AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊನ್ನು ಕಾಯಿಲೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಕಾಜಲ್ ಕುಂದರ್ ನಾಯಕಿ

ಈವರೆಗೂ ಚಿತ್ರರಂಗದಲ್ಲಿ ಯಾರೂ ಹೇಳಿರದ ಒಂದು ವಿಷಯವನ್ನು ಇಟ್ಟುಕೊಂಡು ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಸಿದ್ಧವಾಗಿದೆ. ವಿಟಿಲೈಗೋ (vitiligo) ಅಥವಾ ತೊನ್ನು ಕಾಯಿಲೆ ಕುರಿತ ಕಥೆಯನ್ನು ಈ ಸಿನಿಮಾ ಮೂಲಕ ಹೇಳಲಾಗುತ್ತಿದೆ ಎಂಬುದು ವಿಶೇಷ. ಈ ಚಿತ್ರದಲ್ಲಿ ಕಾಜಲ್ ಕುಂದರ್​ ಅವರು ನಾಯಕಿಯಾಗಿ ನಟಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ತೊನ್ನು ಕಾಯಿಲೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಕಾಜಲ್ ಕುಂದರ್ ನಾಯಕಿ
ಕಾಜಲ್ ಕುಂದರ್​
ಮದನ್​ ಕುಮಾರ್​
|

Updated on: Dec 11, 2024 | 9:02 PM

Share

ಮಾಮೂಲಿ ಕಥಾಹಂದರವನ್ನು ಬಿಟ್ಟು ಬೇರೆ ರೀತಿಯ ಡಿಫರೆಂಟ್​ ವಿಷಯವನ್ನು ಬೆಳ್ಳಿತೆರೆಯಲ್ಲಿ ತೋರಿಸುವ ಪ್ರಯತ್ನಗಳು ಆಗಾಗ ನಡೆಯುತ್ತವೆ. ಅಂತಹ ಸಿನಿಮಾಗಳ ಸಾಲಿಗೆ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಕೂಡ ಸೇರ್ಪಡೆ ಆಗುತ್ತದೆ. ಯಾಕೆಂದರೆ, ಈ ಸಿನಿಮಾದಲ್ಲಿ ವಿಟಿಲೈಗೋ ಅಥವಾ ತೊನ್ನು ರೋಗದ ಬಗ್ಗೆ ಕಥೆಯನ್ನು ಹೇಳಲಾಗುತ್ತಿದೆ. ಈ ಸಿನಿಮಾ ಬಗ್ಗೆ ಚಿತ್ರತಂಡದವರು ಹಂತಹಂತವಾಗಿ ಕೆಲವು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಾಯಕಿ ಪಾತ್ರದ ಬಗ್ಗೆ ಈಗ ಮಾಹಿತಿ ಸಿಕ್ಕಿದೆ. ಖ್ಯಾತ ನಟಿ ಕಾಜಲ್ ಕುಂದರ್ ಅವರು vitiligo ಕುರಿತ ಕಹಾನಿ ಇರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ನಾಯಕಿಯಾಗಿದ್ದಾರೆ.

ಈ ಮೊದಲು ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಾದ ಕೌತುಕ ಮೂಡಿಸಿತ್ತು. ತೊನ್ನು ಕಾಯಿಲೆ ಬಗ್ಗೆ ಮೂಡಿಬರುತ್ತಿರುವ ಮೊದಲ ಕಮರ್ಷಿಯಲ್ ಸಿನಿಮಾ ಎಂಬ ಖ್ಯಾತಿ ಈ ಸಿನಿಮಾಗೆ ಇದೆ. ಇಂಥ ಒಂದು ಅಪರೂಪದ ಕಥಾಹಂದರದ ಸಿನಿಮಾಗೆ ಮಹೇಶ್ ಗೌಡ ಅವರು ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣವನ್ನೂ ಅವರೇ ಮಾಡಿದ್ದಾರೆ.

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾದ ಪಾತ್ರವರ್ಗಕ್ಕೆ ಕಾಜಲ್ ಕುಂದರ್ ಅವರು ಎಂಟ್ರಿ ನೀಡಿದ್ದಾರೆ. ಕಾಜಲ್ ಕುಂದರ್​ ಅವರು ಮಂಗಳೂರು ಮೂಲದವರು. ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಪಾತ್ರವನ್ನು ಪರಿಚಯಿಸುವಂತಹ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿದೆ. ಈ ಪೋಸ್ಟರ್​ ಕೂಡ ಒಂದು ಕಥೆಯನ್ನೇ ಹೇಳುವಂತಿದೆ.

ಇದನ್ನೂ ಓದಿ: ಡಿಸೆಂಬರ್​ 27ರಂದು ಬಿಡುಗಡೆ ಆಗಲಿದೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ

ಈ ಸಿನಿಮಾದಲ್ಲಿ ಕವಿತಾ ಎಂಬ ಪಾತ್ರವನ್ನು ಕಾಜಲ್ ಕುಂದರ್ ನಿಭಾಯಿಸಿದ್ದಾರೆ. ಮುಂಬೈನಲ್ಲಿ ವಾಸವಾಗಿರುವ ಕಾಜಲ್ ಕುಂದರ್ ಅವರು ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುತ್ತಾರೆ. ರಂಗಭೂಮಿಯಲ್ಲಿ ನಟಿಸಿದ ಅನುಭವ ಕೂಡ ಅವರಿಗೆ ಇದೆ. ಹಾಗಿದ್ದರೂ ಕೂಡ ಆಡಿಷನ್ ಮೂಲಕವೇ ಅವರು ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಆಯ್ಕೆ ಆದರು. ಇದು ಅವರ ಪಾಲಿಗೆ ಮೈಲಿಗಲ್ಲಿನ ಸಿನಿಮಾ ಆಗಲಿದೆ ಎಂದು ಚಿತ್ರತಂಡ ಅಭಿಪ್ರಾಯಪಟ್ಟಿದೆ.

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ‘ಹೊನ್ನುಡಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗಿದೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಸಿನಿಮಾದ ರಿಲೀಸ್​ ಡೇಟ್​ ಕೂಡ ಅನೌನ್ಸ್ ಆಗಲಿದೆ. ತೊನ್ನು ಸಮಸ್ಯೆಯಿಂದ ಲಕ್ಷಾಂತರ ಜನರು ಕೊರಗುತ್ತಿದ್ದಾರೆ. ಅಂಥವರ ಮಾನಸಿಕ ತೊಳಲಾಟಗಳ ಸುತ್ತ ಇರುವ ಕಥೆಯನ್ನು ಈ ಸಿನಿಮಾ ಮೂಲಕ ತೆರೆಗೆ ತರಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್