AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ? ‘ಕಬ್ಜ’ ನೋಡಿ ಮೆಚ್ಚಿಕೊಂಡ ಪವರ್​ಸ್ಟಾರ್

ಮಾರ್ಚ್​ 16ರಂದು ಚಂದ್ರು, ಉಪೇಂದ್ರ, ಕೆಪಿ ಶ್ರೀಕಾಂತ್ ಮೊದಲಾದವರು ತಿರುಪತಿಗೆ ತೆರಳಿದ್ದರು. ದೇವರ ದರ್ಶನ ಪಡೆದ ನಂತರ ಚಂದ್ರು ಅವರು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದಾರೆ.

ಪವನ್ ಕಲ್ಯಾಣ್​ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ? ‘ಕಬ್ಜ’ ನೋಡಿ ಮೆಚ್ಚಿಕೊಂಡ ಪವರ್​ಸ್ಟಾರ್
ಆರ್​.ಚಂದ್ರು-ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on:Mar 17, 2023 | 8:49 AM

Share

ಆರ್​. ಚಂದ್ರು (R Chandru)  ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕಬ್ಜ’ ಚಿತ್ರದಿಂದ ಚಂದ್ರು ಖ್ಯಾತಿ ಸಾಕಷ್ಟು ಹೆಚ್ಚಿದೆ. ಈ ಚಿತ್ರ ಇಂದು (ಮಾರ್ಚ್​ 17) ರಿಲೀಸ್ ಆಗುತ್ತಿದೆ. ಮಲ್ಟಿ ಸ್ಟಾರರ್ ಸಿನಿಮಾ ಎಂಬ ಕಾರಣಕ್ಕೆ ಚಿತ್ರದ ಮೈಲೇಜ್ ಹೆಚ್ಚಿದೆ. ಟ್ರೇಲರ್ ಮೂಲಕ ಚಿತ್ರದ ಅದ್ದೂರಿ ಮೇಕಿಂಗ್ ಗಮನ ಸೆಳೆದಿದೆ. ‘ಕಬ್ಜ’ ರಿಲೀಸ್ (Kabzaa Movie) ಸಂದರ್ಭದಲ್ಲಿ ಚಂದ್ರು ಅವರು ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಟಾಲಿವುಡ್​ನ ಪವರ್​ ಸ್ಟಾರ್ ಪವನ್​ ಕಲ್ಯಾಣ್ ಚಿತ್ರಕ್ಕೆ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಮಾರ್ಚ್​ 16ರಂದು ಚಂದ್ರು, ಉಪೇಂದ್ರ, ಕೆಪಿ ಶ್ರೀಕಾಂತ್ ಮೊದಲಾದವರು ತಿರುಪತಿಗೆ ತೆರಳಿದ್ದರು. ದೇವರ ದರ್ಶನ ಪಡೆದ ನಂತರ ಚಂದ್ರು ಅವರು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಪವನ್ ಕಲ್ಯಾಣ್ ಅವರಿಗೆ ‘ಕಬ್ಜ’ ಚಿತ್ರವನ್ನು ಚಂದ್ರು ತೋರಿಸಿದ್ದಾರೆ. ಈ ಸಿನಿಮಾ ಪವನ್​ ಕಲ್ಯಾಣ್​​ಗೆ ಇಷ್ಟವಾಗಿದೆಯಂತೆ. ಈ ಕಾರಣಕ್ಕೆ ಚಂದ್ರು ಜೊತೆ ಸಿನಿಮಾ ಮಾಡೋಕೆ ಅವರು ಆಸಕ್ತಿ ತೋರಿಸಿದ್ದಾರೆ ಎಂದು ವರದಿ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಮಸ್ತ್ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿದೆ. ಪವನ್ ಕಲ್ಯಾಣ್ ಚಿತ್ರ ಕೂಡ ಮಾಸ್ ಆಗಿರುತ್ತದೆ. ಈ ಕಾರಣಕ್ಕೆ ಅವರಿಗೆ ‘ಕಬ್ಜ’ ಹೆಚ್ಚು ಇಷ್ಟವಾಗಿದೆ. ಈ ಎಲ್ಲಾ ಕಾರಣಕ್ಕೆ ಚಂದ್ರು ಜೊತೆ ಕೈ ಜೋಡಿಸುವ ಬಗ್ಗೆ ಅವರು ಆಸಕ್ತಿ ತೋರಿಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ತೆಲುಗು ನಟ ಪವನ್ ಕಲ್ಯಾಣ್ ಕಾರ್ ಹಿಂಬಾಲಿಸಿದ ಅನುಮಾನಾಸ್ಪದ ವ್ಯಕ್ತಿಗಳು: ಸ್ಟಾರ್ ಮನೆ ಎದುರು ನಡುರಸ್ತೆಯಲ್ಲಿ ಮಧ್ಯರಾತ್ರಿ ಜಗಳ

ತಮಿಳಿನ ‘ವಿನೋದಯಾ ಸೀತಂ’ ಚಿತ್ರದ ತೆಲುಗು ರಿಮೇಕ್​ನಲ್ಲಿ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಚಿತ್ರದ ಕೆಲಸಗಳು ಹಾಗೂ ರಾಜಕೀಯ ಕೆಲಸಗಳಲ್ಲಿ ಪವನ್ ಕಲ್ಯಾಣ್ ಬ್ಯುಸಿ ಇದ್ದಾರೆ. ಹೀಗಾಗಿ, ಚಂದ್ರು-ಪವನ್ ಕಲ್ಯಾಣ್ ಸಿನಿಮಾ ಸೆಟ್ಟೇರಲು ಸ್ವಲ್ಪ ಸಮಯ ಬೇಕಾಗಲಿದೆ. ಈ ಬಗ್ಗೆ ಪವನ್ ಕಲ್ಯಾಣ್ ಅಥವಾ ಚಂದ್ರು ಕಡೆಯಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸದ್ಯ ಚಂದ್ರು ಅವರ ಗಮನ ‘ಕಬ್ಜ’ ಚಿತ್ರದ ಮೇಲಿದೆ. ಉಪೇಂದ್ರ ಜೊತೆ, ಸುದೀಪ್, ಶಿವರಾಜ್​ಕುಮಾರ್ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:48 am, Fri, 17 March 23

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​