ನಟ ಉಪೇಂದ್ರ (Upendra) ಅವರು ಇಂದು (ನವೆಂಬರ್ 24) ಬೆಂಗಳೂರಿನ ನೆಲಮಂಗಲದ ಹರ್ಷ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಆಸ್ಪತ್ರೆಗೆ ತೆರಳಿರುವ ವಿಚಾರ ಕೇಳಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ, ಆತಂಕಪಡುವ ಅವಶ್ಯಕತೆ ಇಲ್ಲ. ಅವರು ನಾರ್ಮಲ್ ಚೆಕಪ್ಗೋಸ್ಕರ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಕಬ್ಜ’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಆರ್. ಚಂದ್ರು ನಿರ್ದೇಶನದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿದೆ. ಈ ಮಧ್ಯೆ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂಬ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿತ್ತು. ಈಗ ಅವರು ಆರೋಗ್ಯವಾಗಿದ್ದಾರೆ ಎಂಬ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
ಉಪೇಂದ್ರ ಅವರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಡಸ್ಟ್ ಅಲರ್ಜಿ ಆಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಉಪ್ಪಿ ಆಸ್ಪತ್ರೆಗೆ ತೆರಳಿದ್ದಾರೆ. ಜತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪೇಂದ್ರ ಅವರು, ‘ನಾನು ಆರೋಗ್ಯವಾಗಿದ್ದೇನೆ. ಶೂಟಿಂಗ್ ಮುಂದುವರಿಸುತ್ತಿದ್ದೇನೆ’ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ನಟನೆಯ ‘ಉಗ್ರಾವತಾರ’ಕ್ಕೆ ಉಪ್ಪಿ ಸಾಥ್
ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಈ ಚಿತ್ರಕ್ಕೆ ‘ಯುಐ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ಚಿತ್ರದ ಹಲವು ಪೋಸ್ಟರ್ಗಳು ವೈರಲ್ ಆಗಿವೆ. ಉಪೇಂದ್ರ ನಿರ್ದೇಶನದ ಹಲವು ಸಿನಿಮಾಗಳು ಗಮನ ಸೆಳೆದಿವೆ. ಆ ಸಾಲಿಗೆ ‘ಯುಈ’ ಕೂಡ ಸೇರ್ಪಡೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
Published On - 2:35 pm, Thu, 24 November 22