ ಹಂಬಲ ಅವರಿಗೆ ಚಿಗುರಿತು. ಅದನ್ನು ಈಡೇರಿಸಿಕೊಳ್ಳಲು ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದಲ್ಲಿ ನಟಿಸುವ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಮೂಲಕ ಸಿನಿಮಾ ಹೀರೋ ಆದ ಮೊದಲ ಐಎಎಸ್​ ಅಧಿಕಾರಿ ಎಂಬ ಖ್ಯಾತಿ ಅವರಿಗೆ ಸಿಕ್ಕಿತ್ತು. ನಟನಾಗಿ ಅವರು ಜನಪ್ರಿಯತೆ ಗಳಿಸಿದ್ದರು.

ಅಧಿಕಾರಿಯಾಗಿದ್ದುಕೊಂಡು ಸಿನಿಮಾದಲ್ಲಿ ನಟಿಸಬಾರದು ಎಂದು ಕೆಲವರು ತಕರಾರು ತೆಗೆದಿದ್ದರು. ಆದರೆ ಅದರ ವಿರುದ್ಧ ಶಿವರಾಮ್​ ಅವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ನಟನೆ, ಕ್ರೀಡೆ ಇವೆಲ್ಲ ಹವ್ಯಾಸ. ಅದಕ್ಕೆ ಯಾರೂ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದು ಶಿವರಾಮ್​ ಹೇಳುತ್ತಿದ್ದರು. ಅಧಿಕಾರಿಯಾಗಿ ನಿವೃತ್ತಿ ಹೊಂದುವ ತನಕವೂ ಅವರು ನಟನೆಯಲ್ಲಿ ತೊಡಗಿಕೊಂಡಿದ್ದರು. ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದ ಕೆಲಸ ಶುರುವಾಗಿದ್ದೇ ರಾಹುಕಾಲದಲ್ಲಿ! ಆ ಮೂಲಕ ಕೆಲವು ಮೂಢನಂಬಿಕೆಗಳನ್ನು ಅವರು ತೊಡೆದು ಹಾಕಲು ಪ್ರಯತ್ನಿಸಿದ್ದರು. ಆ ಸಿನಿಮಾಗೆ 35 ಕೋಟಿ ರೂಪಾಯಿ ಖರ್ಚಾಗಿತ್ತು. ಸಿನಿಮಾ ಹಿಟ್​ ಆಯಿತು. ಆ ಸಿನಿಮಾಗೆ ಹಂಸಲೇಖ ಅವರು ಸಂಗೀತ ನೀಡಿದ್ದರು. ಹಾಡುಗಳು ಸೂಪರ್​ ಹಿಟ್​ ಆದವು.

ಇದನ್ನೂ ಓದಿ: ‘ಬರೆಯದ ಮೌನದ ಕವಿತೆ..’ ಗಾಯಕ ಪಂಕಜ್​ ಉಧಾಸ್​ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ನಿಧನ

ಅಧಿಕಾರಿ ಆದ್ದರಿಂದ ಸರಿಯಾದ ಸಮಯಕ್ಕೆ ಕಾಲ್​ಶೀಟ್​ ನೀಡಲ್ಲ ಅಂತ ಶಿವರಾಮ್​ ಜೊತೆ ಸಿನಿಮಾ ಮಾಡಲು ಹಲವರು ಮುಂದೆಬರಲಿಲ್ಲ. ಹಾಗಿದ್ದರೂ ‘ಪ್ರತಿಭಟನೆ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಇತ್ತೀಚಿನ ದಿನಗಳಲ್ಲೂ ಅವರು ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಿದ್ಧರಾಗಿದ್ದರು. ನಟನೆಯ ಮತ್ತು ನಿರ್ಮಾಣ ಮಾಡಬೇಕು ಎಂದು ಅವರು ಆಸೆಪಟ್ಟಿದ್ದರು. ಚುನಾವಣೆಯಲ್ಲಿ ಟಿಕೆಟ್​ ಸಿಗದಿದ್ದರೆ ಪೂರ್ಣ ಪ್ರಮಾಣದಲ್ಲಿ ಚಿತ್ರರಂಗದಲ್ಲಿ ಸಕ್ರಿಯವಾಗಬೇಕು ಎಂದು ಶಿವರಾಮ್​ ಅವರು ಹೇಳಿಕೊಂಡಿದ್ದರು. ಕೆ. ಶಿವರಾಮ್​ ನಟಿಸಿದ್ದ ಕೊನೆಯ ಸಿನಿಮಾ 2017ರಲ್ಲಿ ಬಿಡುಗಡೆಯಾದ ‘ಟೈಗರ್​’.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:11 pm, Thu, 29 February 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ