‘ಕಬ್ಜ ಸೀಕ್ವೆಲ್ ಕಥೆ ಕೇಳಿಲ್ಲ, ಭೈರತಿ ರಣಗಲ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇನೆ’: ಶಿವರಾಜ್​ಕುಮಾರ್

‘ಕಬ್ಜ’ ಸೀಕ್ವೆಲ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಇನ್ನೂ ‘ಕಬ್ಜ 2’ ಕಥೆ ಕೇಳಿಲ್ಲ.

‘ಕಬ್ಜ’ ಸಿನಿಮಾ (Kabzaa Movie) ಯಶಸ್ಸು ಕಂಡಿದೆ ಎಂದು ಚಿತ್ರದ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಹೇಳಿಕೊಂಡಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರ ಹೈಲೈಟ್ ಆಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಶಿವರಾಜ್​ಕುಮಾರ್ ಅವರಿಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಶಿವಣ್ಣ ಉತ್ತರ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಟ ಶಿವರಾಜ್​ಕುಮಾರ್ (Shivarajkumar) ಸುದ್ದಿಗೋಷ್ಠಿ ಕರೆದಿದ್ದರು. ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಹಾಗೂ ಪ್ರಚಾರದಲ್ಲಿ ಶಿವಣ್ಣ ಭಾಗಿಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ಕಬ್ಜ 2’ ಕಥೆ ಕೇಳಿಲ್ಲ

‘ಕಬ್ಜ’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗುತ್ತದೆ. ಅವರು ಬರೋದು ಒಂದೇ ದೃಶ್ಯದಲ್ಲಾದರೂ ಸಾಕಷ್ಟು ಕುತೂಹಲ ಮೂಡಿಸುತ್ತಾರೆ. ಸೀಕ್ವೆಲ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಇನ್ನೂ ‘ಕಬ್ಜ 2’ ಕಥೆ ಕೇಳಿಲ್ಲ. ಈ ವಿಚಾರವನ್ನು ಅವರು ರಿವೀಲ್ ಮಾಡಿದ್ದಾರೆ. ‘ನಾನಿನ್ನೂ ಕಬ್ಜ ಎರಡನೇ ಪಾರ್ಟ್​​ನ ಸ್ಟೋರಿ ಕೇಳಿಲ್ಲ’ ಎಂದಿದ್ದಾರೆ.

ಭೈರತಿ ರಣಗಲ್​ಗೆ ಹೆಚ್ಚು ಒತ್ತು

ನಿರ್ದೇಶಕ ನರ್ತನ್ ಹಾಗೂ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಮೂಡಿ ಬಂದ ‘ಮಫ್ತಿ’ ಸಿನಿಮಾ ಯಶಸ್ಸು ಕಂಡಿತ್ತು. ಈಗ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧಗೊಳ್ಳುತ್ತಿದೆ. ‘ಭೈರತಿ ರಣಗಲ್’ ಎಂದು ಹೆಸರು ಇಡಲಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ರಣಗಲ್ ಮೇಲೆ ಕಾನ್ಸಂಟ್ರೇಷನ್ ಜಾಸ್ತಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಪ್ರಚಾರಕ್ಕೆ ಬರ್ತಾರಾ ಶಿವಣ್ಣ? ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್ ಕೊಟ್ಟರು ಉತ್ತರ

‘ಘೋಸ್ಟ್’ ಬಗ್ಗೆ ಶಿವಣ್ಣ ಮಾತು

‘ಘೋಸ್ಟ್​ ಸಿನಿಮಾ ಕರ್ನಾಟಕ ಮಾತ್ರವಲ್ಲ ಈಡೀ ಭಾರತಕ್ಕೆ ಒಳ್ಳೆಯ ಸಿನಿಮಾ ಆಗತ್ತೆ. ಈ ವಿಚಾರದಲ್ಲಿ ಅತಿಆಸೆ ಪಡ್ತಾ ಇದಿನೋ ಗೊತ್ತಿಲ್ಲ’ ಎಂದಿದ್ದಾರೆ ಶಿವಣ್ಣ.

ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್

ಗೀತಾ ಶಿವರಾಜ್​ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರಿಗೆ ಶಿವಣ್ಣ ಬೆಂಬಲವಾಗಿ ನಿಂತಿದ್ದಾರೆ. ಅವರು ಕೂಡ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Mon, 1 May 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us