‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?

ವಿಜಯ್ ಕಾರ್ತಿಕೇಯ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರಕ್ಕೆ ವಿಲನ್ ಯಾರು ಎನ್ನುವ ಪ್ರಶ್ನೆ ಅಭಿಮಾನಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. 

‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?
ಸುದೀಪ್

Updated on: Nov 22, 2023 | 6:19 PM

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸುದೀಪ್ ಬರ್ತ್​​ ಡೇ ಪ್ರಯುಕ್ತ ಸೆಪ್ಟೆಂಬರ್ 2ರಂದು ಈ ಚಿತ್ರದ ಟೈಟಲ್ ಟೀಸರ್ ಅನಾವರಣಗೊಂಡಿದೆ. ಸುದೀಪ್ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿನಿಮಾ ಬಗ್ಗೆ ಹೊಸ ಸುದ್ದಿ ಒಂದು ಹರಿದಾಡುತ್ತಿದೆ. ಈ ಚಿತ್ರದಲ್ಲಿ ವಿಲನ್ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಸುದೀಪ್ ನಟನೆಯ 46ನೇ ಸಿನಿಮಾ. ಈ ಚಿತ್ರದ ಟೈಟಲ್ ಟೀಸರ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರಕ್ಕೆ ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಕಾರ್ತಿಕೇಯ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರಕ್ಕೆ ವಿಲನ್ ಯಾರು ಎನ್ನುವ ಪ್ರಶ್ನೆ ಅಭಿಮಾನಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.

ಎಂ ಕಾಮರಾಜ್ ಅವರು ಸುದೀಪ್ ಎದುರು ಅಬ್ಬರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ‘ಕಬ್ಜ’ ಸಿನಿಮಾದಲ್ಲಿ ಖಲೀದ್ ಹೆಸರಿನ ಗ್ಯಾಂಗ್​ಸ್ಟರ್ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದರು. ಅವರು ಬಾಡಿ ಬಿಲ್ಡರ್ ಕೂಡ ಹೌದು. ತಮಿಳು ಚಿತ್ರರಂಗದ ಮೂಲಕ ಬಣ್ಣದ ಬದುಕನ್ನು ಆರಂಭಿಸಿದರು. ‘ಐ’ ಸಿನಿಮಾದಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದರು.

‘ಕಬ್ಜ’ ಚಿತ್ರದಲ್ಲಿ ಸುದೀಪ್ ಅವರು ನಟಿಸಿದ್ದರು. ಅವರು ಖಲೀದ್ ಪಾತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದ ಸುದೀಪ್ ಅವರೇ ಕಾಮರಾಜ್​ ಅವರ ಹೆಸರನ್ನು ಸೂಚಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Kichcha 46: ‘ಕಿಚ್ಚ 46’ ಚಿತ್ರಕ್ಕೆ ‘ಮ್ಯಾಕ್ಸ್’ ಶೀರ್ಷಿಕೆ; ಮತ್ತೆ ಖಾಕಿ ತೊಟ್ಟ ಸುದೀಪ್?

ಸದ್ಯ ‘ಮ್ಯಾಕ್ಸ್’ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ‘ಮ್ಯಾಕ್ಸ್’ ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಎಲ್ಲಾ ಭಾಷೆಗಳಿಗೆ ಹೊಂದಾಣಿಕೆ ಆಗುವಂತೆ ಶೀರ್ಷಿಕೆ ಫಿಕ್ಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:36 pm, Wed, 22 November 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us