
ಬೆಂಗಳೂರು: ಹಾಸ್ಯನಟ ಮಿಮಿಕ್ರಿ ರಾಜ್‌ಗೋಪಾಲ್(69) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್‌ಗೋಪಾಲ್ ಬೆಂಗಳೂರಿನ ಕೆಂಗೇರಿ ಬಳಿಯ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ.
ಕನ್ನಡ, ತಮಿಳು ಚಿತ್ರರಂಗ ಸೇರಿದಂತೆ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಜನರನ್ನು ರಂಜಿಸಿದ್ದ ನಟ ಎಲ್ಲರನ್ನು ಬಿಟ್ಟು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ಇವರು ಆಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.