Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನಕ್ಕೆ 37 ಕೋಟಿ ರೂಪಾಯಿ ಗಳಿಸಿದ ‘ಕಾಟೇರ’; ಜೋರಾಗಿದೆ ದರ್ಶನ್​ ಅಬ್ಬರ

ಭಾನುವಾರ (ಡಿಸೆಂಬರ್​ 31) ‘ಕಾಟೇರ’ ಸಿನಿಮಾಗೆ ಇನ್ನೂ ಹೆಚ್ಚಿನ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ದರ್ಶನ್​ ಅಭಿಮಾನಿಗಳು ಈ ಸಿನಿಮಾವನ್ನು ಸಖತ್​ ಮೆಚ್ಚಿಕೊಂಡಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇಂದು (ಡಿ.31) ಕಲೆಕ್ಷನ್​ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ.

2 ದಿನಕ್ಕೆ 37 ಕೋಟಿ ರೂಪಾಯಿ ಗಳಿಸಿದ ‘ಕಾಟೇರ’; ಜೋರಾಗಿದೆ ದರ್ಶನ್​ ಅಬ್ಬರ
ದರ್ಶನ್​
Follow us
ಮದನ್​ ಕುಮಾರ್​
|

Updated on: Dec 31, 2023 | 8:59 AM

ಈ ವರ್ಷದ ಕೊನೆಯಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ಮೂಡಿದೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ನಟನೆಯ ‘ಕಾಟೇರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಭರ್ಜರಿ ಓಪನಿಂಗ್​ ಪಡೆದುಕೊಂಡ ಈ ಸಿನಿಮಾ ಎರಡನೇ ದಿನ ಕೂಡ ಅಬ್ಬರಿಸಿದೆ. ಬಾಕ್ಸ್​ ಆಫೀಸ್​ನಲ್ಲಿ ತನ್ನ ನಾಗಾಲೋಟ ಮುಂದುವರಿಸಿದೆ. ಪ್ರತಿ ದಿನವೂ ಬಹುಕೋಟಿ ರೂಪಾಯಿ ಕಲೆಕ್ಷನ್​ (Kaatera Movie Collection) ಮಾಡುತ್ತಾ ಮುನ್ನುಗ್ಗುತ್ತಿದೆ. ಚಿತ್ರತಂಡದ ಆಪ್ತ ಮೂಲಗಳು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ಎರಡು ದಿನಕ್ಕೆ ‘ಕಾಟೇರ’ ಸಿನಿಮಾ (Kaatera Movie) ಗಳಿಸಿರುವುದು ಬರೋಬ್ಬರಿ 37.14 ಕೋಟಿ ರೂಪಾಯಿ.

ಮೊದಲ ದಿನವಾದ ಡಿಸೆಂಬರ್​ 29ರಂದು ‘ಕಾಟೇರ’ ಸಿನಿಮಾ 19.79 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಎರಡನೇ ದಿನ 17.35 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಎರಡು ದಿನಕ್ಕೆ ಚಿತ್ರದ ಒಟ್ಟು ಕಲೆಕ್ಷನ್​ 37.14 ಕೋಟಿ ರೂಪಾಯಿ ಆಗಿದೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಅಂತಿಮವಾಗಿ ಈ ಚಿತ್ರದ ಕಲೆಕ್ಷನ್​ ಎಷ್ಟಾಗಲಿದೆ ಎಂಬುದನ್ನು ಕಾದುನೋಡಬೇಕು.

ಭಾನುವಾರ (ಡಿಸೆಂಬರ್​ 31) ‘ಕಾಟೇರ’ ಸಿನಿಮಾಗೆ ಇನ್ನೂ ಹೆಚ್ಚಿನ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ದರ್ಶನ್​ ಅಭಿಮಾನಿಗಳು ಈ ಸಿನಿಮಾವನ್ನು ಸಖತ್​ ಮೆಚ್ಚಿಕೊಂಡಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಅಲ್ಲ. ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್​ ಆಗಿದೆ. ಹಾಗಿದ್ದರೂ ಕೂಡ ಈ ಪರಿ ಕಲೆಕ್ಷನ್​ ಮಾಡುತ್ತಿರುವುದು ಗಮನಾರ್ಹ ಬೆಳವಣಿಗೆ.

ಇದನ್ನೂ ಓದಿ: Kaatera Movie Review: ಸಂಘರ್ಷದ ಕಥೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವ ‘ಕಾಟೇರ’

ಪ್ರೇಕ್ಷಕರಿಗೆ ಥ್ಯಾಂಕ್ಸ್​ ಹೇಳಿದ ದರ್ಶನ್​: ‘ಕಾಟೇರ’ ಯಶಸ್ಸಿನಿಂದ ದರ್ಶನ್​ ಖುಷಿ ಆಗಿದ್ದಾರೆ. ಅದಕ್ಕಾಗಿ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ‘ಏನೆಂದು ನಾ ಹೇಳಲಿ.. ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ? ಧನ್ಯೋಸ್ಮಿ ಸೆಲೆಬ್ರಿಟಿಸ್. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆಯಿಂದ ನಮ್ಮ ಕಾಟೇರ ಚಿತ್ರತಂಡದ ಮನ ತುಂಬಿದೆ. ಮಾತುಗಳೇ ಬರುತ್ತಿಲ್ಲ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ