ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್

Kabzaa Movie Release Date: ಕಳೆದ ವರ್ಷ ಪುನೀತ್ ರಾಜ್​ಕುಮಾರ್​ ಬರ್ತ್​ಡೇ ದಿನ ‘ಜೇಮ್ಸ್​’ ಸಿನಿಮಾ ರಿಲೀಸ್ ಆಗಿತ್ತು. ಈ ವರ್ಷ ‘ಕಬ್ಜ’ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
ಕಬ್ಜ ಚಿತ್ರದಲ್ಲಿ ಉಪೇಂದ್ರ

Updated on: Jan 24, 2023 | 10:23 AM

ಆರ್​. ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ (Kabzaa Movie) ಹಲವು ಕಾರಣಗಳಿಂದ ಕುತೂಹಲ ಮೂಡಿಸಿದೆ. ಸಿನಿಮಾದ ಗುಣಮಟ್ಟ ಹೇಗಿರಲಿದೆ ಎಂಬುದು ಈಗಾಗಲೇ ಟೀಸರ್ ಮೂಲಕ ಗೊತ್ತಾಗಿದೆ. ಉಪೇಂದ್ರ ಹಾಗೂ ಸುದೀಪ್ (Sudeep) ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಕಾರಣದಿಂದಲೂ ಸಿನಿಮಾ ವಿಶೇಷ ಎನಿಸಿಕೊಂಡಿದೆ. ಈ ಮೊದಲು ರಿಲೀಸ್ ಆದ ಪೋಸ್ಟರ್​​ಗಳು ಅಭಿಮಾನಿಗಳಿಗೆ ಇಷ್ಟವಾಗಿದೆ. ಈಗ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇ ದಿನ (ಮಾರ್ಚ್​ 17) ‘ಕಬ್ಜ’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿದ್ದು ನೋವಿನ ಸಂಗತಿ. ಈ ನೋವನ್ನು ಮರೆಯೋದು ಅಭಿಮಾನಿಗಳಿಗೆ ಕಷ್ಟ ಆಗುತ್ತಿದೆ. ಅವರನ್ನು ಹಲವು ರೀತಿಯಲ್ಲಿ ನೆನಪು ಮಾಡಿಕೊಳ್ಳಲಾಗುತ್ತಿದೆ. ಕಳೆದ ವರ್ಷ ಅವರ ಬರ್ತ್​ಡೇ ದಿನ ‘ಜೇಮ್ಸ್​’ ಸಿನಿಮಾ ರಿಲೀಸ್ ಆಗಿತ್ತು. ಈ ವರ್ಷ ‘ಕಬ್ಜ’ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ. ಮಾರ್ಚ್​ 22ರಂದು ಯುಗಾದಿ ಇದೆ. ಈ ಕಾರಣದಿಂದಲೂ ‘ಕಬ್ಜ’ ಚಿತ್ರವನ್ನು ಮಾರ್ಚ್​ 17ಕ್ಕೆ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಟ್ರೇಲರ್ ಹಾಗೂ ಸಾಂಗ್​ಗಳು ಬಿಡುಗಡೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿತ್ತು. ಅನೇಕ ಚಿತ್ರಗಳು ಸೂಪರ್​ ಹಿಟ್ ಆದವು. ವಿಶ್ವ ಮಟ್ಟದಲ್ಲಿ ಕನ್ನಡದ ಸಿನಿಮಾಗಳು ಸದ್ದು ಮಾಡಿದವು. 2023ರಲ್ಲೂ ಇದೇ ಸ್ಥಿರತೆ ಕಾಪಾಡಿಕೊಳ್ಳುವ ಅಗತ್ಯತೆ ಇದೆ. ಹೀಗಾಗಿ, ‘ಕಬ್ಜ’ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇದೆ.

ಇದನ್ನೂ ಓದಿ: Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದೆ. ಚಿತ್ರದ ಟೀಸರ್ ನೋಡಿದ ಅನೇಕರು ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿಕೊಂಡಿದ್ದಾರೆ. ಈ ಕಮೆಂಟ್​ಗಳನ್ನು ಚಿತ್ರತಂಡ ಪಾಸಿಟಿವ್ ಆಗಿ ತೆಗೆದುಕೊಂಡಿದೆ. ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us