ನಾಲ್ಕನೇ ದಿನವೂ ‘ಕಾಟೇರ’ ಅಬ್ಬರ; 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?
Kaatera Movie Collection: ‘ಕಾಟೇರ’ ಸಿನಿಮಾದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಎರಡು ಶೇಡ್ನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಸಿನಿಮಾದಲ್ಲಿ ಕಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ.
ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Kaatera Movie) ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಮೊದಲ ಮೂರು ದಿನಕ್ಕೆ ಈ ಚಿತ್ರ 58.8 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ನಾಲ್ಕನೇ ದಿನವೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಸೋಮವಾರ (ಜನವರಿ 1) ಹಲವು ಕಡೆಗಳಲ್ಲಿ ಸರ್ಕಾರಿ ರಜೆ ಇತ್ತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ 75 ಕೋಟಿ ರೂಪಾಯಿ ಆಗಿದೆ. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನು ಬೇಕಿರುವುದು ಕೇವಲ 25 ಕೋಟಿ ರೂಪಾಯಿ ಮಾತ್ರ. ಈ ವಾರವೇ ಸಿನಿಮಾ ಅನಾಯಾಸವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.
‘ಕಾಟೇರ’ ಸಿನಿಮಾದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಎರಡು ಶೇಡ್ನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಸಿನಿಮಾದಲ್ಲಿ ಕಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಅನಗತ್ಯವಾಗಿ ಎಲ್ಲಿಯೂ ಫೈಟ್ ತುರುಕಿಲ್ಲ. ಜಾತಿಗಿಂತ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎನ್ನುವ ಅಂಶವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ.
ನಾಲ್ಕನೇ ದಿನವಾದ ಸೋಮವಾರ (ಜನವರಿ 1) ಸಿನಿಮಾ 18.20 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ದರ್ಶನ್ ಆಪ್ತರು ಹೇಳಿದ್ದಾರೆ. ಈ ಮೂಲಕ ಸಿನಿಮಾದ ಗಳಿಕೆ 77.6 ಕೋಟಿ ರೂಪಾಯಿ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಡಿ ಬಾಸ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ.
ಇದನ್ನೂ ಓದಿ: ‘ಕಾಟೇರ’ ಕಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ನಿರ್ಮಾಪಕ ರಾಕ್‌ಲೈನ್ ನೀಡಿದ್ರು ಡಿಫರೆಂಟ್ ಉತ್ತರ
ಕಲೆಕ್ಷನ್ ವಿಚಾರದಲ್ಲಿ ಸ್ಪಷ್ಟನೆ ನೀಡೋಕೆ ರಾಕ್‌ಲೈನ್ ವೆಂಕಟೇಶ್ ನಿರಾಕರಿಸಿದ್ದಾರೆ. ‘ನನ್ನ ಚಿತ್ರಗಳ ಬಜೆಟ್, ಲಾಭ, ನಷ್ಟದ ಕುರಿತು ಯಾರೊಂದಿಗೂ ಚರ್ಚಿಸಲ್ಲ. ಕಾಟೇರ ಕಲೆಕ್ಷನ್ ಬಗ್ಗೆ ಹಲವು ಸುದ್ದಿಗಳು ಹರಿದಾಡಿವೆ. ಅದೇ ರೀತಿ ಆಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸಿ ಸುಮ್ಮನೆ ಇದ್ದೇನೆ. ಒಳ್ಳೆಯ ಕಲೆಕ್ಷನ್ ಆಗುತ್ತಿದೆ. ನಾನು ಲೆಕ್ಕ ನೋಡೋಕೆ ಹೋಗಿಲ್ಲ. ನಾನು ಲೆಕ್ಕಾಚಾರ ಮಾಡೋದು ಕೊನೆಯಲ್ಲಿ’ ಎಂದಿದ್ದಾರೆ ಅವರು. ಇದರಿಂದ ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:13 am, Tue, 2 January 24