ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ನಿಧನ! ಚಿತ್ರರಂಗದ ಸಂತಾಪ
ಕೆಲವೇ ದಿನಗಳ ಹಿಂದೆ ಅಂಬುಜಾ ದ್ವಾರಕೀಶ್ ಅವರ 80ನೇ ವರ್ಷದ ಜನ್ಮದಿನವನ್ನು ಆಚರಿಸಲಾಗಿತ್ತು. ಆದರೆ ಈಗ ಅವರ ಅಗಲಿಕೆಯಿಂದ ಇಡೀ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಶುಕ್ರವಾರ (ಏ.16) ನಿಧನರಾದರು. ಅಂಬುಜಾ ದ್ವಾರಕೀಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಅಂಬುಜಾ ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ಸ್ವಗೃಹದಲ್ಲೇ ಅಂಬುಜಾ ಕೊನೆಯುಸಿರೆಳದರು. ಪತಿ ದ್ವಾರಕೀಶ್ ಮತ್ತು ಐವರು ಪುತ್ರರನ್ನು ಅವರು ಅಗಲಿದ್ದಾರೆ. ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.
ಅಂಬುಜಾ ಅವರು ಈ ವರ್ಷ 80ನೇ ವಸಂತಕ್ಕೆ ಕಾಲಿಟ್ಟಿದ್ದರು. ಅವರ 80ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬದ ಸದಸ್ಯರೆಲ್ಲ ಸೇರಿ ಸಂಭ್ರಮದಿಂದ ಆಚರಿಸಿದ್ದರು. ಆದರೆ ಈಗ ನೋವಿನ ಸುದ್ದಿ ಹೊರಬಿದ್ದಿದೆ.
ಇದನ್ನೂ ಓದಿ: Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ
ಜಗ್ಗೇಶ್ ನಟನಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ಗುರುಗಳ ನಿಧನ! ಕಂಬನಿ ಮಿಡಿದ ನವರಸ ನಾಯಕ