Sign In

By signing in or creating an account, you agree with Associated Broadcasting Company's Terms & Conditions and Privacy Policy.

KV Raju Death: ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ

KV Raju Passes Away: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆವಿ ರಾಜು ನಿಧನ ಹೊಂದಿದ್ದಾರೆ. ಅನಾರೋಗ್ಯದ ಕಾರಣ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಅವರು ಇಂದು ಮುಂಜಾನೆ 8ಕ್ಕೆ ಇಹಲೋಕ ತ್ಯಜಿಸಿದ್ದಾರೆ.

KV Raju Death: ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ
ನಿರ್ದೇಶಕ ಕೆವಿ ರಾಜು (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Dec 24, 2021 | 10:18 AM

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಕೆ.ವಿ.ರಾಜು (KV Raju) ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8ಕ್ಕೆ ಅವರು ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು. 

ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ. ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

KV Raju

ನಿರ್ದೇಶಕ ಕೆವಿ ರಾಜು (ಸಂಗ್ರಹ ಚಿತ್ರ)

ಕೆವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಕೆಲವೇ ವರ್ಷಗಳಲ್ಲಿ ಚಿತ್ರರಂಗದ ಹಿಟ್ ನಿರ್ದೇಶಕರಾಗಿ ಅವರು ಜನಮೆಚ್ಚುಗೆ ಪಡೆದರು. ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎಂದು ಗುರುತಿಸಿಕೊಂಡಿದ್ದರು.

1991ರಲ್ಲಿ ‘ಇಂದ್ರಜಿತ್’ ಚಿತ್ರದ ಮೂಲಕ ಬಾಲಿವುಡ್​ಗೂ ಕೆವಿ ರಾಜು ಪ್ರವೇಶಿಸಿದ್ದರು. ಅಮಿತಾಭ್ ಬಚ್ಚನ್ ಹಾಗೂ ಜಯಪ್ರದಾ ಆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೇ ಮತ್ತೆರಡು ಹಿಂದಿ ಚಿತ್ರಗಳಿಗೂ ಅವರು ಆಕ್ಷನ್ ಕಟ್ ಹೇಳಿದ್ದರು. ಕಾಲಾನಂತರದಲ್ಲಿ ರಾಜು ಅವರು ಸಂಭಾಷಣೆ ಹಾಗೂ ಬರಹಗಾರರಾಗಿ ಗುರುತಿಸಿಕೊಂಡರು. 2017ರಲ್ಲಿ ತೆರೆಗೆ ಬಂದ ಕನ್ನಡದ ‘ಟೈಗರ್ ಗಲ್ಲಿ’ ಚಿತ್ರಕ್ಕೆ ಅವರು ಚಿತ್ರಕತೆ ಹಾಗೂ ಸಂಭಾಷಣೆ ರಚಿಸಿದ್ದರು.

ಈಗಾಗಲೇ ಸಾಲುಸಾಲು ಆಘಾತದಿಂದ ಕುಗ್ಗಿರುವ ಕನ್ನಡ ಚಿತ್ರರಂಗ, ಹಿರಿಯ ನಿರ್ದೇಶಕ, ಬರಹಗಾರ ರಾಜು ಅವರ ನಿಧನದಿಂದ ಮತ್ತಷ್ಟು ಬಡವಾಗಿದೆ.

ಇದನ್ನೂ ಓದಿ:

ಕನ್ನಡ ಕಿರುತೆರೆ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಉಮಾಶ್ರೀ ಸೀರಿಯಲ್​ ‘ಪುಟ್ಟಕ್ಕನ ಮಕ್ಕಳು’

Published On - 9:56 am, Fri, 24 December 21

ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!
ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!
ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ: ಕುಮಾರಸ್ವಾಮಿ
ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ: ಕುಮಾರಸ್ವಾಮಿ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ