Madenuru Manu: ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ ಎಫ್​ಐಆರ್

ನಟ ಮಡೆನೂರು ಮನು ಅವರ ಮೇಲೆ ಕಿರುತೆರೆ ನಟಿಯೊಬ್ಬರು ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಡೆನೂರು ಮನು ಅವರು 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ಮೂಲಕ ಜನಪ್ರಿಯರಾಗಿದ್ದಾರೆ.

Madenuru Manu: ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ ಎಫ್​ಐಆರ್
ಮನು
Edited By:

Updated on: May 22, 2025 | 3:36 PM

‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಖ್ಯಾತಿ ಪಡೆದ ಮಡೆನೂರು ಮನು (Madenuru Manu) ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ. ಸದ್ಯ ಈ ವಿಚಾರ ಸೆನ್ಸೇಷನ್ ಸೃಷ್ಟಿ ಆಗಿದೆ. ಅವರಿಗೆ ಈಗ ಬಂಧನ ಭೀತಿ ಶುರವಾಗಿದೆ. ಅವರ ನಟನೆಯ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ರಿಲೀಸ್ ಸಂದರ್ಭದಲ್ಲಿಯೇ ಈ ರೀತಿ ಆಗಿರೋದು ತಂಡಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.

‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಎಲ್ಲರನ್ನೂ ನಗಿಸಿ ಮಡೆನೂರು ಮನು ಫೇಮಸ್ ಆಗಿದ್ದರು. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ನಾಯಕನಾಗಿ ಮಡೆನೂರು ಮನು ಅವರು ನಟಿಸಿದ್ದಾರೆ. ಈ ಚಿತ್ರ ಮೇ 23ರಂದು ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲೇ ಅವರ ವಿರುದ್ಧ ಈ ರೀತಿಯ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಇದಕ್ಕೆ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಕನ್ನಡದ ಹೀರೋಗಳಿಗೆ ಇದನ್ನು ಹೇಳೋ ಗಟ್ಸ್ ಇದೆಯಾ; ಸೋನು ನಿಗಮ್ ಹೀಗೆ ಹೇಳಿದ್ರಾ?

ಇದನ್ನೂ ಓದಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು
‘ತಿಂಗಳಿಗೆ 40 ಲಕ್ಷ ಜೀವನಾಂಶ ಕೊಡಿ’; ಬೇಡಿಕೆ ಇಟ್ಟ ಜಯಮ್​ ರವಿ ಪತ್ನಿ
‘ಸೀತಾ ರಾಮ’ಗೆ ಕೊನೆಯ ದಿನದ ಶೂಟಿಂಗ್; ಸೀರಿಯಲ್ ಪೂರ್ಣಗೊಳ್ಳಲು ಕಾರಣವೇನು?

ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ’ ಎಂದು ನಟಿ ದೂರು ನೀಡಿದ್ದಾರೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಮನುಗಾಗಿ ಹುಡುಕಾಟ ನಡೆದಿದೆ.

ಮಡೆನೂರು ಮನು ಅವರು ‘ಕಾಮಿಡಿ ಕಿಲಾಡಿಗಳು’ ಮೂಲಕ ಭರ್ಜರಿ ಫೇಮಸ್ ಆದರು. ಆ ಬಳಿಕ ಅವರಿಗೆ ವಿವಿಧ ರೀತಿಯ ಆಫರ್​ಗಳು ಬರೋಕೆ ಆರಂಭಿಸಿದವು. ಆದರೆ, ಅವರು ಅಳೆದು-ತೂಗಿ ಸಿನಿಮಾ ಮಾಡೋಕೆ ಪ್ರಾರಂಭಿಸಿದರು. ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಮೂಲಕ ಹೀರೋ ಆಗುವುದರಲ್ಲಿದ್ದರು. ಸಿನಿಮಾ ರಿಲೀಸ್ ಸಂದರ್ಭದಲ್ಲೇ ಅವರ ವಿರುದ್ಧ ಈಗ ಗಂಭೀರ ಆರೋಪ ಎದುರಾಗಿದೆ.

‘ಕುಲದಲ್ಲಿ ಕೀಳ್ಯಾವುದೋ’ ಎಂಬ ಟೈಟಲ್ ಕೇಳಿದ ತಕ್ಷಣ ಇದು ಜಾತಿ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎಂಬ ಅನಿಸಿಕೆ ಮೂಡುತ್ತದೆ. ಆದರೆ ಸಿನಿಮಾದಲ್ಲಿ ಬೇರೆಯೇ ಕಥೆ ಇದೆ ಎಂದು ಮನು ಹೇಳಿದ್ದರು. ಅಲ್ಲದೆ ಈ ಸಿನಿಮಾ ಬಗ್ಗೆ ಅವರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಈಗ ಮನು ಆರೋಪದಿಂದ ಸಿನಿಮಾ ತಂಡಕ್ಕೆ ಕಪ್ಪು ಚುಕ್ಕೆ ಬಿದ್ದಂತೆ ಆಗಿದೆ.

ಎಫ್​ಐಆರ್​​ನಲ್ಲೇನಿದೆ?

ಸಂತಸ್ತೆಗೆ ಮನು ನಾಗರಭಾವಿಯಲ್ಲಿ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. 2018ರಿಂದಲೂ ಮನುವಿನ ಪರಿಚಯ ಸಂತ್ರಸ್ತೆಗೆ ಇತ್ತು. ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದರು. ಮೊದಲಿಗೆ ಪರಿಚಯ ಆಗಿ ಸ್ನೇಹ ಬೆಳೆದಿತ್ತು. ಮನುಗೆ ಮದುವೆ ಆಗಿ ಒಂದು ಮಗು ಕೂಡ ಇದೆ ಅನ್ನೋದು ಶಾಕಿಂಗ್ ವಿಚಾರ.

‘ಒಮ್ಮೆ ಶಿಕಾರಿಪುರಕ್ಕೆ ಹೋದಾಗ ಹೋಟೆಲ್ ರೂಂಗೆ ಮನು ನನ್ನನ್ನು ಕರೆಸಿಕೊಂಡಿದ್ದರು. ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ನಾನು ಪ್ರೆಗ್ನೆಂಟ್ ಕೂಡ ಆಗಿದ್ದೆ. ಆ ಬಳಿಕ ಮನು ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದರು’ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:38 pm, Thu, 22 May 25