ಪುನೀತ್​ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ತಾಂತ್ರಿಕ ಸಮಸ್ಯೆ -ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಹಿತಿ

| Updated By: sandhya thejappa

Updated on: Oct 30, 2021 | 2:18 PM

ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ರಾಜ್ಯೋತ್ಸವ ನೀಡುವಂತೆ ಅಭಿಯಾನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.

ಪುನೀತ್​ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ತಾಂತ್ರಿಕ ಸಮಸ್ಯೆ -ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಹಿತಿ
ನಟ ಪುನೀತ್ ರಾಜ್​ಕುಮಾರ್
Follow us on

ಬೆಂಗಳೂರು: ಹೃದಯಾಘಾತದಿಂದ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್​ಗೆ (Puneeth Rajkumar) ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಅಂತ ಒತ್ತಾಯಿಸುತ್ತಿದ್ದಾರೆ. ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಅಭಿಯಾನವನ್ನೂ ಆರಂಭಿಸಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಕೂಡಾ ನಡೆದಿದೆ. ಆದರೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂಬ ಮಾಹಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತಿಳಿದುಬಂದಿದೆ.

ನಾಗಮೋಹನ್ ದಾಸ್ ಸಮಿತಿ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಅಸಾಧ್ಯವಾಗಿದೆ. ಕರ್ನಾಟಕ ಹೈಕೋರ್ಟ್​ ಆದೇಶದ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೊಡಕು ಉಂಟಾಗಿದೆ. ನ್ಯಾ. ನಾಗಮೋಹನ್ ದಾಸ್ ಸಮಿತಿ ವರದಿ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡುವಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ರಾಜ್ಯೋತ್ಸವ ನೀಡುವಂತೆ ಅಭಿಯಾನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಆದರೆ ಸಮಿತಿ ವರದಿ ಆಧರಿಸಿ ನಟ ಪುನೀತ್​ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ತಾಂತ್ರಿಕ ತೊಡಕು ಇದೆ ಅಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಪುನೀತ್‌ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಅಂತ ಬೆಂಗಳೂರಿನಲ್ಲಿ ಸಂಸದ ಡಿವಿ ಸದಾನಂದಗೌಡ ಹೇಳಿಕೆ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವ ಹೆಚ್ಚುತ್ತದೆ. ಪುನೀತ್ ರಾಜ್ಯೋತ್ಸವಕ್ಕಿಂತಲೂ ಮೇಲಿ‌ನ ಪ್ರಶಸ್ತಿಗೆ ಅರ್ಹರು. ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ನನ್ನ ಸಹಮತ ಇದೆ. ಇದು ಅತ್ಯಂತ ಸೂಕ್ತ ಸಮಯ. ಈ ವಿಚಾರವನ್ನು ಸಿಎಂ ಮತ್ತು ಕನ್ನಡ ಸಂಸ್ಕೃತಿ ಸಚಿವರು ಗಂಭೀರವಾಗಿ ಪರಿಗಣಿಸಬೇಕು. ಸಿಎಂ ಮತ್ರು ಸಚಿವರಿಗೆ ನಾನು ಆಗ್ರಹ ಮಾಡುತ್ತೇನೆ. ಪುನೀತ್​ಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟರೆ ಕರ್ನಾಟಕಕ್ಕೆ ರಾಜ್​ಕುಮಾರ್ ಕುಟುಂಬದ ಕೊಡುಗೆಯನ್ನು ಗೌರವಿಸಿದಂತಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

Puneeth Rajkumar Death: ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಹಿರಿಯ ಛಾಯಗ್ರಾಹಕ

Published On - 12:09 pm, Sat, 30 October 21