AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

Rishab Shetty | Kantara Movie: ‘ಕಾಂತಾರ’ ಸಿನಿಮಾ ನೋಡಿರುವ ಕಮಲ್​ ಹಾಸನ್​ ಅವರು ರಿಷಬ್​ ಶೆಟ್ಟಿಗೆ ದೀರ್ಘ ಪತ್ರ ಬರೆದಿದ್ದಾರೆ. ದಿಗ್ಗಜ ನಟನಿಂದ ಈ ರೀತಿಯ ಮೆಚ್ಚುಗೆ ಪತ್ರ ಸಿಕ್ಕಿದ್ದಕ್ಕೆ ರಿಷಬ್​ ಖುಷಿ ಆಗಿದ್ದಾರೆ.

Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ
ರಿಷಬ್ ಶೆಟ್ಟಿ, ಕಮಲ್ ಹಾಸನ್ ಬರೆದ ಪತ್ರ, ಕಮಲ್ ಹಾಸನ್
TV9 Web
| Edited By: |

Updated on: Jan 13, 2023 | 8:19 PM

Share

ನಟ ಕಮಲ್​ ಹಾಸನ್​ (Kamal Haasan) ಅವರಿಗೆ ಕನ್ನಡ ಚಿತ್ರರಂಗದ ಜೊತೆ ಉತ್ತಮವಾದ ನಂಟು ಇದೆ. ಚಂದನವನದ ಹಲವು ಸೆಲೆಬ್ರಿಟಿಗಳ ಜೊತೆ ಅವರು ಒಡನಾಟ ಹೊಂದಿದ್ದಾರೆ. ಕನ್ನಡದ ಕೆಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಇಲ್ಲಿನ ಪ್ರೇಕ್ಷಕರಿಗೆ ಇಷ್ಟವಾಗಿದ್ದಾರೆ. ಈಗ ಕಮಲ್​ ಹಾಸನ್​ ಅವರು ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಮೆಚ್ಚುಗೆ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಅವರಿಗೆ ಹೆಚ್ಚು ಖುಷಿ ನೀಡಿದೆ. ಬ್ಲಾಕ್​ ಬಸ್ಟರ್​ ಆಗಿರುವ ಈ ಸಿನಿಮಾ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ಅವರು ರಿಷಬ್​ ಶೆಟ್ಟಿಗೆ ದೀರ್ಘ ಪತ್ರ ಬರೆದಿದ್ದಾರೆ. ‘ಕಾಂತಾರ’ ಕುರಿತು ತಮಗೆ ಏನೆಲ್ಲ ಅನಿಸಿದೆ ಎಂಬುದನ್ನು ಅವರು ಈ ಪತ್ರದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ರಿಷಬ್​ ಶೆಟ್ಟಿಗೆ (Rishab Shetty) ಒಂದು ಸಲಹೆಯನ್ನೂ ನೀಡಿದ್ದಾರೆ.

ಕಮಲ್​ ಹಾಸನ್​ ಅವರಿಂದ ಈ ರೀತಿಯ ಮೆಚ್ಚುಗೆ ಪತ್ರ ಸಿಕ್ಕಿದ್ದಕ್ಕೆ ರಿಷಬ್​ ಶೆಟ್ಟಿ ತುಂಬ ಸಂತಸಗೊಂಡಿದ್ದಾರೆ. ಆ ಪತ್ರದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಭಾರತೀಯ ಸಿನಿಮಾ ಲೋಕದ ದಿಗ್ಗಜ ನಟನಿಂದ ಈ ಪತ್ರ ಬಂದಿದೆ. ಕಮಲ್​ ಸರ್​ ನೀಡಿದ ಈ ಅಚ್ಚರಿಯ ಗಿಫ್ಟ್​ ನೋಡಿ ಅಪಾರ ಸಂತಸ ಆಗಿದೆ’ ಎಂದು ರಿಷಬ್​ ಶೆಟ್ಟಿ ಮಾಡಿರುವ ಈ ಪೋಸ್ಟ್​ ವೈರಲ್​ ಆಗಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಈ ಮೊದಲೇ ಕಮಲ್​ ಹಾಸನ್​ ಅವರು ‘ಕಾಂತಾರ’ ಸಿನಿಮಾ ನೋಡಿದ್ದರು. ಆಗಲೂ ಅವರು ಫೋನ್ ಮೂಲಕ ರಿಷಬ್​ ಶೆಟ್ಟಿಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ‘ಈಗಾಗಲೇ ನಾನು ಫೋನ್​ನಲ್ಲಿ ಹೇಳಿದಂತೆ ಕಾಂತಾರ ಸಿನಿಮಾದ ದಾಖಲೆಯನ್ನು ನಿಮ್ಮ ಮುಂದಿನ ಸಿನಿಮಾದಿಂದ ಮುರಿಯಿರಿ’ ಎಂದು ಸಲಹೆ ನೀಡುವ ಮೂಲಕ ಕಮಲ್​ ಹಾಸನ್​ ಅವರು ಪತ್ರವನ್ನು ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ತಲೆಯಲ್ಲಿ ಏನು ಓಡ್ತಿದೆ? ಪ್ರಮೋದ್​ ಶೆಟ್ಟಿ ಕೊಟ್ರು ಉತ್ತರ

ರಿಷಬ್​ ಶೆಟ್ಟಿ ಅವರ ಮುಂದಿನ ಸಿನಿಮಾ ಯಾವುದು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ‘ಕಾಂತಾರ’ ರಿಲೀಸ್​ ಆಗುವುದಕ್ಕೂ ಮುನ್ನ ಅವರು ಒಂದಷ್ಟು ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಅವುಗಳನ್ನು ಮುಂದುವರಿಸುತ್ತಾರೋ ಅಥವಾ ಬೇರೆ ಪ್ರಾಜೆಕ್ಟ್​ ಕೈಗೆತ್ತಿಕೊಳ್ಳುತ್ತಾರೋ ಎಂಬ ಕೌತುಕ ಅಭಿಮಾನಿಗಳಲ್ಲಿ ಇದೆ. ‘ಕಾಂತಾರ 2’ ಬರಲಿ ಎಂದು ಕೂಡ ಫ್ಯಾನ್ಸ್​ ಬಯಸುತ್ತಿದ್ದಾರೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಎಫೆಕ್ಟ್​; ರಿಷಬ್​ ಶೆಟ್ಟಿ ಜತೆ ಸಿನಿಮಾ ಮಾಡುವ ಹಂಬಲ ವ್ಯಕ್ತಪಡಿಸಿದ ಅನಿಲ್​ ಕಪೂರ್​

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿಯ ಸ್ಪರ್ಧೆಯಲ್ಲಿ ಭಾಗವಹಿಸಲು ‘ಕಾಂತಾರ’ ಚಿತ್ರ ಅರ್ಹತೆ ಪಡೆದಿದೆ. ಈ ಸುದ್ದಿಯನ್ನು ಇತ್ತೀಚೆಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಅಂತಿಮ ನಾಮಿನೇಷನ್​ಗೆ ಈ ಸಿನಿಮಾ ಎಂಟ್ರಿ ನೀಡಲಿ ಮತ್ತು ಆಸ್ಕರ್​ ಪ್ರಶಸ್ತಿ ಗೆಲ್ಲಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?