Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ವಿಜಯ್ ರಾಘವೇಂದ್ರ-ಸ್ಪಂದನಾ ಬ್ಯಾಂಕಾಕ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ
Follow us
ರಾಜೇಶ್ ದುಗ್ಗುಮನೆ
|

Updated on:Aug 07, 2023 | 11:05 AM

ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಅಭಿಮಾನಿಗಳಿಗೆ ಬೇಸರದ ಸುದ್ದಿ ಸಿಕ್ಕಿದೆ. ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಬ್ಯಾಂಕಾಕ್​​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಪುನೀತ್ ರಾಜ್​ಕುಮಾರ್ ಸೇರಿ ಅನೇಕ ಸೆಲೆಬ್ರಿಟಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈಗ ಸ್ಪಂದನಾ ಕೂಡ ನಿಧನ ಹೊಂದಿದ್ದು ನಿಜಕ್ಕೂ ಶಾಕಿಂಗ್ ಆಗಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

ಸ್ಪಂದನಾ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಅವರ ತಂದೆ ಬಿಕೆ ಶಿವರಾಮ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2007ರ ಆಗಸ್ಟ್ 26ರಂದು ವಿಜಯ್-ಸ್ಪಂದನಾ ಮದುವೆ ನಡೆಯಿತು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ. ಈಗ ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಸಂದರ್ಶನ: ಸೋಲೋ ಆ್ಯಕ್ಟರ್ ಸಿನಿಮಾ ಅನುಭವ ಹಂಚಿಕೊಂಡ ‘ರಾಘು’

2016ರಲ್ಲಿ ಸ್ಪಂದನಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ವಿ. ರವಿಚಂದ್ರನ್ ನಿರ್ದೇಶನದ ‘ಅಪೂರ್ವ’ ಸಿನಿಮಾದಲ್ಲಿ ಸ್ಪಂದನಾ ನಟಿಸಿದ್ದರು. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿಯಾಗಿ ಅವರು ನಟಿಸಿದ್ದರು. ಈಗ ಸ್ಪಂದನಾ ಸಾವಿನ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ವಿಜಯ್ ಅವರಿಗೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ದೇವರಲ್ಲಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Mon, 7 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ