ಆಸ್ಪತ್ರೆ ಸೇರಿದ ಹಿರಿಯ ನಟ ಉಮೇಶ್ ಪರೀಕ್ಷೆ ವೇಳೆ ವೈದ್ಯರಿಗೆ ಗೊತ್ತಾಯ್ತು ಶಾಕಿಂಗ್ ವಿಚಾರ
ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಬಾತ್‌ರೂಂನಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ 80 ವರ್ಷದ ಉಮೇಶ್ ಅವರಿಗೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ವೈದ್ಯರು ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸುವ ಮೂಲಕ ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಮತ್ತು ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಮನೆಯ ಬಾತ್‌ರೂಂನಲ್ಲಿ ಕಾಲು ಜಾರಿ ಬಿದ್ದಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರಿಗೆ 80 ವರ್ಷ. ಪರೀಕ್ಷೆ ಮಾಡುವ ವೇಳೆ ಒಂದು ಶಾಕಿಂಗ್ ವಿಚಾರ ರಿವೀಲ್ ಆಗಿದೆ. ಅವರಿಗೆ ಲಿವರ್ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರೋಗವನ್ನು ಖಚಿತಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಜಾರಿ ಬಿದ್ದ ವೇಳೆ ಉಮೇಶ್ ಅವರ ಮೂಳೆಗೆ ಏಟಾಗಿತ್ತು. ಇಂದು (ಅಕ್ಟೋಬರ್ 11) ಸರ್ಜರಿ ಮಾಡುವ ಪ್ಲ್ಯಾನ್ ಇತ್ತು. ಈ ವೇಳೆ ಲಿವರ್ನಲ್ಲಿ ಹಾನಿ ಉಂಟುಮಾಡುವ ಗಡ್ಡೆ ಇರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ವೈದ್ಯರು ಅವರ ಕುಟುಂಬದ ಜೊತೆ ಚರ್ಚೆ ಮಾಡಿದ್ದಾರೆ.
ಸದ್ಯ ವೈದ್ಯರ ಪರೀಕ್ಷೆ ಪ್ರಕಾರ ಲಿವರ್ನಲ್ಲಿ ಕ್ಯಾನ್ಸರ್ ಉಂಟಾಗಿದ್ದು, ಅದು ಬೇರೆ ಅಂಗಗಳಿಗೆ ಸ್ಪ್ರೆಡ್ ಆಗಿದೆ. ‘ಉಮೇಶ್ ಅವರು ನೋಡಲು ಆರೋಗ್ಯವಾಗಿಯೇ ಕಾಣಿಸಿದ್ದಾರೆ. ಆದರೆ, ಕ್ಯಾನ್ಸರ್ ಇದೆ. ಇದನ್ನು ಖಚಿತಪಡಿಸಲು ಕೆಲವು ಟೆಸ್ಟ್ ಮಾಡಬೇಕಿದೆ. ಲಿವರ್ ಒಳಗೆ ಇರೋ ಗಡ್ಡೆಯನ್ನು ತೆಗೆದು ಪರೀಕ್ಷೆಗೆ ಕಳುಹಿಸಬೇಕಿದೆ’ ಎಂದು ವೈದ್ಯರು ಹೇಳಿದ್ದಾರೆ.
‘ಕಿಮೋಥೆರಪಿ, ಇಮಿನೋಥೆರಪಿ ಮಾಡಬೇಕಾಗಿದೆ. ಕ್ಯಾನ್ಸರ್ ಸ್ಪೆಶಲಿಸ್ಟ್ ಬಂದಿದ್ದಾರೆ. ಇಂಜೆಕ್ಷನ್ ಅಲ್ಲಿ ಗಡ್ಡೆ ಕರಗಿಸೋ ಪ್ರಯತ್ನ ನಡೆಯುತ್ತಿದೆ. ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ. ರಿಕವರಿ ಆಗುವ ಚಾನ್ಸ್ ಇದೆ’ ಎಂದು ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: ಕಾಲು ಜಾರಿ ಬಿದ್ದ ಹಿರಿಯ ನಟ ಎಂ.ಎಸ್. ಉಮೇಶ್: ಆಸ್ಪತ್ರೆಗೆ ದಾಖಲು
ಸದ್ಯ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆಯಿಂದ ಬಂದ ಮಾಹಿತಿಗಳನ್ನು ಇಟ್ಟುಕೊಂಡು ಉಮೇಶ್ಗೆ ಕ್ಯಾನ್ಸರ್ ಇದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸಂಪೂರ್ಣ ಪರೀಕ್ಷೆ ಬಳಿಕ ಅಸಲಿ ವಿಚಾರ ಏನು ಎಂಬ ವಿಚಾರ ರಿವೀಲ್ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








