Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ನಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂಟಿಂಗ್ ಸ್ಥಗಿತ

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಲ್ಕು ದಿನದಲ್ಲಿ ಮೂರು ವಿಘ್ನ: ನಾಲ್ಕು ದಿನದಲ್ಲಿ ‘ಭಜರಂಗಿ 2’ ಚಿತ್ರಕ್ಕೆ ಮೂರು ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ […]

ಭಜರಂಗಿ 2  ಸಿನಿಮಾ ಸೆಟ್​ನಲ್ಲಿ ಮತ್ತೊಮ್ಮೆ ಅಗ್ನಿ ಅವಘಡ: ಶೂಟಿಂಗ್ ಸ್ಥಗಿತ
Follow us
ಸಾಧು ಶ್ರೀನಾಥ್​
|

Updated on: Jan 19, 2020 | 6:00 PM

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಾಲ್ಕು ದಿನದಲ್ಲಿ ಮೂರು ವಿಘ್ನ: ನಾಲ್ಕು ದಿನದಲ್ಲಿ ‘ಭಜರಂಗಿ 2’ ಚಿತ್ರಕ್ಕೆ ಮೂರು ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಸೆಟ್ ಹಾಕಲಾಗಿದೆ. ಜನವರಿ 16ರಂದು ಶಾರ್ಟ್​ ಸರ್ಕ್ಯೂಟ್​ನಿಂದ ಮೊದಲ ಬಾರಿಗೆ ಸೆಟ್​ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣವೇ ಬೆಂಕಿ ನಂದಿಸಿದ್ದರಿಂದ ಯಾವುದೇ ಅಪಾಯ ಸಮಭವಿಸಿರಲಿಲ್ಲ. ನಂತರ ಜನವರಿ 18ರಂದು ಕಲಾವಿದರಿದ್ದ ಬಸ್ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ಬಳಿ ಅಪಘಾತಕ್ಕೀಡಾಗಿತ್ತು. ಶೂಟಿಂಗ್​ಗೆ ತೆರಳುತ್ತಿದ್ದ ಕಲಾವಿದರ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿತ್ತು. ಅಪಘಾತಕ್ಕೀಡಾದ ಬಸ್​ನಲ್ಲಿ 60 ಮಂದಿ ಕಲಾವಿದರಿದ್ದರು.

ಭಜರಂಗಿ 2 ಶೂಟಿಂಗ್ ಸ್ಥಗಿತ: ಇಂದು ಮೋಹನ್.ಬಿ ಕೆರೆ ಸ್ಟುಡಿಯೋದಲ್ಲಿ ಸುಮಾರು 200 ಜನ ಕಲಾವಿದರು ಕೆಲಸ ಮಾಡುತ್ತಿದ್ದರು. ಭಜರಂಗಿ 2 ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ​ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಸದ್ಯ ಭಜರಂಗಿ 2 ಚಿತ್ರದ ಶೂಟಿಂಗ್ ಸ್ಥಗಿತಗೊಳಿಸಿದ ಚಿತ್ರ ತಂಡ ಸ್ಥಳದಿಂದ ವಾಪಸಾಗಿದೆ.

https://www.facebook.com/Tv9Kannada/videos/200225714355799/

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ