ಆಸ್ಪತ್ರೆಗೆ ತೆರಳಿದ ನಟ ಉಪೇಂದ್ರ; ಅಭಿಮಾನಿಗಳಿಗೆ ಬೇಡ ಆತಂಕ

ಅವರು ನಾರ್ಮಲ್ ಚೆಕಪ್​ಗೋಸ್ಕರ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.  

ಆಸ್ಪತ್ರೆಗೆ ತೆರಳಿದ ನಟ ಉಪೇಂದ್ರ; ಅಭಿಮಾನಿಗಳಿಗೆ ಬೇಡ ಆತಂಕ
ಉಪೇಂದ್ರ
TV9kannada Web Team

| Edited By: Rajesh Duggumane

Nov 24, 2022 | 2:56 PM

ನಟ ಉಪೇಂದ್ರ (Upendra) ಅವರು ಇಂದು (ನವೆಂಬರ್ 24) ಬೆಂಗಳೂರಿನ ನೆಲಮಂಗಲದ ಹರ್ಷ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಆಸ್ಪತ್ರೆಗೆ ತೆರಳಿರುವ ವಿಚಾರ ಕೇಳಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ, ಆತಂಕಪಡುವ ಅವಶ್ಯಕತೆ ಇಲ್ಲ. ಅವರು ನಾರ್ಮಲ್ ಚೆಕಪ್​ಗೋಸ್ಕರ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಕಬ್ಜ’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಆರ್​. ಚಂದ್ರು ನಿರ್ದೇಶನದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿದೆ. ಈ ಮಧ್ಯೆ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂಬ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿತ್ತು. ಈಗ ಅವರು ಆರೋಗ್ಯವಾಗಿದ್ದಾರೆ ಎಂಬ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಉಪೇಂದ್ರ ಅವರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಡಸ್ಟ್ ಅಲರ್ಜಿ ಆಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಉಪ್ಪಿ ಆಸ್ಪತ್ರೆಗೆ ತೆರಳಿದ್ದಾರೆ. ಜತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪೇಂದ್ರ ಅವರು, ‘ನಾನು ಆರೋಗ್ಯವಾಗಿದ್ದೇನೆ. ಶೂಟಿಂಗ್ ಮುಂದುವರಿಸುತ್ತಿದ್ದೇನೆ’ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ನಟನೆಯ ‘ಉಗ್ರಾವತಾರ’ಕ್ಕೆ ಉಪ್ಪಿ ಸಾಥ್

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಈ ಚಿತ್ರಕ್ಕೆ ‘ಯುಐ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ಚಿತ್ರದ ಹಲವು ಪೋಸ್ಟರ್​ಗಳು ವೈರಲ್ ಆಗಿವೆ. ಉಪೇಂದ್ರ ನಿರ್ದೇಶನದ ಹಲವು ಸಿನಿಮಾಗಳು ಗಮನ ಸೆಳೆದಿವೆ. ಆ ಸಾಲಿಗೆ ‘ಯುಈ’ ಕೂಡ ಸೇರ್ಪಡೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada