Koragajja Movie: ‘ಕೊರಗಜ್ಜ’ ಚಿತ್ರಕ್ಕೆ ಹಾಲಿವುಡ್​ ತಂತ್ರಜ್ಞರಿಂದ ಗ್ರಾಫಿಕ್ಸ್​ ಕೆಲಸ; 3 ಬಾರಿ ನಡೆಯಿತು ಕ್ಲೈಮ್ಯಾಕ್ಸ್​ ಚಿತ್ರೀಕರಣ

Koragajja: ‘ಕೊರಗಜ್ಜ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

Koragajja Movie: ‘ಕೊರಗಜ್ಜ’ ಚಿತ್ರಕ್ಕೆ ಹಾಲಿವುಡ್​ ತಂತ್ರಜ್ಞರಿಂದ ಗ್ರಾಫಿಕ್ಸ್​ ಕೆಲಸ; 3 ಬಾರಿ ನಡೆಯಿತು ಕ್ಲೈಮ್ಯಾಕ್ಸ್​ ಚಿತ್ರೀಕರಣ
ಕೊರಗಜ್ಜ ಸಿನಿಮಾ ಶೂಟಿಂಗ್​

Updated on: Jun 19, 2023 | 7:41 PM

ತುಳುನಾಡಿನ ದೈವಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಜನರಿಗೆ ಇದೆ. ‘ಕಾಂತಾರ’ ಸಿನಿಮಾದಲ್ಲಿ ಭೂತಕೋಲದ ಬಗ್ಗೆ ತೋರಿಸಿದ ಬಳಿಕ ಈ ಆಸಕ್ತಿ ಹೆಚ್ಚಾಯಿತು. ಕೊರಗಜ್ಜ (Koragajja) ದೇವರ ಕುರಿತು ಈಗ ಸಿನಿಮಾ ಬರುತ್ತಿರುವುದು ಗೊತ್ತೇ ಇದೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾದ ಬಗ್ಗೆ ಹೊಸ ಅಪ್​ಡೇಟ್​ ಕೇಳಿಬಂದಿದೆ. ಮೂರು ಬಾರಿ ಈ ಸಿನಿಮಾಗೆ ಕ್ಲೈಮ್ಯಾಕ್ಸ್​ ಚಿತ್ರೀಕರಣ ಮಾಡಲಾಗಿದೆ ಎಂಬುದು ವಿಶೇಷ. ಈ ರೀತಿ ಮರು ಚಿತ್ರೀಕರಣ ಮಾಡಿದ್ದಕ್ಕೂ ಕಾರಣ ಇದೆ. ಹಲವು ಪ್ರತಿಭಾವಂತ ಕಲಾವಿದರು ‘ಕೊರಗಜ್ಜ’ (Koragajja Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಅವರು ‘ಧೃತಿ ಕ್ರಿಯೇಷನ್ಸ್’ ಮತ್ತು ‘ಸಕ್ಸಸ್ ಫಿಲಂಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ಮಲಯಾಳಂ ಹಾಗೂ ತುಳು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಸುಧೀರ್ ಅತ್ತಾವರ್ ಅವರು ‘ಕೊರಗಜ್ಜ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಅದಾಗಲೇ ಚಿತ್ರೀಕರಣ ಮುಕ್ತಾಯ ಆಗಿತ್ತು. ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ಅವರು ಮೂರನೇ ಬಾರಿಗೆ ಕ್ಲೈಮ್ಯಾಕ್ಸ್ ದೃಶ್ಯವನ್ನು ಮರು ಚಿತ್ರೀಕರಿಸಿದ್ದಾರೆ. ಗಗನ‌ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಮರು ಚಿತ್ರೀಕರಣ ಮಾಡಲಾಗಿದೆ.

ಇದನ್ನೂ ಓದಿ: ಕೊರಗಜ್ಜ ಸಿನಿಮಾಕ್ಕೆ ಸತತ ಅಡ್ಡಿ: ಕ್ಷೇತ್ರ ನಿರ್ಮಾಣ, ಅದ್ಧೂರಿ ಕೋಲಸೇವೆ ಮಾಡಿಸಿದ ಚಿತ್ರತಂಡ

ಈ ವಿಶೇಷ ದೃಶ್ಯಗಳ ಚಿತ್ರೀಕರಣದ ಸಮಯದಲ್ಲಿ ‘ಆಂಟ್ ಮ್ಯಾನ್’, ‘ಟ್ರೂ ಸ್ಪಿರಿಟ್’, ‘ಅಕ್ವ‌ ಮ್ಯಾನ್’ ಮೊದಲಾದ ಹಾಲಿವುಡ್ ಚಿತ್ರಗಳ ವಿಎಫ್​ಎಕ್ಸ್​ ಮತ್ತು ಗ್ರಾಫಿಕ್ಸ್ ತಂತ್ರಜ್ಞರು ಭಾಗಿ ಆಗಿದ್ದರು ಎಂದು ‘ಕೊರಗಜ್ಜ’ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ. ಯಲಹಂಕದ ಬಳಿ ಇರುವ ‘ಸ್ಟುಡಿಯೋ 9’ನಲ್ಲಿ ಸತತ 5 ದಿನಗಳ ಕಾಲ ಹಿರಿಯ ನಟಿ ಶ್ರುತಿ, ನಾಯಕ ನಟ ಭರತ್ ಸೂರ್ಯ ಮತ್ತು ರಂಗಭೂಮಿ ಕಲಾವಿದ ಡುಂಡ್ಸಿ ಮುಂತಾದ ಕಲಾವಿದರು ಗ್ರೀನ್ ಮ್ಯಾಟ್ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: Kabir Bedi: ‘ಕೊರಗಜ್ಜ’ ಚಿತ್ರಕ್ಕೆ ಕನ್ನಡದಲ್ಲಿ ಡಬ್ಬಿಂಗ್ ಮಾಡಿದ ಬಾಲಿವುಡ್ ನಟ ಕಬೀರ್ ಬೇಡಿ

‘ಕೊರಗಜ್ಜ’ ಚಿತ್ರದ ಸಂಕಲನ ಕಾರ್ಯವನ್ನು ಸುರೇಶ್ ಅರಸ್ ಮತ್ತು ವಿದ್ಯಾಧರ್ ಶೆಟ್ಟಿ ಮಾಡುತ್ತಿದ್ದಾರೆ. ಸುಧೀರ್​-ಕೃಷ್ಣ‌ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಪವನ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಖ್ಯಾತ ನಟ ಕಬೀರ್ ಬೇಡಿ, ಹಿರಿಯ ಕಲಾವಿದೆ ಭವ್ಯಾ, ಸಂದೀಪ್ ಸೊಪರ್ಕರ್, ನವೀನ್ ಪಡಿಲ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶ್ರುತಿ ಅವರು ನಿರ್ವಹಿಸುತ್ತಿರುವ ಕೊರಗಜ್ಜನ ಸಾಕು ತಾಯಿ ಬೈರಕ್ಕೆ ಬೈಕಡ್ತಿಯ ದೇವಸ್ಥಾನವು ಉಡುಪಿ ಬಳಿ ಇದೆ. ಕೊರಗಜ್ಜ ಮತ್ತು ಸಾಕುತಾಯಿ ಬೈಕಡ್ತಿಯ ಸಂಬಂಧದ ಕುತೂಹಲಕಾರಿ ಅಂಶ ಕ್ಲೈಮ್ಯಾಕ್ಸ್ ನಲ್ಲಿ ಮೂಡಿಬರಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us