AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಯಶ್ ಗುಣಗಾನ ಮಾಡಿದ ಕಾಜಲ್, ನಟಿ ಹೇಳಿದ್ದೇನು?

Kajal Aggarwal-Yash: ಯಶ್ ಜೊತೆ ಕೆಲಸ ಮಾಡಿದ ನಟ-ನಟಿಯರು ಬೇರೆ-ಬೇರೆ ಸಂದರ್ಶನಗಳಲ್ಲಿ ಮಾತನಾಡಿದ್ದು, ಯಶ್ ಅವರ ವ್ಯಕ್ತಿತ್ವ, ಅವರ ಕೆಲಸ ಮಾಡುವ ರೀತಿಯನ್ನು ಕೊಂಡಾಡಿದ್ದಾರೆ. ಇತ್ತೀಚೆಗಷ್ಟೆ ನಟಿಯರಾದ ಹುಮಾ ಖುರೇಷಿ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ ಇನ್ನೂ ಕೆಲವರು ಯಶ್ ಅವರ ಬಗ್ಗೆ ಮಾತನಾಡಿದ್ದರು, ಇದೀಗ ನಟಿ ಕಾಜಲ್ ಅಗರ್ವಾಲ್ ಯಶ್ ಅವರ ಬಗ್ಗೆ ಮಾತನಾಡಿದ್ದು, ಅವರ ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.

ನಟ ಯಶ್ ಗುಣಗಾನ ಮಾಡಿದ ಕಾಜಲ್, ನಟಿ ಹೇಳಿದ್ದೇನು?
Yash Kajol1
ಮಂಜುನಾಥ ಸಿ.
|

Updated on: Jul 04, 2026 | 7:54 PM

Share

ಯಶ್ (Yash) ನಟನೆಯ ಎರಡು ಸಿನಿಮಾಗಳು ಈ ವರ್ಷ ಬಿಡುಗಡೆ ಆಗಲಿವೆ. ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳು ಕೇಲವೇ ತಿಂಗಳ ಅಂತರದಲ್ಲಿ ಚಿತ್ರಮಂದಿರಕ್ಕೆ ಬರಲಿವೆ. ಎರಡೂ ಸಿನಿಮಾಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಸ್ಟಾರ್ ನಟ-ನಟಿಯರು ಕೆಲಸ ಮಾಡಿದ್ದಾರೆ. ಇವರುಗಳಲ್ಲಿ ಹಲವರು ಯಶ್ ಅವರ ಬಗ್ಗೆ ಬೇರೆ-ಬೇರೆ ಸಂದರ್ಶನಗಳಲ್ಲಿ ಮಾತನಾಡಿದ್ದು, ಯಶ್ ಅವರ ವ್ಯಕ್ತಿತ್ವ, ಅವರ ಕೆಲಸ ಮಾಡುವ ರೀತಿಯನ್ನು ಕೊಂಡಾಡಿದ್ದಾರೆ. ಇತ್ತೀಚೆಗಷ್ಟೆ ನಟಿಯರಾದ ಹುಮಾ ಖುರೇಷಿ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ ಇನ್ನೂ ಕೆಲವರು ಯಶ್ ಅವರ ಬಗ್ಗೆ ಮಾತನಾಡಿದ್ದರು, ಇದೀಗ ನಟಿ ಕಾಜಲ್ ಅಗರ್ವಾಲ್ ಯಶ್ ಅವರ ಬಗ್ಗೆ ಮಾತನಾಡಿದ್ದು, ಅವರ ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.

ಪ್ಯಾನ್ ಇಂಡಿಯಾ ನಟಿಯಾಗಿರುವ ಕಾಜಲ್ ಅಗರ್ವಾಲ್ ಅವರು ‘ರಾಮಾಯಣ’ ಸಿನಿಮಾನಲ್ಲಿ ಯಶ್ ಅವರೊಟ್ಟಿಗೆ ನಟಿಸಿದ್ದಾರೆ. ‘ರಾಮಾಯಣ’ ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದರೆ, ರಾವಣನ ಪತ್ನಿ ಮಂಡೋದರಿಯ ಪಾತ್ರದಲ್ಲಿ ಕಾಜಲ್ ಅಗರ್ವಾಲ್ ನಟಿಸಿದ್ದಾರೆ. ಇತ್ತೀಚೆಗೆ ನೀಡಿರುವ ಸಂದರ್ಶನವೊಂದರಲ್ಲಿ ‘ರಾಮಾಯಣ’ ಸಿನಿಮಾ ಮತ್ತು ಯಶ್ ಅವರೊಟ್ಟಿಗೆ ನಟಿಸಿದ ಅನುಭವದ ಬಗ್ಗೆ ನಟಿ ಕಾಜಲ್ ಅಗರ್ವಾಲ್ ಮಾತನಾಡಿದ್ದಾರೆ.

‘ಯಶ್ ಒಬ್ಬ ಅದ್ಭುತ ನಟ. ನಾನು ಯಾವಾಗಲೂ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದೇನೆ, ಮತ್ತು ಈ ನಿರ್ದಿಷ್ಟ ಸಿನಿಮಾನಲ್ಲಿ ಅವರೊಂದಿಗೆ ಕೆಲಸ ಮಾಡುವ ಅನುಭವ ಅದ್ಭುತವಾಗಿತ್ತು. ಯಶ್ ‘ರಾಮಾಯಣ’ ಸಿನಿಮಾಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಇದು ನಮಗೆಲ್ಲರಿಗೂ ನಿಜವಾಗಿಯೂ ರೋಮಾಂಚನಕಾರಿ ಅನುಭವ ಎಂದು ನಾನು ಭಾವಿಸುತ್ತೇನೆ. ಯಶ್ ಅತ್ಯಂತ ವೃತ್ತಿಪರರು ಮತ್ತು ಸಹಜವಾಗಿಯೇ ಅಪಾರ ಪ್ರತಿಭಾನ್ವಿತರು’ ಎಂದಿದ್ದಾರೆ.

ಇದನ್ನೂ ಓದಿ:ಯಶ್ ‘ಟಾಕ್ಸಿಕ್’ ವಿರುದ್ಧ ಸೆಣೆಸಲು ವಿವಾದ ಬಗೆಹರಿಸಿಕೊಂಡ ಶ್ರದ್ಧಾ ಕಪೂರ್

‘ರಾಮಾಯಣ’ ಸಿನಿಮಾ ಬಗ್ಗೆಯೂ ಮಾತನಾಡಿರುವ ನಟಿ ಕಾಜಲ್ ಅಗರ್ವಾಲ್, ‘ನಾವು ಮೊದಲ ಭಾಗವನ್ನು ಮಾತ್ರ ಚಿತ್ರೀಕರಿಸಿದ್ದೇವೆ ಮತ್ತು ಸಹಜವಾಗಿಯೇ, ಲಂಕೆಯ ಕತೆ ಅದರಲ್ಲಿ ಕಡಿಮೆ ಇದೆ. ನಾನು ಮಂಡೋದರಿ ಪಾತ್ರದಲ್ಲಿ ನಟಿಸಿದ್ದೇನೆ ಆದ್ದರಿಂದ ನನ್ನ ಪಾತ್ರವು ಸ್ಪಷ್ಟವಾಗಿ ಬಹಳ ಸೀಮಿತವಾಗಿದೆ. ಅದೇನೇ ಇದ್ದರೂ, ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ. ಪ್ಯಾನ್ ವರ್ಲ್ಡ ಸಿನಿಮಾ ಆಗಲಿರುವ ಒಂದು ಮಹಾನ್ ಕೃತಿಯ ಭಾಗವಾಗಿರುವುದು ನನ್ನ ಪಾಲಿಗೆ ಅದ್ಭುತ ಅನುಭವವಾಗಿದೆ. ಈ ಅವಕಾಶ ನನಗೆ ಸಿಕ್ಕಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ’ ಎಂದಿದ್ದಾರೆ ನಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ