Duniya Vijay: ‘ಅಮ್ಮ ಮತ್ತೆ ಹುಟ್ಟಿ ಬಾ’; ತಾಯಿಯನ್ನು ಕಳೆದುಕೊಂಡ ದುನಿಯಾ ವಿಜಯ್​

| Updated By: ರಾಜೇಶ್ ದುಗ್ಗುಮನೆ

Updated on: Jul 08, 2021 | 4:55 PM

Duniya Vijay Mother Death: ಇತ್ತೀಚೆಗೆ ಕೊವಿಡ್​​ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ನಾರಾಯಣಮ್ಮ ಆರೋಗ್ಯ ಗಂಭೀರವಾಗಿತ್ತು.

Duniya Vijay: ‘ಅಮ್ಮ ಮತ್ತೆ ಹುಟ್ಟಿ ಬಾ’; ತಾಯಿಯನ್ನು ಕಳೆದುಕೊಂಡ ದುನಿಯಾ ವಿಜಯ್​
ದುನಿಯಾ ವಿಜಯ್ ತಾಯಿ
Follow us on

ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯ ಇತ್ತೀಚೆಗೆ ಗಂಭೀರವಾಗಿತ್ತು. ಹೀಗಾಗಿ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಈಗ ನಾರಾಯಣಮ್ಮಅವರು ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ದುನಿಯಾ ವಿಜಯ್​ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಕೊವಿಡ್​​ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ನಾರಾಯಣಮ್ಮ ಆರೋಗ್ಯ ಗಂಭೀರವಾಗಿತ್ತು. ಈಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆನೇಕಲ್ ತಾಲೂಕಿನ ಕುಂಬಾರ ಹಳ್ಳಿಯಲ್ಲಿ ನಾಳೆ ಮಧ್ಯಾಹ್ನ ದುನಿಯಾ ವಿಜಿ ತಾಯಿ ಅಂತ್ಯಕ್ರಿಯೆ ನಡೆಯಲಿದೆ.

ಇತ್ತೀಚೆಗೆ ಟಿವಿ9 ಜತೆ ಮಾತನಾಡಿದ್ದ ವಿಜಯ್​, ‘ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ಪ್ರತಿದಿನ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ’ ಎಂದು ದುನಿಯಾ ವಿಜಯ್ ಹೇಳಿದ್ದರು. ಆದರೆ, ಹಾಗಾಗಲೇ ಇಲ್ಲ.

ಎರಡು ತಿಂಗಳ ಹಿಂದೆ ದುನಿಯಾ ವಿಜಯ್ ತಂದೆ-ತಾಯಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ವೇಳೆ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಆರೈಕೆ ಮಾಡಲಾಗಿತ್ತು. ಹೀಗಾಗಿ ಅವರು ಚೇತರಿಸಿಕೊಂಡಿದ್ದರು. ಅವರು ಸಾಮಾಜಿಕ ಜಾಲತಾಣದಲ್ಲಿ ಆರೈಕೆ ವಿಡಿಯೋ ಶೇರ್ ಮಾಡಿದ್ದರು.

ದುನಿಯಾ ವಿಜಯ್​ ಅವರು ‘ಸಲಗ’ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರವನ್ನು ತಾಯಿಗೆ ತೋರಿಸಬೇಕು ಎನ್ನುವುದು ಅವರ ಕನಸಾಗಿತ್ತು. ಆದರೆ, ಈಗ ಅದು ನನಸಾಗಿಲ್ಲ.

ಇದನ್ನೂ ಓದಿ: ದುನಿಯಾ ವಿಜಯ್ ಜತೆ ಮತ್ತೆ ಸಿನಿಮಾ? ನಟ ಯೋಗಿ ಹೇಳಿದ್ದಿಷ್ಟು

‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್

Published On - 3:57 pm, Thu, 8 July 21