Abhinaya: ವರದಕ್ಷಿಣೆ ಕೇಸ್​​ನಲ್ಲಿ ನಟಿ ಅಭಿನಯಾಗೆ 2 ವರ್ಷ ಜೈಲು; ತಾಯಿಗೆ 5 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್

Kannada Actress Abhinaya: ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಈ ಹಿಂದೆ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

Abhinaya: ವರದಕ್ಷಿಣೆ ಕೇಸ್​​ನಲ್ಲಿ ನಟಿ ಅಭಿನಯಾಗೆ 2 ವರ್ಷ ಜೈಲು; ತಾಯಿಗೆ 5 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್
ನಟಿ ಅಭಿನಯ
Follow us
TV9 Web
| Updated By: Digi Tech Desk

Updated on:Dec 14, 2022 | 12:02 PM

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅನುಭವ’ ಸಿನಿಮಾ ಖ್ಯಾತಿಯ ಅಭಿನಯಾ (Abhinaya) ಅವರಿಗೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ್ದಕ್ಕಾಗಿ ಹಾಗೂ ಕೌಟುಂಬಿಕ ದೌರ್ಜನ್ಯ (Domestic Violence) ನಡೆಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಅಭಿನಯಾ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಿ, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಈ ಹಿಂದೆ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ವರದಕ್ಷಿಣೆ ಕಿರುಕುಳ (Dowry Case) ಆರೋಪದ ಅಡಿಯಲ್ಲಿ ಜಯಮ್ಮಗೆ 5 ವರ್ಷ ಶಿಕ್ಷೆ ಹಾಗೂ ಅಭಿನಯಾ ಸಹೋದರ ಚೆಲುವರಾಜ್​ಗೆ 2 ವರ್ಷ ಶಿಕ್ಷೆ ನೀಡಲಾಗಿದೆ.

ಬಣ್ಣದ ಲೋಕದಲ್ಲಿ ಅಭಿನಯಾ ಅವರು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಚೊಚ್ಚಲ ಸಿನಿಮಾ ‘ಅನುಭವ’ ಮೂಲಕ ಅವರು ಹೆಚ್ಚು ಗುರುತಿಸಿಕೊಂಡರು. ಆದರೆ ನಂತರ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಅವರು ಮನೆಮಾತಾದರು. ಈಗಲೂ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಅಷ್ಟರಲ್ಲೇ ಜೈಲು ಶಿಕ್ಷೆ ಅನುಭವಿಸುವಂತಾಗಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಗೃಹಿಣಿ ಸಾವು; ಆರೋಪಿ ಹೆಸರು ಕೈಬಿಟ್ಟಿದ್ದಕ್ಕೆ ವಿಷ ಸೇವಿಸುವುದಾಗಿ ಎಚ್ಚರಿಕೆ ಕೊಟ್ಟ ಪೋಷಕರು!

ಇದನ್ನೂ ಓದಿ
Image
ವರದಕ್ಷಿಣೆ ಕಿರುಕುಳ ಆರೋಪ: ಹೆಂಡತಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿ
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
Image
ಚಿಕ್ಕಮಗಳೂರಿನಲ್ಲಿ ವರದಕ್ಷಿಣೆ ಕಿರುಕುಳ; ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ, ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

20 ವರ್ಷ ಹಿಂದಿನ ಕೇಸ್​:

ಅಭಿನಯಾ ಅವರ ಅತ್ತಿಗೆ ಲಕ್ಷ್ಮಿದೇವಿ ಅವರು 2002ರಲ್ಲಿಯೇ ಈ ಕೇಸ್​ ದಾಖಲಿಸಿದ್ದರು. 1998ರಲ್ಲಿ ಅಭಿನಯಾ ಸಹೋದರ ಶ್ರೀನಿವಾಸ್​ ಜೊತೆ ಲಕ್ಷ್ಮಿದೇವಿ ವಿವಾಹ ನೆರವೇರಿತ್ತು. ಮದುವೆ ಬಳಿಕ ಶ್ರೀನಿವಾಸ್​ ಕುಟುಂಬದವರು ವರದಕ್ಷಿಣಿ ಕಿರುಕುಳು ನೀಡುತ್ತಿದ್ದಾರೆ ಎಂದು ಆರೋಪಿಸಿ ಚಂದ್ರಾ ಲೇಔಟ್​ನಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು

‘ಹೆರಿಗೆ ಬಳಿಕ ಪತಿ ಮನೆಯವರು ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು’ ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು. ಈ ಪ್ರಕರಣದಲ್ಲೀಗ ಹೈಕೋರ್ಟ್​ ತೀರ್ಪು ನೀಡಿದ್ದು ಅಭಿನಯಾ, ಅವರ ತಾಯಿ ಮತ್ತು ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:31 am, Wed, 14 December 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ