ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಭಜರಂಗಿ 2 ಸಿನಿಮಾ ಸೆಟ್ನಲ್ಲಿ ಅಗ್ನಿ ಅವಘಡವಾಗಿದೆ. ಶಾಟ್ ಸರ್ಕ್ಯೂಟ್ನಿಂದ ನಗರದ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಗುಹೆ ಸೆಟ್ ಹಾಕಲಾಗಿತ್ತು. 300 ಜನ ಜೂನಿಯರ್ ಆರ್ಟಿಸ್ಟ್ ಸೇರಿದಂತೆ ಶಿವರಾಜ್ ಕುಮಾರ್ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಶೋಟಿಂಗ್ ವೇಳೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಬೆಂಕಿ ನಂದಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ತೊಂದರೆ ಆಗಿಲ್ಲ ಎಂದು ಚಿತ್ರ ತಂಡ ಸ್ಪಷ್ಟಪಡಿಸಿದೆ.
ಹರ್ಷ ನಿರ್ದೇಶನ ಮಾಡುತ್ತಿರುವ ಭಜರಂಗಿ 2 ಚಿತ್ರ. ಶಿವರಾಜ್ ಕುಮಾರ್ ಮತ್ತು ಹರ್ಷ ಕಾಂಬಿನೇಶನ್ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರ. ಜಯಣ್ಣ ಹಾಗೂ ಭೋಗೆಂದ್ರ ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಚಿತ್ರದ ಫಸ್ಟ್ ಲಿಕ್ ಪೋಸ್ಟರ್ ಬಿಡುಗಡೆ ಮಾಡಿದ್ದರು.
Published On - 1:36 pm, Thu, 16 January 20