AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್

2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದರು.

ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ; ಸ್ಯಾಂಡಲ್​ವುಡ್ ನಟ ವೀರೇಂದ್ರ ಬಾಬು ಅರೆಸ್ಟ್
ವೀರೇಂದ್ರ ಬಾಬು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 12, 2023 | 10:24 AM

Share

ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಆರೋಪಿ ವೀರೇಂದ್ರ ಬಾಬು (Veerendra Babu) ಅವರನ್ನು ಅರೆಸ್ಟ್ ಮಾಡಿದ್ದಾರೆ. ವೀರೇಂದ್ರ ಅವರು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ತೋರಿಸಿ 15 ಲಕ್ಷ ರೂಪಾಯಿ ನೀಡುವಂತೆ ವೀರೇಂದ್ರ ಬಾಬು ಬ್ಲಾಕ್​ಮೇಲ್ ಮಾಡಿದ್ದರು ಎನ್ನುವ ಆರೋಪ ಇದೆ.

2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಹೇಳಿದ್ದರು. ಅಂದು ಒಡವೆ ಮಾರಿ ಹಣ ನೀಡಿ ಸುಮ್ಮನಾಗಿದ್ದರು.

ಆದರೆ ಕಳೆದ ಜುಲೈ 30ರಂದು ಮತ್ತೆ ಮಹಿಳೆಯನ್ನು ವೀರೇಂದ್ರ ಬಾಬು ಕರೆಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಕಾರಿನಲ್ಲಿ ತಮ್ಮನ್ನು ಸುತ್ತಾಡಿಸಿ, ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರುವ ಆರೋಪ‌‌ವನ್ನು ಮಹಿಳೆ ಮಾಡಿದ್ದಾರೆ. ಗನ್ ಇಟ್ಟು ಬೆದರಿಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ

ಈ ಘಟನೆಗೆ ಸಂಬಂಧಿಸಿ ಮಹಿಳೆ ದೂರು ದಾಖಲು ಮಾಡಿದ್ದಾರೆ. ಇದನ್ನು ಆಧರಿಸಿ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಆರೋಪದಡಿ ವೀರೇಂದ್ರ ಬಾಬು ಹಾಗೂ ಸ್ನೇಹಿತರ ಮೇಲೆ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸದ್ಯ ಕೊಡಿಗೆಹಳ್ಳಿ ಪೊಲೀಸರಿಂದ ಅರೋಪಿ ಅರೆಸ್ಟ್ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ