AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್

Kamal Haasan: ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ತಾತ್ಕಾಲಿಕವಾಗಿ ನಿಷೇಧಗೊಂಡಿದೆ. ಕಮಲ್ ಹಾಸನ್ ಅವರ ಹೇಳಿಕೆಗಳಿಂದಾಗಿ ಕನ್ನಡಿಗರಲ್ಲಿ ಅವರ ಬಗ್ಗೆ ಅಸಮಾಧಾನವಿದೆ. ಈ ಮಧ್ಯೆ ಅವರಿಗೆ ಬೆಂಗಳೂರಿಗರ ನೆನಪಾಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: Jun 05, 2025 | 7:00 AM

Share

ನಟ ಕಮಲ್ ಹಾಸನ್ (Kamal Haasan) ನಟನೆಯ ‘ಥಗ್ ಲೈಫ್’ ಸಿನಿಮಾ ಇಂದು (ಜೂನ್ 5) ರಿಲೀಸ್ ಆಗುತ್ತಿದೆ. ಈ ಚಿತ್ರ ಕರ್ನಾಟಕದಲ್ಲಿ ಈಗಾಗಲೇ ತಾತ್ಕಾಲಿಕವಾಗಿ ಬ್ಯಾನ್ ಆಗಿದೆ. ಕೋರ್ಟ್ ಮುಂದಿನ ಆದೇಶದವರೆಗೂ ಸಿನಿಮಾ ರಿಲೀಸ್ ಆಗುತ್ತಿಲ್ಲ. ಈ ಮಧ್ಯೆ ಕಮಲ್ ಹಾಸನ್ ಅವರಿಗೆ ಬೆಂಗಳೂರಿಗರ ನೆನಪಾಗಿದೆ. ಇದಕ್ಕೆ ಕಾರಣ ಆಗಿದ್ದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ಘಟನೆ. ಈ ಘಟನೆ ಬಗ್ಗೆ ಅವರು ಸಂತಾಪ ಸೂಚಿಸಿದ್ದಾರೆ.

‘ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ದುರಂತ ನಡೆದಿದೆ. ಈ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುಃಖದ ಕ್ಷಣದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ನಾನು ಮಿಡಿಯುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ’ ಎಂದು ಕಮಲ್ ಹಾಸನ್ ಪೋಸ್ಟ್ ಮಾಡಿದ್ದಾರೆ. ಈ ಎಕ್ಸ್ (ಟ್ವಿಟರ್) ಪೋಸ್ಟ್ ವೈರಲ್ ಆಗಿದೆ.

ಇದನ್ನೂ ಓದಿ
Image
ದಾಖಲೆ ಭರ್ಜರಿ ದಾಖಲೆ... ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB
Image
ಖುಷಿ ತಡೆಯಲಾರದೆ ತಣ್ಣೀರು ಸುರಿದು ನಮಸ್ಕಾರ ಹಾಕಿದ ಅಲ್ಲು ಅರ್ಜುನ್ ಮಗ
Image
RCB ಮ್ಯಾಚ್ ನೋಡುತ್ತಲೇ ಮುಗಿದಯೋಯ್ತು ವೈಷ್ಣವಿ ‘ಸಂಗೀತ್’ ಕಾರ್ಯಕ್ರಮ
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ

ಕಮಲ್ ಹಾಸನ್ ಅವರು ಸದ್ಯ ಕನ್ನಡಿಗರ ದ್ವೇಷ ಕಟ್ಟಿಕೊಂಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ ಎನ್ನುವ ಅಜ್ಞಾನದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಇಡೀ ಕರ್ನಾಟಕ ಒಗ್ಗಟ್ಟಾಗಿ ನಿಂತಿದ್ದು, ಸಿನಿಮಾ ರಿಲೀಸ್​ಗೆ ನಮ್ಮಲ್ಲಿ ಅವಕಾಶ ನೀಡಿಲ್ಲ. ಈ ಸಂದರ್ಭದಲ್ಲೇ ಕಮಲ್ ಹಾಸನ್ ಅವರು ಕಾಲ್ತುಳಿತದ ಘಟನೆ ಬಗ್ಗೆ ಪೋಸ್ಟ್ ಮಾಡಿರುವುದು ಚರ್ಚೆಗೆ ಕಾರಣ ಆಗಿದೆ. ಅನೇಕರು ಇದನ್ನು ಸಿಂಪತಿ ಗಿಟ್ಟಿಸಿಕೊಳ್ಳಲ ಮಾಡಿದ ಪೋಸ್ಟ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಕಮಲ್ ಹಾಸನ್ ಅವರು ಸಿನಿಮಾ ಬ್ಯಾನ್ ಮಧ್ಯೆಯೂ ಬೆಂಗಳೂರಿನ ಬಗ್ಗೆ ಈ ರೀತಿ ಪೋಸ್ಟ್ ಮಾಡಿದರಲ್ಲ ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಂದ ವಿರೋಧ, ಆ ಮೂರು ಪದ ಹೇಳಿ ತಮಿಳರ ಪುಸಲಾಯಿಸಲು ಕಮಲ್ ಹಾಸನ್ ಯತ್ನ

ಚಿನ್ನಸ್ವಾಮಿ ಘಟನೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿಜಯೋತ್ಸವ ಪರೇಡ್ ಆಯೋಜನೆ ಮಾಡಿತ್ತು. ಈ ವೇಳೆ ಆರ್​ಸಿಬಿ ಆಟಗಾರರನ್ನು ನೋಡಲು ಜನರು ಮುಗಿ ಬಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟರೆ, 47 ಮಂದಿ ಗಾಯಗೊಂಡಿದ್ದಾರೆ. ಅನೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊನೆ ಆಗದೆ ನಿಧನ ಹೊಂದಿದ್ದಾರೆ. ಆಸ್ಪತ್ರೆಯಲ್ಲಿ ಅನೇಕರು ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ