AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ?

‘ಕರಿಕಾಡ’ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಕನ್ನಡದ ಜೊತೆ ಬೇರೆ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗಲಿದೆ. ಟ್ರೇಲರ್ ಮೂಲಕ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡಲಾಗಿದೆ. ಕರ್ನಾಟಕದ ಅಂದಾಜು 100 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ?
Karikaada Movie TeamImage Credit source: Tv9 Kannada
ಮದನ್​ ಕುಮಾರ್​
|

Updated on: Feb 01, 2026 | 2:03 PM

Share

‘ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ, ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ‘ಕರಿಕಾಡ’ (Karikaada) ಸಿನಿಮಾದ ಟ್ರೇಲರ್​​ನಲ್ಲಿ ಗಮನ ಸೆಳೆದಿದೆ. ಹಾಗಾದರೆ ಈ ಸಿನಿಮಾದಲ್ಲಿ ಹೀರೋ ಯಾವುದಕ್ಕಾಗಿ ಯುದ್ಧ ಮಾಡುತ್ತಾನೆ? ಹೆಣ್ಣಿಗಾಗಿ ಅಥವಾ ಮಣ್ಣಿಗಾಗಿ ಎಂಬುದನ್ನು ಸಿನಿಮಾ ನೋಡಿಯೇ ತಿಳಿಯಬೇಕು. ಈ ಚಿತ್ರ ಫೆಬ್ರವರಿ 6ರಂದು ರಿಲೀಸ್ ಆಗಲಿದೆ. ಕಾಡ ನಟರಾಜ್ (Kaada Natraj) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

‘ರಿದ್ದಿ ಎಂಟರ್​ಟೇನ್ಮೆಂಟ್’ ಮೂಲಕ ‘ಕರಿಕಾಡ’ ಸಿನಿಮಾ ನಿರ್ಮಾಣ ಆಗಿದೆ. ಕಾಡ ನಟರಾಜ್ ಅವರ ಪತ್ನಿ ದೀಪ್ತಿ ದಾಮೋದರ್ ಅವರೇ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಾಯಕನಾಗಿ ನಟಿಸುವುದರ ಜೊತೆಗೆ ನಟರಾಜ್ ಅವರು ಕಥೆ ಕೂಡ ಬರೆದಿದ್ದಾರೆ. ಕೆ. ವೆಂಕಟೇಶ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇತ್ತೀಚೆಗೆ ‘ಕರಿಕಾಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡದವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡರು. ಈಗಾಗಲೇ ಈ ಸಿನಿಮಾದ ಟೀಸರ್, ಹಾಡು ಗಮನ ಸೆಳೆದಿದ್ದವು. ಈಗ ಟ್ರೇಲರ್ ನೋಡಿದ ಬಳಿಕ ಪ್ರೇಕ್ಷಕರ ಕೌತುಕ ಹೆಚ್ಚಾಗಿದೆ. ಬೇರೆ ಭಾಷೆಯಲ್ಲಿ ಕೂಡ ಈ ಚಿತ್ರ ರಿಲೀಸ್ ಆಗಲಿದೆ.

‘ಕರಿಕಾಡ’ ಸಿನಿಮಾ ಟ್ರೇಲರ್:

‘ನಮ್ಮ ಸಿನಿಮಾ ಪ್ರೇಕ್ಷಕರನ್ನು ಮನರಂಜಿಸಿ, ಅಳಿಸುತ್ತದೆ. 5 ಭಾಷೆಯಲ್ಲಿ ಸಿನಿಮಾ ತಯಾರಾಗಿದೆ. ಕನ್ನಡ, ತಮಿಳು, ಮಲಯಾಳಂ ವರ್ಷನ್ ರೆಡಿ ಇದೆ. ತೆಲುಗು ಹಾಗೂ ಹಿಂದಿ ವರ್ಷಗ್​ಗೆ ಸೆನ್ಸಾರ್ ಆಗಬೇಕಿದೆ. ಹಾಗಾಗಿ 1 ವಾರದ ನಂತರ ಬಿಡುಗಡೆ ಮಾಡುತ್ತೇವೆ. ಕನ್ನಡ, ಮಲಯಾಳಂ ಮತ್ತು ತಮಿಳು ಭಾಷೆಯಲ್ಲಿ ಫೆ.6ರಂದು ರಿಲೀಸ್ ಆಗಲಿದೆ’ ಎಂದು ನಟ ಕಾಡ ನಟರಾಜ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಮನ ಸೆಳೆಯುತ್ತಿದೆ ‘ಕರಿಕಾಡ’, ಆಸಕ್ತ ತಂಡದ ಸಾಹಸಮಯ ಪ್ರಯತ್ನ

ಶಶಾಂಕ್ ಶೇಷಗಿರಿ ಮತ್ತು ಅತಿಶಯ್ ಜೈನ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಯಶ್ ಶೆಟ್ಟಿ, ವಿಜಯ್ ಚಂಡೂರ್, ಬೇಬಿ ರಿದ್ಧಿ, ರಶ್ಮಿ, ಬಲರಾಜ್ ವಾಡಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಳ್ಳಿ ಹುಡುಗಿಯಾಗಿ ನಾಯಕಿ ನಿರೀಕ್ಷಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಗ್ರಾಮೀಣ ಪರಿಸರದಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಟ್ರೇಲರ್ ನೋಡಿದರೆ ಮೇಕಿಂಗ್ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ