AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆ ಏರಲು ಸಜ್ಜಾದ ನಟಿ ರೂಪಿಕಾ; ಹಿರಿಯರ ಸಮ್ಮುಖದಲ್ಲಿ ನಡೆಯಿತು ನಿಶ್ಚಿತಾರ್ಥ

ನಟಿ ರೂಪಿಕಾ ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗೆ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದ್ದು, ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ವಿವಾಹ ನಡೆಯಲಿದೆ. ಕೆನಡಾದಲ್ಲಿ ನೆಲೆಸಿರುವ ಅಂಕಿತ್ ಮೂಲತಃ ಬೆಂಗಳೂರಿನವರು. ಕಿರುತೆರೆ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ ರೂಪಿಕಾ, 'ಲಕ್ಷ್ಮಿ ನಿವಾಸ' ಧಾರಾವಾಹಿಯಲ್ಲಿ ಸದ್ಯ ಸಕ್ರಿಯರಾಗಿದ್ದಾರೆ. ಅಭಿಮಾನಿಗಳು ಈ ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ.

ಹಸೆಮಣೆ ಏರಲು ಸಜ್ಜಾದ ನಟಿ ರೂಪಿಕಾ; ಹಿರಿಯರ ಸಮ್ಮುಖದಲ್ಲಿ ನಡೆಯಿತು ನಿಶ್ಚಿತಾರ್ಥ
ರೂಪಿಕಾ-ಅಂಕಿತ್
ರಾಜೇಶ್ ದುಗ್ಗುಮನೆ
|

Updated on: Jun 18, 2026 | 9:02 AM

Share

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಮತ್ತು ಭರತನಾಟ್ಯ ನೃತ್ಯಗಾರ್ತಿ ರೂಪಿಕಾ ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ನಟಿ ರೂಪಿಕಾ ಹಸೆಮಣೆ ಏರುತ್ತಿದ್ದು, ಇತ್ತೀಚೆಗಷ್ಟೇ ಹಿರಿಯರು ಹಾಗೂ ಆಪ್ತರ ಸಮ್ಮುಖದಲ್ಲಿ ಇವರ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಮದುವೆ ಸುದ್ದಿ ಹೊರಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಈ ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ಯಾರು ಈ ಅಂಕಿತ್?

ರೂಪಿಕಾ ಕೈಹಿಡಿಯಲಿರುವ ಅಂಕಿತ್ ಅವರು ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 5 ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದಾರೆ. ಸದ್ಯ ಕೆನಡಾದ ‘ಇನ್ವೆಸ್ಕೋ’ (Invesco) ಸಂಸ್ಥೆಯಲ್ಲಿ ಟ್ಯಾಕ್ಸ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರೊಂದಿಗೆ ಮ್ಯೂಸಿಕಲ್ ಕಂಪೋಸರ್ ಕೂಡ ಆಗಿರುವ ಅಂಕಿತ್ ಅವರಿಗೆ ಚಿತ್ರರಂಗದ ಬಗ್ಗೆ ಅಪಾರ ಆಸಕ್ತಿಯಿದೆ.

ಆಗಸ್ಟ್‌ನಲ್ಲಿ ಮದುವೆ

ಮುಂಬರುವ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲೇ ಇವರ ವಿವಾಹ ನಡೆಯಲಿದೆ. ಈ ಮದುವೆ ಸಮಾರಂಭಕ್ಕೆ ರೂಪಿಕಾ ಅವರ ಆಪ್ತರು, ಚಿತ್ರರಂಗದ ಸ್ನೇಹಿತರು ಹಾಗೂ ರಾಜಕೀಯ ರಂಗದ ಪ್ರಮುಖ ಗಣ್ಯರು ಸಾಕ್ಷಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ನಟಿ ಸಮಂತಾ ರುತ್ ಪ್ರಭು

ಬಾಲನಟಿಯಿಂದ ಹಿಡಿದು ‘ಲಕ್ಷ್ಮಿ ನಿವಾಸ’ದವರೆಗೆ ರೂಪಿಕಾ ಜರ್ನಿ:

ರೂಪಿಕಾ ಅವರ ನಟನಾ ಪಯಣ ಆರಂಭವಾಗಿದ್ದು ಕಿರುತೆರೆಯಲ್ಲಿ ಬಾಲನಟಿಯಾಗಿ. ಅವರು ‘ಬೆಳ್ಳಿಚುಕ್ಕಿ’, ‘ಬದುಕು’, ‘ಅವಳ ಮನೆ’ ಹಾಗೂ ‘ತ್ರಿವೇಣಿ ಸಂಗಮ’ದಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಬಾಲನಟಿಯಾಗಿ ಪ್ರೇಕ್ಷಕರ ಮನ ಗೆದ್ದರು. 2009ರಲ್ಲಿ ತೆರೆಕಂಡ ಎಸ್. ನಾರಾಯಣ್ ನಿರ್ದೇಶನದ ‘ಚೆಲುವಿನ ಚಿಲಿಪಿಲಿ’ ಸಿನಿಮಾ ಮೂಲಕ ರೂಪಿಕಾ ಚಂದನವನಕ್ಕೆ ನಾಯಕಿಯಾಗಿ ಪದಾರ್ಪಣೆ ಮಾಡಿದರು. ನಂತರ ‘ತೀರ್ಥರೂಪ’, ‘ಮಾಯದಂಥ ಮಳೆ’, ‘ಬೀರ’, ‘ಥರ್ಡ್‌ಕ್ಲಾಸ್’, ‘ರುದ್ರಾಕ್ಷಿಪುರ’, ‘ಮಂಜರಿ’, ‘ನವರಂಗಿ’, ‘ಡೈಮಂಡ್ ಕ್ರಾಸ್’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಅಷ್ಟೇ ಅಲ್ಲದೆ, ‘ಚಿಲ್ ಬ್ರೋ’ ಎಂಬ ತೆಲುಗು ಚಿತ್ರದಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ಲಕ್ಷ್ಮಿ ನಿವಾಸ’ದಲ್ಲಿ ಸಿಂಚನಾ ಹೆಸರಿನ ಪಾತ್ರದ ಮೂಲಕ ರೂಪಿಕಾ ಪ್ರೇಕ್ಷಕರ ಮನೆಮಾತಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ