ಕಲಾವಿದ ದತ್ತಣ್ಣ ಅವರ ಅಣ್ಣ ಸೋಮಣ್ಣ ಇನ್ನಿಲ್ಲ!
ಬೆಂಗಳೂರು: ಕಲಾವಿದ ದತ್ತಣ್ಣ ಅವರ ಅಣ್ಣ ಹೆಚ್.ಜಿ.ಸೋಮಶೇಖರ ರಾವ್(86) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಣ್ಣ ಇಂದು ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ಸೋಮಣ್ಣ […]
ಬೆಂಗಳೂರು: ಕಲಾವಿದ ದತ್ತಣ್ಣ ಅವರ ಅಣ್ಣ ಹೆಚ್.ಜಿ.ಸೋಮಶೇಖರ ರಾವ್(86) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಣ್ಣ ಇಂದು ಕೊನೆಯುಸಿರೆಳೆದಿದ್ದಾರೆ.
ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ಸೋಮಣ್ಣ ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.
ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವೀಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾವ್ ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.
ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ರಾಯರಿಗೆ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು. ಸೋಮಶೇಖರರಾಯರ ಬದುಕಿನ ಅನುಭವ ಕಥನವು ಪ್ರಕಟವಾಗಿದೆ. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ರಾಯರು ತಮ್ಮ 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ.
Published On - 3:22 pm, Tue, 3 November 20