AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲಿವರಿ ಬಾಯ್​ ಕಾಮರಾಜ್​ ಬಗ್ಗೆ ಮೌನ ಮುರಿದ ನಟ ದುನಿಯಾ ವಿಜಯ್​! ನ್ಯಾಯಕ್ಕಾಗಿ ಒತ್ತಾಯ

ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಡೆಲಿವರಿ ಬಾಯ್​ ಕಾಮರಾಜ್​ ಪರವಾಗಿ ಅನೇಕರು ಮಾತನಾಡುತ್ತಿದ್ದಾರೆ. ಕಾಮರಾಜ್​ಗೆ ನ್ಯಾಯ ಸಿಗಬೇಕು ಎಂದು ಸೆಲೆಬ್ರಿಟಿಗಳು ಒತ್ತಾಯಿಸುತ್ತಿದ್ದಾರೆ.

ಡೆಲಿವರಿ ಬಾಯ್​ ಕಾಮರಾಜ್​ ಬಗ್ಗೆ ಮೌನ ಮುರಿದ ನಟ ದುನಿಯಾ ವಿಜಯ್​! ನ್ಯಾಯಕ್ಕಾಗಿ ಒತ್ತಾಯ
ದುನಿಯಾ ವಿಜಯ್​ - ಕಾಮರಾಜ್​
ಮದನ್​ ಕುಮಾರ್​
|

Updated on: Mar 16, 2021 | 2:53 PM

Share

ಡೆಲಿವರಿ ಬಾಯ್​ ಕಾಮರಾಜ್​ ವರ್ಸಸ್​ ಹಿತೇಶಾ ಚಂದ್ರಾಣಿ ಪ್ರಕರಣ ಈಗ ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಯಾರದ್ದು ಸರಿ, ಯಾರದ್ದು ತಪ್ಪು ಎಂಬ ಬಗ್ಗೆ ಸೋಷಿಯಲ್​ ಮೀಡಿಯಾ ತುಂಬೆಲ್ಲ ವಾದ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಕನ್ನಡದ ನಟ ‘ದುನಿಯಾ’ ವಿಜಯ್​ ಕೂಡ ಈ ಚರ್ಚೆಗೆ ಧ್ವನಿಗೂಡಿಸಿದ್ದಾರೆ.

‘ಸುಮಾರು 4 ದಿನಗಳಿಂದ ಸುದ್ದಿಯಲ್ಲಿರುವ Zomato ಹುಡುಗ ಕಾಮರಾಜ್ ಪ್ರಕರಣವನ್ನು ತಿಳಿದುಕೊಂಡೆ. ಕರ್ನಾಟಕ ಪೊಲೀಸರು ನಿಷ್ಪಕ್ಷಪಾತವಾದ ತನಿಖೆ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ. ಒಂದು ವೇಳೆ ಆತ ನಿರಪರಾಧಿ ಆಗಿದ್ದರೆ ಆತನ ಬೆಂಬಲಕ್ಕೆ ನಾವೆಲ್ಲ ಬೆನ್ನೆಲುಬಾಗಿ ನಿಲ್ಲೋಣ. ಯಾವುದೇ ಕಾರಣಕ್ಕೂ ಆತನಿಗೆ ಅನ್ಯಾಯ ಆಗಬಾರದು ಎಂದು ಬಯಸುತ್ತೇನೆ. ಆತನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇರುವುದರಿಂದ ಈತನ ದೂರನ್ನು ಸಹ ಪರಿಗಣಿಸಿ, ಅದರಲ್ಲೂ ಸಹ ತನಿಖೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ. ಕಾಮರಾಜ್ ಪರವಾಗಿ ನಿಂತಿರುವ ರೂಪೇಶ್ ರಾಜಣ್ಣ ಅವರಿಗೆ ನನ್ನ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು’ ಎಂದು ದುನಿಯಾ ವಿಜಯ್​ ಪೋಸ್ಟ್​ ಮಾಡಿದ್ದಾರೆ.

ತಮ್ಮ ಮೇಲೆ ಕಾಮರಾಜ್​ ಹಲ್ಲೆ ಮಾಡಿದ್ದಾರೆ ಎಂದು ಹಿತೇಶಾ ಚಂದ್ರಾಣಿ ಆರೋಪ ಮಾಡಿದ ಬಳಿಕ ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯಿತು. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಈ ಕುರಿತಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ನಟಿ ಪರಿಣೀತಿ ಚೋಪ್ರಾ ಅವರು ಟ್ವಿಟರ್​ ಮೂಲಕ ಕಾಮರಾಜ್​ ಪರವಾಗಿ ಮಾತನಾಡಿದ್ದರು.

‘ಈ ಫುಡ್​ ಡೆಲಿವರಿ ಬಾಯ್​ ಮುಗ್ಧ ಎಂದು ನಾನು ನಂಬುತ್ತೇನೆ. ಆದರೆ ನೀವು ಸತ್ಯವನ್ನು ಕಂಡುಹಿಡಿದರೆ ನಾವೂ ಆ ಮಹಿಳೆಯನ್ನು ಪ್ರಶ್ನೆ ಮಾಡಬಹುದು. ನಿಜಕ್ಕೂ ಇದೊಂದು ಅಮಾನವೀಯ, ನಾಚಿಕೆಗೇಡು ಮತ್ತು ದುಃಖ ತರುವ ಘಟನೆ ಎನ್ನಿಸುತ್ತಿದೆ. ನನ್ನಿಂದ ಏನು ಸಹಾಯಬೇಕೋ ಅದನ್ನು ಮಾಡುತ್ತೇನೆ. ದಯವಿಟ್ಟು ಸತ್ಯವನ್ನು ಆದಷ್ಟು ಬೇಗ ಅನ್ವೇಷಿಸಿ’ ಎಂದು ಟ್ವಿಟರ್​​ನಲ್ಲಿ ಪರಿಣಿತಿ ಚೋಪ್ರಾ ಜೊಮ್ಯಾಟೊ ಇಂಡಿಯಾಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜೊಮ್ಯಾಟೊ ಫುಡ್​ ಡೆಲಿವರಿ ಬಾಯ್ ಕಾಮರಾಜು​ ಪರ ನಿಂತ ಬಾಲಿವುಡ್​ನ ಖ್ಯಾತ​ ನಟಿ; ಆರೋಪ ಮಾಡಿದ ಮಹಿಳೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ

ಜೊಮ್ಯಾಟೋ ಪ್ರಕರಣ: ಹಿತೇಶಾ ಚಂದ್ರಾಣಿ ವಿರುದ್ಧ ಡೆಲಿವರಿ ಬಾಯ್ ಕಾಮರಾಜ್ ದೂರು, ಎಫ್​ಐಆರ್ ದಾಖಲು

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ