ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್​ಗಿಂದು ಮುಖ್ಯ ದಿನ; ಆದೇಶ ಪ್ರಕಟ ಎಷ್ಟು ಗಂಟೆಗೆ?

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 4.5 ತಿಂಗಳಿಂದ ಜೈಲಿನಲ್ಲಿದ್ದಾರೆ. ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಅವರು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ವಕೀಲರ ವಾದಗಳ ನಂತರ, ಹೈಕೋರ್ಟ್ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಜಾಮೀನು ಅನುಮೋದನೆಯಾದರೆ, ಅವರು ನೇರವಾಗಿ ಆಸ್ಪತ್ರೆಗೆ ಹೋಗುವ ಸಾಧ್ಯತೆ ಇದೆ.

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್​ಗಿಂದು ಮುಖ್ಯ ದಿನ; ಆದೇಶ ಪ್ರಕಟ ಎಷ್ಟು ಗಂಟೆಗೆ?
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: Oct 30, 2024 | 6:57 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕೂವರೆ ತಿಂಗಳುಗಳೇ ಕಳೆದಿವೆ. ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಅವರ ವಿರುದ್ಧವೇ ಎಲ್ಲಾ ಸಾಕ್ಷ್ಯಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಯಿತು. ಚಾರ್ಜ್​ಶೀಟ್ ಸಲ್ಲಿಕೆ ಆದ ಬಳಿಕವೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಕೆಳಹಂತದ ಕೋರ್ಟ್​ನಲ್ಲಿ ಜಾಮೀನು ವಜಾ ಆಗಿತ್ತು. ಈಗ ಹೈಕೋರ್ಟ್​ನಲ್ಲಿ ಅವರು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ.

ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ವಾದ ಮಾಡಿದರು. ಸಿವಿ ನಾಗೇಶ್ ಅವರು ದರ್ಶನ್​ಗೆ ಇರುವ ಬೆನ್ನು ನೋವು ಹಾಗೂ ಅದರ ತೀವ್ರತೆಯನ್ನು ಕೋರ್ಟ್​ಗೆ ಮನವರಿಕೆ ಮಾಡಿದರು. ‘ಬೆನ್ನು ನೋವಿಗೆ ಸಾಮಾನ್ಯ ಚಿಕಿತ್ಸೆ ಸಾಕಾಗುವುದಿಲ್ಲ ಮತ್ತು ಅವರು ಶಸ್ತ್ರಚಿಕಿತ್ಸೆಯನ್ನೇ ಮಾಡಿಸಿಕೊಳ್ಳಬೇಕು. ಹೀಗಾಗಿ ಜಾಮೀನು ನೀಡಲೇಬೇಕು’ ಎಂದು ಸಿವಿ ನಾಗೇಶ್ ಕೋರ್ಟ್ ಬಳಿ ಕೋರಿದರು.

ಅತ್ತ ಪ್ರಸನ್ನ ಕುಮಾರ್ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ‘ಈಗಿನ ವರದಿಯಲ್ಲಿ ದರ್ಶನ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿಯೇ ಇದೆ. ಮುಂದೊಂದು ದಿನ ಸಮಸ್ಯೆ ಬರಹುದು ಎಂದಿದೆ. ಅಲ್ಲದೆ, ದರ್ಶನ್​ಗೆ ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತದೆ ಎಂಬ ಬಗ್ಗೆ ಉಲ್ಲೇಖ ಇಲ್ಲ’ ಎಂದು ವಾದ ಮಾಡಿದರು. ಇದನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದರು. ‘ಆರೋಗ್ಯ ಪ್ರತಿಯೊಬ್ಬ ಖೈದಿಯ ಹಕ್ಕು’ ಎಂದಿದ್ದಾರೆ.

ದರ್ಶನ್ ಅವರಿಗೆ ಕುಳಿತುಕೊಳ್ಳಲು ಹಾಗೂ ನಿಂತುಕೊಳ್ಳಲೂ ಆಗದ ಸ್ಥಿತಿ ನಿರ್ಮಾಣ ಆಗಿದೆ. ಅವರ ಆರೋಗ್ಯ ದಿನಕಳೆದಂತೆ ಹದಗೆಡುತ್ತಿದೆ ಎನ್ನಲಾಗಿದೆ. ಈಗಾಗಲೇ ಅವರ ಕಾಲು ಮರುಗಟ್ಟುವಿಕೆ ಆರಂಭ ಆಗಿದೆಯಂತೆ. ಇದು ಹೀಗೆ ಮುಂದುವರಿದರೆ ದರ್ಶನ್​ಗೆ ಅಪಾಯ ಕಟ್ಟಿಟ್ಟ ಬುಟ್ಟಿ ಎನ್ನಲಾಗಿದೆ.

ಇದನ್ನೂ ಓದಿ: ‘ಅರಸು’ ಚಿತ್ರದಲ್ಲಿ ನಟಿಸಲು ಎರಡು ಷರತ್ತು ಹಾಕಿದ್ದ ದರ್ಶನ್; ಇದರ ಹಿಂದಿತ್ತು ಒಳ್ಳೆಯ ಉದ್ದೇಶ

ಮಧ್ಯಾಹ್ನ 2.30ಕ್ಕೆ ದರ್ಶನ್​ ಪ್ರಕರಣದಲ್ಲಿ ಆದೇಶ ಹೊರ ಬರಲಿದೆ. ದರ್ಶನ್​ಗೆ ಜಾಮೀನು ಸಿಕ್ಕರೆ ಫ್ಯಾನ್ಸ್ ಇದನ್ನು ಸಂಭ್ರಮಿಸಲಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆಯುವುದರಿಂದ ಅವರು ನೇರವಾಗಿ ಆಸ್ಪತ್ರೆಗೆ ತೆರಳುವ ಸಾಧ್ಯತೆ ಇದೆ. ಅಭಿಮಾನಿಗಳ ಸಂಭ್ರಮಾಚರಣೆಯಲ್ಲಿ ಅವರು ಭಾಗಿ ಆಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.