ನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ

|

Updated on: Dec 24, 2020 | 9:02 PM

ಜನವರಿ 2ನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ
ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ
Follow us on

ಬೆಂಗಳೂರು: ಖ್ಯಾತ ನಟ ರಮೇಶ್​ ಅರವಿಂದ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ಅವರ ಮದುವೆ ಅಕ್ಷಯ್ ಅವರೊಂದಿಗೆ ಡಿ.28ರಂದು ನಡೆಯಲಿದೆ.

ನಿಹಾರಿಕಾ ಮತ್ತು ಅಕ್ಷಯ್ ಒಂದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೋವಿಡ್-19 ನಿಯಮಾನುಸಾರ ಎರಡೂ ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಜನವರಿ 2ನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮಗಳ ಮದುವೆ ಸಂಭ್ರಮದಲ್ಲಿ ನಟ ರಮೇಶ್ ಅರವಿಂದ್

ಯೂಟ್ಯೂಬ್​ನಲ್ಲಿ 100 ಕೋಟಿ ವ್ಯೂಸ್​ ಗಳಿಸಿತು ‘ಬೆಳಗೆದ್ದು’ ಸಾಂಗ್​.. ರಕ್ಷಿತ್​ ಶೆಟ್ಟಿಯನ್ನು ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ