AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹೀರೋಗಾಗಿ ಬಂಡೀಪುರದಲ್ಲಿ ರಾತ್ರಿ ಸಫಾರಿ! ಕಾನೂನುಬಾಹಿರ ವಿಡಿಯೋ ವೈರಲ್

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. ಹಾಗಾದ್ರೆ, ಜನಸಾಮಾನ್ಯರಿಗೊಂದು ನ್ಯಾಯ, ಸೆಲೆಬ್ರಿಟಿಗಳಿಗೊಂದು […]

ಸಿನಿಮಾ ಹೀರೋಗಾಗಿ ಬಂಡೀಪುರದಲ್ಲಿ ರಾತ್ರಿ ಸಫಾರಿ! ಕಾನೂನುಬಾಹಿರ ವಿಡಿಯೋ ವೈರಲ್
KUSHAL V
| Edited By: ಸಾಧು ಶ್ರೀನಾಥ್​|

Updated on:Oct 23, 2020 | 11:24 AM

Share

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. ಹಾಗಾದ್ರೆ, ಜನಸಾಮಾನ್ಯರಿಗೊಂದು ನ್ಯಾಯ, ಸೆಲೆಬ್ರಿಟಿಗಳಿಗೊಂದು ನ್ಯಾಯಾನಾ ಎಂಬ ಮಾತು ಕೇಳಿಬಂದಿದೆ.

ಬಜಾರ್ ಸಿನಿಮಾ ಖ್ಯಾತಿಯ ಧನ್ವೀರ್​ ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿಕೊಂಡಿದ್ದಾರೆ. ಆದರೆ, ರಾತ್ರಿ ವೇಳೆ ಸಫಾರಿ ಮಾಡುವುದು ಕಾನೂನುಬಾಹಿರ. ಜನಸಾಮಾನ್ಯರು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಹಾಕುತ್ತಾರೆ. ಆದರೆ, ಸೆಲೆಬ್ರಿಟಿಗಳಿಗೆ ಮಾತ್ರ ರೆಡ್ ಕಾರ್ಪೆಟ್ ಹಾಕಿ ಸಫಾರಿ ನಡೆಸಲಾಗುತ್ತಿದೆ.

ಪ್ರಾಣಿಗಳಿಗೆ ತೊಂದರೆಯಾಗಬಾರದು ಎಂದು ಸಫಾರಿಗೆ ಸಮಯ ನಿಗದಿ ಮಾಡಲಾಗಿದೆ. ಆದರೆ ಸೆಲೆಬ್ರಿಟಿಗಳಿಗಾಗಿ ಇಷ್ಟ ಬಂದಂತೆ ರಾತ್ರಿ ವೇಳೆ ಸಫಾರಿ ನಡೆಸುತ್ತಿದ್ದಾರೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಮ್ಮ ಸಿಟ್ಟು ಹೊರಹಾಕಿದ್ದಾರೆ. ಇನ್ನು ನಟನ ವಿಡಿಯೋ ಬಗ್ಗೆ ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಧನ್ವೀರ್​ ತಮ್ಮ ರಾತ್ರಿ ಸಫಾರಿ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Published On - 10:50 am, Fri, 23 October 20

Follow Us
KUSHAL V
KUSHAL V
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು