Kaatera Collection: ದರ್ಶನ್ ಅಬ್ಬರಕ್ಕೆ ಬಾಕ್ಸ್ ಆಫೀಸ್​ನಲ್ಲಿ ಬಿರುಗಾಳಿ; ‘ಕಾಟೇರ’ ಮೊದಲ ದಿನದ ಗಳಿಕೆ ಎಷ್ಟು?

Kaatera Movie First day Collection: ದರ್ಶನ್ ಅವರ ಸಿನಿಮಾಗಳು ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡೋಕೆ ಅವರು ಆಸಕ್ತಿ ತೋರಿಲ್ಲ. ಒಂದೊಮ್ಮೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ಬಿಡುಗಡೆ ಮಾಡಿದ್ದರೆ ಗಳಿಕೆ ಮತ್ತಷ್ಟು ಹೆಚ್ಚುತ್ತಿತ್ತು.

Kaatera Collection: ದರ್ಶನ್ ಅಬ್ಬರಕ್ಕೆ ಬಾಕ್ಸ್ ಆಫೀಸ್​ನಲ್ಲಿ ಬಿರುಗಾಳಿ; ‘ಕಾಟೇರ’ ಮೊದಲ ದಿನದ ಗಳಿಕೆ ಎಷ್ಟು?
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on:Dec 30, 2023 | 9:31 AM

ದರ್ಶನ್ ನಟನೆಯ, ತರುಣ್ ಸುಧೀರ್ (Tharun Sudhir) ನಿರ್ದೇಶನದ ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಿದೆ. ಈ ಚಿತ್ರ ಮೊದಲ ದಿನ ವಿಮರ್ಶಕರು ಹಾಗೂ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ. ಡಿಸೆಂಬರ್ 28ರ ಮಧ್ಯರಾತ್ರಿಯಿಂದಲೇ ಶೋಗಳು ಪ್ರದರ್ಶನ ಕಂಡಿವೆ. ಡಿಸೆಂಬರ್ 29ರ ಬಹುತೇಕ ಶೋಗಳು ಹೌಸ್​ಫುಲ್ ಆಗಿವೆ. ಹೀಗಾಗಿ, ಮೊದಲ ದಿನ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುವ ಬಗ್ಗೆ ಇಲ್ಲಿದೆ ಲೆಕ್ಕಾಚಾರ.

ನಿರ್ದೇಶಕ ತರುಣ್ ಸುಧೀರ್ ಹಾಗೂ ದರ್ಶನ್ ಅವರದ್ದು ಹಿಟ್ ಕಾಂಬಿನೇಷನ್. ತರುಣ್ ನಿರ್ದೇಶನದ ಮೊದಲ ಸಿನಿಮಾ ‘ಚೌಕ’ ಚಿತ್ರದಲ್ಲಿ ದರ್ಶನ್ ಪ್ರಮುಖ ಅತಿಥಿ ಪಾತ್ರ ಮಾಡಿದ್ದರು. ‘ರಾಬರ್ಟ್’ ಸಿನಿಮಾದಲ್ಲಿ ದರ್ಶನ್ ಹಾಗೂ ತರುಣ್ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ಹಿಟ್ ಆಗಿತ್ತು. ಇದಾದ ಬಳಿಕ ‘ಕಾಟೇರ’ ಸಿನಿಮಾದಲ್ಲಿ ಇಬ್ಬರೂ ಒಂದಾದರು. ಈ ಚಿತ್ರ ಮೊದಲ ದಿನ ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ 19.79 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ದರ್ಶನ್ ಅವರ ಸಿನಿಮಾಗಳು ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡೋಕೆ ಅವರು ಆಸಕ್ತಿ ತೋರಿಲ್ಲ. ಒಂದೊಮ್ಮೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ಬಿಡುಗಡೆ ಮಾಡಿದ್ದರೆ ಗಳಿಕೆ ಮತ್ತಷ್ಟು ಹೆಚ್ಚುತ್ತಿತ್ತು.

ಇದನ್ನೂ ಓದಿ: ‘ದರ್ಶನ್​ ಜತೆ ಸಿನಿಮಾ ಸಿಕ್ಕಾಗ ಇವಳು ನಿದ್ರೆಯೇ ಮಾಡಲಿಲ್ಲ’: ಮಗಳ ಬಗ್ಗೆ ಮಾಲಾಶ್ರಿ ಮಾತು

ದರ್ಶನ್ ಅವರು ‘ಕಾಟೇರ’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರು ತಮ್ಮ ಎಂದಿನ ಮ್ಯಾನರಿಸಂ ಬಿಟ್ಟು ಹೊಸ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜೊತೆ ಮಸ್ತ್ ಆ್ಯಕ್ಷನ್ ಕೂಡ ಇದೆ. ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಕೆಲಸ ಕೂಡ ಸಿನಿಮಾದಿಂದ ಆಗಿದೆ. ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ಮೊದಲ ಚಿತ್ರದಲ್ಲೇ ದೊಡ್ಡ ಯಶಸ್ಸು ಕಂಡಿದ್ದಾರೆ. ಕಲೆಕ್ಷನ್ ನೋಡಿ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರ ಮೊಗದಲ್ಲಿ ಮಂದಹಾಸ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Sat, 30 December 23

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು