AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK Bhagavan: ಎಸ್​ಕೆ ಭಗವಾನ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಸಂತಾಪ

ಹಿರಿಯ ನಿರ್ದೇಶಕ ಎಸ್​.ಕೆ. ಭಗವಾನ್ (SK Bhagavan) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

SK Bhagavan: ಎಸ್​ಕೆ ಭಗವಾನ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಸಂತಾಪ
ಎಸ್​.ಕೆ. ಭಗವಾನ್
ಗಣಪತಿ ಶರ್ಮಾ
|

Updated on:Feb 20, 2023 | 11:00 AM

Share

ಬೆಂಗಳೂರು: ಹಿರಿಯ ನಿರ್ದೇಶಕ ಎಸ್​.ಕೆ. ಭಗವಾನ್ (SK Bhagavan) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್‌ ಕುಮಾರ್ ನಟನೆಯ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದ್ದರು. ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: SK Bhagavan: ಚಿತ್ರರಂಗದಲ್ಲಿ ಮುಗಿಯಿತು ಭಗವಾನ್ ಅಧ್ಯಾಯ; ಖ್ಯಾತ ನಿರ್ದೇಶಕ ನಿಧನ

‘ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂಬುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಭಗವಾನ್ ಸರ್ ಇಲ್ಲದೆ ಚಿತ್ರರಂಗ ಬಡವಾಯ್ತು. ಚಿತ್ರರಂಗ ತಿರುಗಿ ನೋಡುವಂತ ಸಿನಿಮಾ ನೋಡುವಂತೆ ಮಾಡಿದವರು ಅವರು. ಅವರ ಜೊತೆಗೆ ಕೆಲಸ ಮಾಡಿದ್ದೇ ನನ್ನ ಭಾಗ್ಯ. ನನ್ನ ಬಾಲ್ಯ ಜೀವನದಲ್ಲಿ ನನ್ನ ಕಲೆಗೆ ಪ್ರೋತ್ಸಾಹ ಕೊಟ್ಟವರು ಅವರು ಎಂದು ಸುಧಾರಾಣಿ ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು, ಅನೇಕ ಸದಭಿರುಚಿಯ ಚಿತ್ರಗಳನ್ನು ಕೊಟ್ಟವರು, ವರನಟರಾದ ಡಾ.ರಾಜ್ ಕುಮಾರ್ ಅವರು ನಟಿಸಿದ ‘ಕಸ್ತೂರಿ ನಿವಾಸ’ದಂಥ ಆವಿಸ್ಮರಣೀಯ ಚಿತ್ರವನ್ನು ನಿರ್ದೇಶನ ಮಾಡಿದ್ದ ದೊರೆ ಭಗವಾನ್ ಜೋಡಿ ಖ್ಯಾತಿಯ ಕೆ.ಎಸ್.ಭಗವಾನ್ ಅವರು ನಿಧನರಾದರೆಂಬ ಸುದ್ದಿ ಕೇಳಿ ಬಹಳ ದುಃಖವಾಯಿತು. ಶ್ರೀ ಭಗವಾನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Mon, 20 February 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್