ಬಿಗ್ ಬಜೆಟ್ನಲ್ಲಿ ನಿರ್ಮಾಣ ಆಗಿರುವ ‘ಕಬ್ಜ’ (Kabzaa Movie) ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. 2023ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಈ ಚಿತ್ರ ಈಗಾಗಲೇ ಸಾಕಷ್ಟು ಹೈಪ್ ಸೃಷ್ಟಿ ಮಾಡಿದೆ. ಟೀಸರ್ ಮತ್ತು ಹಾಡುಗಳು ಧೂಳೆಬ್ಬಿಸಿವೆ. ಉಪೇಂದ್ರ (Upendra) ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾತರದಿಂದ ಕಾದಿದ್ದಾರೆ. ಮಾರ್ಚ್ 17ರಂದು ವಿಶ್ವಾದ್ಯಂತ ಈ ಸಿನಿಮಾ ರಿಲೀಸ್ ಆಗಲಿದೆ. ಈಗ ಟ್ರೇಲರ್ ನೋಡುವ ಸಮಯ ಬಂದಿದೆ. ಹೌದು, ಮಾರ್ಚ್ 4ರ ಶನಿವಾರ ಸಂಜೆ 5 ಗಂಟೆ 2 ನಿಮಿಷಕ್ಕೆ ‘ಕಬ್ಜ’ ಚಿತ್ರದ ಟ್ರೇಲರ್ (Kabzaa Movie Trailer) ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಖ್ಯಾತ ನಿರ್ದೇಶಕ ಆರ್. ಚಂದ್ರು ಅವರು ‘ಕಬ್ಜ’ ಸಿನಿಮಾವನ್ನು ಬಹಳ ಕಾಳಜಿ ವಹಿಸಿ ನಿರ್ದೇಶಿಸಿದ್ದಾರೆ. ತುಂಬ ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ದೇಶದ ಬೇರೆ ಬೇರೆ ನಗರಗಳಲ್ಲಿ ಹಾಡುಗಳನ್ನು ರಿಲೀಸ್ ಮಾಡಿ ಗಮನ ಸೆಳೆಯಲಾಗಿದೆ. ಈಗ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಟ್ರೇಲರ್ ಬರಲಿದೆ. ಉಪೇಂದ್ರ, ಕಿಚ್ಚ ಸುದೀಪ್, ಶ್ರೀಯಾ ಶರಣ್ ಮುಂತಾದವರು ನಟಿಸಿರುವ ಈ ಚಿತ್ರದ ಕ್ರೇಜ್ ಜೋರಾಗಿದೆ.
ಇದನ್ನೂ ಓದಿ: Tanya Hope: ಸುಡು ಬೇಸಿಗೆಯಲ್ಲೂ ‘ಕಬ್ಜ’ ಚಿತ್ರದ ‘ಚುಂ ಚುಂ ಚಳಿ..’ ಹಾಡಿಗೆ ಉಪೇಂದ್ರ ಅಭಿಮಾನಿಗಳು ಫಿದಾ
ತಾಂತ್ರಿಕ ಶ್ರೀಮಂತಿಕೆಯ ಕಾರಣದಿಂದಲೂ ‘ಕಬ್ಜ’ ಸಿನಿಮಾ ಕೌತುಕ ಮೂಡಿಸಿದೆ. ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತದಿಂದಾಗಿ ಈ ಚಿತ್ರಕ್ಕೆ ಹೆಚ್ಚಿನ ಮೆರುಗು ಬಂದಿದೆ. ಟೀಸರ್ ಮೂಲಕ ತಾಂತ್ರಿಕ ಗುಣಮಟ್ಟದ ಝಲಕ್ ಕಾಣಿಸಿದೆ. ಈಗ ಟ್ರೇಲರ್ನಲ್ಲಿ ಯಾವೆಲ್ಲ ಅಂಶಗಳು ರಿವೀಲ್ ಆಗಲಿವೆ ಎಂಬುದನ್ನು ತಿಳಿಯುವ ಸಮಯ ಬಂದಿದೆ.
ಇದನ್ನೂ ಓದಿ: ‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ..’; ಖಡಕ್ ಆಗಿ ‘ಕಬ್ಜ’ ಡೈಲಾಗ್ ಹೇಳಿದ ಉಪೇಂದ್ರ
‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಕನ್ನಡ ಚಿತ್ರರಂಗದ ಚಾರ್ಮ್ ಹೆಚ್ಚಿತು. ಈಗ ‘ಕಬ್ಜ’ ಚಿತ್ರ ಕೂಡ ಅದೇ ರೀತಿಯಲ್ಲಿ ಮೂಡಿಬಂದಿದೆ. ಅನೇಕರು ಈ ಸಿನಿಮಾದ ದೃಶ್ಯಗಳನ್ನು ‘ಕೆಜಿಎಫ್ 2’ ಚಿತ್ರಕ್ಕೆ ಹೋಲಿಸುತ್ತಿದ್ದಾರೆ. ಟ್ರೇಲರ್ ನೋಡಿದರೆ ಪ್ರೇಕ್ಷಕರಿಗೆ ಇನ್ನಷ್ಟು ಸ್ಪಷ್ಟತೆ ಸಿಗಲಿದೆ. ಹಾಗಾಗಿ ‘ಕಬ್ಜ’ ಟ್ರೇಲರ್ ಬಿಡುಗಡೆ ಯಾವಾಗ ಎಂದು ಸಿನಿಪ್ರಿಯರು ಕೇಳುತ್ತಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ.
ಇದನ್ನೂ ಓದಿ: Kabzaa Movie: ‘ಕಬ್ಜ’ ಆಡಿಯೋ ಬಿಡುಗಡೆ ಮಾಡಿದ ಗಣ್ಯರು; ಮಸ್ತ್ ಮನರಂಜನೆ ನೀಡಿದ ಶಿವಣ್ಣ, ಉಪ್ಪಿ
ಕೆಲವೇ ದಿನಗಳ ಹಿಂದೆ ಶಿಡ್ಲಘಟ್ಟದಲ್ಲಿ ‘ಕಬ್ಜ’ ಚಿತ್ರದ ‘ಚುಂ ಚುಂ ಚಳಿ ಚಳಿ..’ ಹಾಡನ್ನು ರಿಲೀಸ್ ಮಾಡಲಾಯಿತು. ಈ ಗೀತೆ 4.5 ಮಿಲಿಯನ್ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಅದಕ್ಕೂ ಮುನ್ನ ಬಿಡುಗಡೆ ಆಗಿದ್ದ ‘ನಮಾಮಿ..’ ಹಾಡು ಹಾಗೂ ‘ಕಬ್ಜ’ ಟೈಟಲ್ ಟ್ರ್ಯಾಕ್ ಕೂಡ ಸಹ ಜನಮೆಚ್ಚುಗೆ ಗಳಿಸಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.