AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ಉಪೇಂದ್ರ ಹುಟ್ಟುಹಬ್ಬಕ್ಕೆ ಸಿಗಲಿದೆ ‘ಕಬ್ಜ’ ಟೀಸರ್​ ಗಿಫ್ಟ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ

Kabza Movie Teaser: ಸೆಪ್ಟೆಂಬರ್​ 18ರಂದು ‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಜನ್ಮದಿನ. ಆ ಪ್ರಯುಕ್ತ ಒಂದು ದಿನ ಮೊದಲೇ, ಅಂದರೆ ಸೆಪ್ಟೆಂಬರ್ 17ರ ಸಂಜೆ 5 ಗಂಟೆಗೆ ‘ಕಬ್ಜ’ ಟೀಸರ್ ಬಿಡುಗಡೆ ಆಗಲಿದೆ.

Upendra: ಉಪೇಂದ್ರ ಹುಟ್ಟುಹಬ್ಬಕ್ಕೆ ಸಿಗಲಿದೆ ‘ಕಬ್ಜ’ ಟೀಸರ್​ ಗಿಫ್ಟ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ
ಕಬ್ಜ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Sep 12, 2022 | 3:19 PM

Share

ಕನ್ನಡದ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಆರ್​. ಚಂದ್ರು (R Chandru) ನಿರ್ದೇಶನ ಮಾಡುತ್ತಿರುವ ‘ಕಬ್ಜ’ ಚಿತ್ರ ಕೂಡ ಅದೇ ರೀತಿ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಿಂದ ಸಿಗುವ ಪ್ರತಿಯೊಂದು ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಈಗ ‘ಕಬ್ಜ’ ಚಿತ್ರದ ಟೀಸರ್​ ರಿಲೀಸ್​ ಬಗ್ಗೆ ಹೊಸ ಮಾಹಿತಿ ಸಿಕ್ಕಿದೆ. ಉಪೇಂದ್ರ (Upendra) ಅವರ ಹುಟ್ಟುಹಬ್ಬದ ಪ್ರಯುಕ್ತ ಟೀಸರ್​ ರಿಲೀಸ್​ ಮಾಡಲು ತೀರ್ಮಾನಿಸಲಾಗಿದೆ. ‘ಕೆಜಿಎಫ್​ 2’, ‘ವಿಕ್ರಾಂತ್​ ರೋಣ’ ರೀತಿಯಲ್ಲಿ ‘ಕಬ್ಜ’ (Kabza Movie) ಕೂಡ ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತರಲಿದೆ ಎಂಬ ಭರವಸೆ ಅಭಿಮಾನಿಗಳಲ್ಲಿ ಇದೆ. ಈ ಸಿನಿಮಾದಲ್ಲಿ ಉಪೇಂದ್ರ ಜೊತೆ ಕಿಚ್ಚ ಸುದೀಪ್​ ಕೂಡ ನಟಿಸುತ್ತಿರುವುದು ವಿಶೇಷ. ಖ್ಯಾತ ನಟಿ ಶ್ರೀಯಾ ಶರಣ್ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಸೆಪ್ಟೆಂಬರ್​ 18ರಂದು ‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಜನ್ಮದಿನ. ಆ ಪ್ರಯುಕ್ತ ಒಂದು ದಿನ ಮೊದಲೇ, ಅಂದರೆ ಸೆಪ್ಟೆಂಬರ್ 17ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್​ ಇರುವ ಈ ಚಿತ್ರದ ಟೀಸರ್​ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಹೈಪ್​ ಪಡೆದುಕೊಂಡಿದೆ. ಉಪೇಂದ್ರ ಮತ್ತು ಸುದೀಪ್​ ಅವರಿಗೆ ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆ ಅಭಿಮಾನಿಗಳು ಇದ್ದಾರೆ. ಹಾಗಾಗಿ ದೇಶಾದ್ಯಂತ ಈ ಟೀಸರ್​ ಕುರಿತು ನಿರೀಕ್ಷೆ ಮೂಡಿದೆ. ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿಯೇ ಟೀಸರ್​ ಅನಾವರಣ ಆಗುತ್ತಿರುವುದರಿಂದ ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕ ಆಗಿರಲಿದೆ.

ಇದನ್ನೂ ಓದಿ
Image
Upendra: ‘ಈ ಕೆಲಸ ಮಾಡಿ, ನಮ್ಮ ಮನೆಗೆ ಬನ್ನಿ’; ಫ್ಯಾನ್ಸ್​ಗೆ ಆಹ್ವಾನ ನೀಡಿದ ಉಪೇಂದ್ರ: ಏನಿದು ಟಾಸ್ಕ್​?
Image
‘ಈ ಹಬ್ಬಕ್ಕೆ ಉಪ್ಪಿ ಇರಲೇಬೇಕು, ಅವ್ರು ಪೂಜೆ ಮಾಡಿದ್ರೆ ಮಾತ್ರ ನಮಗೆ ಸಂತೋಷ’: ಪ್ರಿಯಾಂಕಾ ಉಪೇಂದ್ರ
Image
ಸಿನಿಮಾ ಶೂಟಿಂಗ್ ವೇಳೆ ಉಪೇಂದ್ರ ಬ್ಯಾಟಿಂಗ್​-ಬೌಲಿಂಗ್; ಇಲ್ಲಿದೆ ವಿಡಿಯೋ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ

ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಸಿನಿಮಾದಲ್ಲಿ ಉಪೇಂದ್ರ ಅವರ ಗೆಟಪ್​ ಕೂಡ ಸಖತ್​ ಗಮನ ಸೆಳೆಯುತ್ತಿದೆ. ಬೃಹತ್​ ಸೆಟ್​ಗಳನ್ನು ನಿರ್ಮಿಸಿ ಶೂಟಿಂಗ್​ ಮಾಡಲಾಗಿದೆ. ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಸಿನಿಮಾದ ದೃಶ್ಯಗಳ ಝಲಕ್​ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯಲು ಟೀಸರ್​ಗಾಗಿ ನಿರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲೇ ಚಿತ್ರದ ರಿಲೀಸ್​ ಡೇಟ್​ ಅನೌನ್ಸ್​ ಮಾಡುವುದಾಗಿ ಆರ್​. ಚಂದ್ರು ತಿಳಿಸಿದ್ದಾರೆ. ‘ಕಬ್ಜ’ ಚಿತ್ರದ ಪಾತ್ರವರ್ಗದಲ್ಲಿ ಘಟಾನುಘಟಿ ಕಲಾವಿದರು ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:19 pm, Mon, 12 September 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು