AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamuna Death: ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನ

ಕನ್ನಡದಲ್ಲಿ ಜಮುನಾ 8 ಚಿತ್ರಗಳಲ್ಲಿ ನಟಿಸಿದ್ದರು. ‘ತೆನಾಲಿ ರಾಮಕೃಷ್ಣ’, ‘ಭೂಕೈಲಾಸ’ ಮೊದಲಾದ ಸಿನಿಮಾಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು. ತೆಲುಗಿನಲ್ಲಿ ಸುಮಾರು 100 ಚಿತ್ರಗಳಲ್ಲಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
| Edited By: |

Updated on:Jan 27, 2023 | 2:35 PM

Share

ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ (Actress Jamuna) ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ(Hampi)  ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತ್ಯಭಾಮ ಪಾತ್ರದ ಮೂಲಕ ಜಮುನಾ ಹೆಚ್ಚು ಗುರುತಿಸಲ್ಪಟ್ಟರು. ಕನ್ನಡದಲ್ಲಿ ಜಮುನಾ 8 ಚಿತ್ರಗಳಲ್ಲಿ ನಟಿಸಿದ್ದರು. ‘ತೆನಾಲಿ ರಾಮಕೃಷ್ಣ’, ‘ಭೂಕೈಲಾಸ’ ಮೊದಲಾದ ಸಿನಿಮಾಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು. ತೆಲುಗಿನಲ್ಲಿ ಸುಮಾರು 100 ಚಿತ್ರಗಳಲ್ಲಿ ಅವರು ನಟಿಸಿದ್ದರು.

ಜಮುನಾ ಅವರು ಚಿಕ್ಕ ವಯಸ್ಸಿನಲ್ಲಿ ನಾಟಕಗಳಲ್ಲಿ ಬಣ್ಣ ಹಚ್ಚಿದ್ದರು. ಅವರ ತಾಯಿ ಸಂಗೀತವನ್ನು ಹೇಳಿಕೊಟ್ಟರು. ಇವರ ನಾಟಕಗಳನ್ನು ನೋಡಿ ಸಿನಿಮಾ ಆಫರ್​ಗಳು ಬಂದವು. ಹಿಂದಿ ಚಿತ್ರರಂಗದಲ್ಲೂ ಜಮುನಾ ಬಣ್ಣ ಹಚ್ಚಿದ್ದಾರೆ. ಜಮುನಾ ಅವರು 1965ರಲ್ಲಿ ಪ್ರೊಫೆಸರ್ ಜುಲುರಿ ರಮಣ ರಾವ್ ಅವರನ್ನು ಮದುವೆ ಆಗಿದ್ದರು. 2014ರಲ್ಲಿ ಅವರು ಮೃತಪಟ್ಟರು.

ಜಮುನಾ ಅವರ ನಟನೆಗೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಜಮುನಾ ಅವರು ನಟನೆಯ ಜತೆಗೆ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. 1980ರಲ್ಲಿ ಅವರು ಕಾಂಗ್ರೆಸ್​ಗೆ ಸೇರ್ಪಡೆ ಆದರು.  1989ರಲ್ಲಿ ಜಮುನಾ ಅವರು ರಾಜಮಂಡ್ರಿಯಿಂದ ಸಂಸದೆ ಆಗಿ ಆಯ್ಕೆ ಆದರು. 1991ರಲ್ಲಿ ನಡೆದ ಚುನಾವಣೆಯಲ್ಲಿ ಅವರು ಸೋತರು. ಆ ಬಳಿಕ ರಾಜಕೀಯದಿಂದ ಹೊರನಡೆದರು. ನಂತರ ಅವರು ಆಗಾಗ ಬಿಜೆಪಿ ಪರ ಪ್ರಚಾರ ಮಾಡಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:44 am, Fri, 27 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು