ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾಗೆ ಮತ್ತೆ ವಿಘ್ನ ಎದುರಾಗಿದೆ. ನೆಲಮಂಗಲದ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಶೂಟಿಂಗ್ ವೇಳೆ ಸುಮಾರು 200 ಜನ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಾಲ್ಕು ದಿನದಲ್ಲಿ ಮೂರು ವಿಘ್ನ:
ಭಜರಂಗಿ 2 ಶೂಟಿಂಗ್ ಸ್ಥಗಿತ:
ಇಂದು ಮೋಹನ್.ಬಿ ಕೆರೆ ಸ್ಟುಡಿಯೋದಲ್ಲಿ ಸುಮಾರು 200 ಜನ ಕಲಾವಿದರು ಕೆಲಸ ಮಾಡುತ್ತಿದ್ದರು. ಭಜರಂಗಿ 2 ಚಿತ್ರದ ಪ್ರಮುಖ ದೃಶ್ಯ ಚಿತ್ರೀಕರಣ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಸದ್ಯ ಭಜರಂಗಿ 2 ಚಿತ್ರದ ಶೂಟಿಂಗ್ ಸ್ಥಗಿತಗೊಳಿಸಿದ ಚಿತ್ರ ತಂಡ ಸ್ಥಳದಿಂದ ವಾಪಸಾಗಿದೆ.