ಬೆಂಗಳೂರು: ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (SK Bhagavan) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್ ಕುಮಾರ್ ನಟನೆಯ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್ ಜೊತೆ ಸೇರಿ ನಿರ್ದೇಶಿಸಿದ್ದರು. ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
1/2 pic.twitter.com/KNUL0Gh1wt— Basavaraj S Bommai (@BSBommai) February 20, 2023
ಇದನ್ನೂ ಓದಿ: SK Bhagavan: ಚಿತ್ರರಂಗದಲ್ಲಿ ಮುಗಿಯಿತು ಭಗವಾನ್ ಅಧ್ಯಾಯ; ಖ್ಯಾತ ನಿರ್ದೇಶಕ ನಿಧನ
‘ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂಬುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/S6Xe4Bi0C8— Siddaramaiah (@siddaramaiah) February 20, 2023
ಭಗವಾನ್ ಸರ್ ಇಲ್ಲದೆ ಚಿತ್ರರಂಗ ಬಡವಾಯ್ತು. ಚಿತ್ರರಂಗ ತಿರುಗಿ ನೋಡುವಂತ ಸಿನಿಮಾ ನೋಡುವಂತೆ ಮಾಡಿದವರು ಅವರು. ಅವರ ಜೊತೆಗೆ ಕೆಲಸ ಮಾಡಿದ್ದೇ ನನ್ನ ಭಾಗ್ಯ. ನನ್ನ ಬಾಲ್ಯ ಜೀವನದಲ್ಲಿ ನನ್ನ ಕಲೆಗೆ ಪ್ರೋತ್ಸಾಹ ಕೊಟ್ಟವರು ಅವರು ಎಂದು ಸುಧಾರಾಣಿ ಪ್ರತಿಕ್ರಿಯಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು, ಅನೇಕ ಸದಭಿರುಚಿಯ ಚಿತ್ರಗಳನ್ನು ಕೊಟ್ಟವರು, ವರನಟರಾದ ಡಾ.ರಾಜ್ ಕುಮಾರ್ ಅವರು ನಟಿಸಿದ ‘ಕಸ್ತೂರಿ ನಿವಾಸ’ದಂಥ ಆವಿಸ್ಮರಣೀಯ ಚಿತ್ರವನ್ನು ನಿರ್ದೇಶನ ಮಾಡಿದ್ದ ದೊರೆ ಭಗವಾನ್ ಜೋಡಿ ಖ್ಯಾತಿಯ ಕೆ.ಎಸ್.ಭಗವಾನ್ ಅವರು ನಿಧನರಾದರೆಂಬ ಸುದ್ದಿ ಕೇಳಿ ಬಹಳ ದುಃಖವಾಯಿತು. ಶ್ರೀ ಭಗವಾನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:14 am, Mon, 20 February 23