AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raju Talikote Death: ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ

ರಾಜು ತಾಳಿಕೋಟೆ ನಿಧನ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

Raju Talikote Death: ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ
Raju Talikote
ಮದನ್​ ಕುಮಾರ್​
| Edited By: |

Updated on:Oct 13, 2025 | 7:39 PM

Share

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ (Raju Talikote) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.

ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಈ ಮೊದಲು ಕೂಡ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು. ವಿಜಯಪುರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತಿಳಿಸಿದ್ದಾರೆ.

ಇದನ್ನೂ ಓದಿ: ‘ಇಬ್ಬರು ಹೆಂಡತಿಯರು ನನ್ನ ಪಾಲಿನ ಶಕ್ತಿ’; ಸಂಸಾರದ ಬಗ್ಗೆ ರಾಜು ತಾಳಿಕೋಟೆ ಮುಕ್ತ ಮಾತು

ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ರಾಜು ತಾಳಿಕೋಟೆ ಅವರು ಸಕ್ರಿಯರಾಗಿದ್ದರು. ‘ಮನಸಾರೆ’, ‘ಪಂಚರಂಗಿ’, ‘ಲೈಫು ಇಷ್ಟೇನೇ’, ‘ರಾಜಧಾನಿ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋನಲ್ಲಿ ಅವರು ಸ್ಪರ್ಧಿಸಿದ್ದರು. ಕಿರುತೆರೆಯ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

‘ನಿನ್ನೆ ರಾತ್ರಿ 12 ಗಂಟೆಗೆ ರಾಜು ತಾಳಿಕೋಟೆ ಅವರಿಗೆ ಉಸಿರಾಟದ ತೊಂದರೆ ಆಯಿತು. ನಾನೇ ಆಸ್ಪತ್ರೆಗೆ ಕರೆದುಕೊಂಡು ಬಂದೆ. ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ನಿಧನರಾದರು. ನಮ್ಮ ಸಿನಿಮಾದ ಶೂಟಿಂಗ್​​ನಲ್ಲಿ 2 ದಿನ ಭಾಗವಹಿಸಿದ್ದರು. ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ’ ಎಂದು ನಟ ಶೈನ್ ಶೆಟ್ಟಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:34 pm, Mon, 13 October 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?