ಡಿಸೆಂಬರ್ ತಿಂಗಳು ಬಾಕ್ಸ್ ಆಫೀಸ್ನಲ್ಲಿ (Box Office) ಮದಗಜಗಳ ಹೋರಾಟ ನಡೆಯಲಿದೆ. ಪ್ರಭಾಸ್ ನಟನೆಯ ‘ಸಲಾರ್’, ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾಗಳು ಡಿಸೆಂಬರ್ ತಿಂಗಳಾಂತ್ಯಕ್ಕೆ ಬಿಡುಗಡೆ ಆಗಿ ಬಾಕ್ಸ್ ಆಫೀಸ್ ಅನ್ನು ದೂಳೆಬ್ಬಿಸಲಿವೆ. ಇದರ ನಡುವೆ ದರ್ಶನ್ ಅವರ ‘ಕಾಟೇರ’ ಸಿನಿಮಾ ಸಹ ಡಿಸೆಂಬರ್ ಕಡೆಯ ವಾರದಲ್ಲಿಯೇ ತೆರೆಗೆ ಬರುವ ಮೂಲಕ ಅದೂ ಸಹ ಬಾಕ್ಸ್ ಆಫೀಸ್ಕಾದಾಟಕ್ಕೆ ಇನ್ನಷ್ಟು ರೋಚಕತೆ ತುಂಬಿದೆ. ಇದೀಗ ದೊಡ್ಡವರ ಕಾದಾಟದಲ್ಲಿ ಕೆಲವು ಬಜೆಟ್ ಗಾತ್ರದಲ್ಲಿ ಸಣ್ಣ ಸಿನಿಮಾಗಳು ಸಿನಿಮಾಗಳು ಸಹ ಸೇರಿಕೊಂಡಿವೆ.
ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ “ಕಾಣೆಯಾಗಿದ್ದಾಳೆ” ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಈ ಸಿನಿಮಾ ಡಿಸೆಂಬರ್ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಸಿನಿಮಾದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ನೈಜ ಕತೆಯನ್ನು ಆಧಾರವಾಗಿಟ್ಟುಕೊಂಡು ಅದಕ್ಕೆ ತುಸು ಕಾಲ್ಪನಿಕತೆ ಬೆರೆಸಿ ಕಟ್ಟಲಾಗಿರುವ ಕತೆಯನ್ನು ಆಧರಿಸಿದ ಸಿನಿಮಾ. ಸಾಮಾಜಿಕ ಜಾಲತಾಣಗಳನ್ನು ಹೆಣ್ಣುಮಕ್ಕಳು ನಿಯಮಿತವಾಗಿ ಬಳಸಬೇಕು, ಇಲ್ಲದಿದ್ದರೆ ಅಪಾಯ ಖಂಡಿತ ಎಂಬ ವಿಷಯವೇ ಈ ಸಿನಿಮಾದ ಕತೆಯ ಆಶಯ. ಸಾಮಾಜಿಕ ಜಾಲತಾಣ ಹೆಚ್ಚಾಗಿ ಬಳಸುವ ಹೆಣ್ಣುಮಕ್ಕಳಿಗೆ ಸಿನಿಮಾ ಮೂಲಕ ನೀತಿ ಪಾಠ ಹೇಳಲು ಮುಂದಾಗಿದ್ದಾರೆ ನಿರ್ದೇಶಕರು. ಸಿನಿಮಾದ ಚಿತ್ರೀಕರಣವನ್ನು ಕರ್ನಾಟಕದ ಹಲವು ಸುಂದರ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿರುವುದಾಗಿ ಸಿನಿಮಾದ ನಿರ್ದೇಶಕ ಆರ್ ಕೆ ಹೇಳಿದ್ದಾರೆ.
ಇದನ್ನೂ ಓದಿ:‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್ಗಳಿಗೆ ಸೆಡ್ಡು ಹೊಡೆದ ದರ್ಶನ್
ಇದು ನನ್ನ ಮೊದಲ ಚಿತ್ರ. ಕಾಲೇಜು ಹುಡುಗನ ಪಾತ್ರ ನನ್ನದು. ತಾಯಿ – ಮಗನ ಬಾಂಧವ್ಯದ ಸನ್ನಿವೇಶಗಳು ಚಿತ್ರದ ಹೈಲೆಟ್ ಎಂದರು ನಾಯಕ ವಿನಯ್ ಕಾರ್ತಿ ಹೇಳಿದರಎ, ಹಳ್ಳಿಯಿಂದ ನಗರಕ್ಕೆ ಬರುವ ಹುಡುಗಿಯ ಪಾತ್ರ ನನ್ನದು. ನಿರ್ದೇಶಕರು ತುಂಬಾ ಕತೆಯನ್ನು ಮಾಡಿಕೊಂಡಿದ್ದಾರೆ ಸಿನಿಮಾ ಸಹ ಚೆನ್ನಾಗಿ ಮೂಡಿ ಬಂದಿದೆ ಎಂದರು ನಾಯಕಿ ಪಾತ್ರದಲ್ಲಿ ನಟಿಸಿರುವ ಕೀರ್ತಿ ಭಟ್. ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು ಮತ್ತೊಬ್ಬ ನಾಯಕಿ ಪಾತ್ರದಲ್ಲಿ ಚಿತ್ರದ ಮತ್ತೊಬ್ಬ ಹರ್ಷಿತಾ ಕಲಿಂಗಲ್ ನಟಿಸಿದ್ದಾರೆ.
ಸಿನಿಮಾದಲ್ಲಿ ಕೆಲವು ಹಿರಿಯ ನಟ-ನಟಿಯರು ಸಹ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ನಟಿಸಿರುವ ಹಿರಿಯ ನಟಿ ಗಿರಿಜಾ ಲೋಕೇಶ್ ಮಾತನಾಡಿ, ‘‘ನಾನು ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಯಶೋಧ ಹಾಗೂ ಕೃಷ್ಣನ ಪ್ರೀತಿ ತರಹ ಈ ತಾಯಿ – ಮಗನ ಪ್ರೀತಿ ಎಂದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ