ಬಹುಕೋಟಿ ರೂಪಾಯಿ ಬಜೆಟ್​ನ ಹೊಸ ಚಿತ್ರದಲ್ಲಿ ನಟ ರಿಷಿ; ಜೂನ್​ 2ರಂದು ಸಿಗಲಿದೆ ಚಾಲನೆ

ರಿಷಿ ನಟಿಸಲಿರುವ ಹೊಸ ಸಿನಿಮಾವನ್ನು ‘ಡಿಯರ್ ವಿಕ್ರಂ’ ಖ್ಯಾತಿಯ ಕೆ.ಎಸ್. ನಂದೀಶ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ..

ಬಹುಕೋಟಿ ರೂಪಾಯಿ ಬಜೆಟ್​ನ ಹೊಸ ಚಿತ್ರದಲ್ಲಿ ನಟ ರಿಷಿ; ಜೂನ್​ 2ರಂದು ಸಿಗಲಿದೆ ಚಾಲನೆ
ರಿಷಿ
Follow us
ಮದನ್​ ಕುಮಾರ್​
|

Updated on: May 20, 2023 | 7:39 PM

ಕನ್ನಡ ಚಿತ್ರರಂಗದಲ್ಲಿ (Kannada Film Industry) ನಟ ರಿಷಿ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ‘ಕವಲುದಾರಿ’ ಮತ್ತು ‘ಆಪರೇಷನ್ ಅಲಮೇಲಮ್ಮ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಅವರು ನಟಿಸುತ್ತಿರುವ ಬಹುಕೋಟಿ ರೂಪಾಯಿ ಬಜೆಟ್​ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ (Rishi) ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿದ್ದಾರೆ. ಕಥೆಯ ಆಯ್ಕೆಯಲ್ಲಿಯೂ ಕೂಡ ತುಂಬಾ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ವಿಶೇಷ. ಅವರ ಹೊಸ ಸಿನಿಮಾ ಚಿತ್ರ ಜೂನ್ 2ರಂದು ಅಧಿಕೃತವಾಗಿ ಆರಂಭವಾಗಲಿದೆ ಎಂಬ ವಿಷಯ ಬಹಿರಂಗ ಆಗಿದೆ. ಸಿನಿಮಾದ ಹೆಸರು, ನಿರ್ಮಾಣ ಸಂಸ್ಥೆ ಮತ್ತು ಪಾತ್ರವರ್ಗದ ಬಗ್ಗೆ ಜೂನ್ 2ರಂದು ಚಿತ್ರತಂಡರಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ.

ರಿಷಿ ಅಭಿನಯಿಸಲಿರುವ ಈ ಚಿತ್ರವನ್ನು ‘ಡಿಯರ್ ವಿಕ್ರಂ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಸ್.ನಂದೀಶ್ ಅವರು ನಿರ್ದೇಶನ ಮಾಡಲಿದ್ದಾರೆ. ತಮ್ಮ ಮೊದಲ ಸಿನಿಮಾ ಒಟಿಟಿ ಪ್ಲಾಟ್​ಫಾರ್ಮ್​ ಮೂಲಕ ಬಿಡುಗಡೆಯಾಗಿ ಯಶಸ್ಸು ಸಾಧಿಸಿರುವುದು ನಿರ್ದೇಶಕರಿಗೆ ಮತ್ತೊಂದು ಚಿತ್ರ ಮಾಡಲು ಹುಮ್ಮಸ್ಸು ನೀಡಿದೆ. ‘ಡಿಯರ್ ವಿಕ್ರಂ’ ಸಿನಿಮಾವನ್ನು ಒಟಿಟಿಯಲ್ಲಿ ನೋಡಿದ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ರೀಮೇಕ್ ಮಾಡಲು ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ‘ನಂಗೆ ವೋಟ್​ ಹಾಕ್ರಿ, ವಿಧಾನಸೌಧ ಮಾರಿ ನಿಮ್ಮ ಸಾಲ ತೀರಿಸ್ತೀನಿ’: ಆಶ್ವಾಸನೆ ಕೊಟ್ಟ ನಟ ರಿಷಿ

ನೈಜ ಘಟನೆಗಳನ್ನು ಆಧರಿಸಿದ ‘ಡಿಯರ್ ವಿಕ್ರಂ’ ಚಿತ್ರವು ನಕ್ಸಲ್ ಮತ್ತು ರಾಜಕೀಯದ ಕುರಿತಾದ ಕತೆಯನ್ನು ಒಳಗೊಂಡಿತ್ತು. ಒಟಿಟಿ ಮೂಲಕ ಬಿಡುಗಡೆಯಾದ ನಂತರ ತುಂಬಾ ಜನ ಇದು ಥಿಯೇಟರ್​ನಲ್ಲಿ ಬಿಡುಗಡೆ ಆಗಬೇಕಾಗಿತ್ತು ಎಂದು ಅನಿಸಿಕೆ ವ್ಯಕ್ತಪಡಿಸಿದ್ದರು. ಆದರೆ ನಿರ್ದೇಶಕರಿಗೆ ಆ ಬಗ್ಗೆ ಬೇಸರ ಇಲ್ಲ. ಯಾಕೆಂದರೆ ಇದು ಒಟಿಟಿ ಜಮಾನಾ.

ಇದನ್ನೂ ಓದಿ: ಶರಣ್ ಈಗ ಎಲೆಕ್ಟ್ರಿಷಿಯನ್; ಹುಟ್ಟುಹಬ್ಬದ ದಿನವೇ ಹೊಸ ಅಪ್​ಡೇಟ್ ನೀಡಿದ ನಟ  

‘ಪ್ರಸ್ತುತ ಕಾಲದಲ್ಲಿ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಅನಿವಾರ್ಯ. ಥಿಯೇಟರ್​​ನಷ್ಟೇ ಒಟಿಟಿ ಕೂಡ ಮನರಂಜನೆಯನ್ನು ಜನಕ್ಕೆ ತಲುಪಿಸುವ ಒಂದು ಮಾಧ್ಯಮ’ ಎಂದು ನಂದೀಶ್​ ಹೇಳಿದ್ದಾರೆ. ಆದರೆ ಈಗ ತಯಾರಿ ನಡೆಯುತ್ತಿರುವ ಹೊಸ ಚಿತ್ರವು ಥಿಯೇಟರ್​​ಗಳಲ್ಲಿ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಹಲವು ಪ್ರಸಿದ್ಧ ನಟರು ಅಭಿನಯಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್