Film City: ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣಕ್ಕೆ ಸಿಎಂಗೆ ಮನವಿ; ಕನ್ನಡದ ಸೆಲೆಬ್ರಿಟಿಗಳ ಜತೆ ಬಾಲಿವುಡ್​ ಮಂದಿ ಸಹಿ

SV Rajendra Singh Babu | Kannada Film Industry: ರಾಜೇಂದ್ರ ಸಿಂಗ್ ಬಾಬು ಹಾಗೂ ಕೃಷ್ಣೇಗೌಡ ಅವರ ನೇತೃತ್ವದಲ್ಲಿ ಇಂದು (ಫೆ.9) ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗಿದೆ. ಮೈಸೂರಿನಲ್ಲಿ ಫಿಲ್ಮ್​​ ಸಿಟಿ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ.

Film City: ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣಕ್ಕೆ ಸಿಎಂಗೆ ಮನವಿ; ಕನ್ನಡದ ಸೆಲೆಬ್ರಿಟಿಗಳ ಜತೆ ಬಾಲಿವುಡ್​ ಮಂದಿ ಸಹಿ
ಸಿಎಂಗೆ ಮನವಿ ಪತ್ರ ನೀಡಿದ ಎಸ್.ವಿ. ರಾಜೇಂದ್ರ ಸಿಂಗ್ ಬಾಬು
Follow us
ಮದನ್​ ಕುಮಾರ್​
|

Updated on:Feb 09, 2023 | 6:30 PM

ಮೈಸೂರಿನಲ್ಲಿ ಫಿಲ್ಮ್​​ ಸಿಟಿ (Film City in Mysore) ನಿರ್ಮಾಣ ಆಗಬೇಕು ಎಂಬುದು ಚಂದನವನದ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಞರ ಬಹುವರ್ಷಗಳ ಬೇಡಿಕೆ. ಕನ್ನಡ ಚಿತ್ರರಂಗದ (Sandalwood) ಲೆಜೆಂಡರಿ ನಟರಾದ ಡಾ. ರಾಜ್​ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಕನಸು ಕೂಡ ಇದೇ ಆಗಿತ್ತು. ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣ ಮಾಡಬೇಕು ಎಂದು ಕನ್ನಡದ ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು (SV Rajendra Singh Babu) ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡಲಾಗಿದೆ. ಈ ಪತ್ರದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಸಹಿ ಮಾಡಿರುವುದು ವಿಶೇಷ.

ಕನ್ನಡ ಚಿತ್ರರಂಗ ಈಗ ಜಾಗತಿಕ ಮಟ್ಟದಲ್ಲಿ ಮಿಂಚುತ್ತಿದೆ. ಆದರೆ ಇಂದಿಗೂ ಕನ್ನಡಿಗರು ಸಿನಿಮಾ ನಿರ್ಮಾಣದ ಕೆಲವು ಚಟುವಟಿಕೆಗಳ ಸಲುವಾಗಿ ಬೇರೆ ರಾಜ್ಯಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಅದರ ಬದಲು ಮೈಸೂರಿನಲ್ಲಿಯೇ ಫಿಲ್ಮ್​ ಸಿಟಿ ನಿರ್ಮಾಣವಾದರೆ ಹೆಚ್ಚು ಅನುಕೂಲ ಆಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರು ಎಂದರೆ ಚಿತ್ರರಂಗದ ಮಂದಿಗೆ ಅಚ್ಚುಮೆಚ್ಚಿನ ತಾಣ. ಪ್ರವಾಣಿ ಸ್ಥಳವಾಗಿರುವ ಈ ಊರಿನ ಆಸುಪಾಸು ಅಂದಾಜು 250ಕ್ಕೂ ಅಧಿಕ ಪ್ರೇಕ್ಷಣೀಯ ಸ್ಥಳಗಳಿವೆ. ಇಂತಹ ಪರಂಪರೆ ಇರುವ ಐತಿಹಾಸಿಕ ನಗರಿಯಲ್ಲಿ ಫಿಲ್ಮ್​ ಸಿಟಿ ಸ್ಥಾಪಿಸಬೇಕೆಂಬುದು ಕನ್ನಡ ಚಿತ್ರರಂಗ ಮಾತ್ರವಲ್ಲದೆ ಬೇರೆ ಭಾಷೆಯ ಸೆಲೆಬ್ರಿಟಿಗಳ ಅಭಿಪ್ರಾಯ ಕೂಡ ಹೌದು.

ಇದನ್ನೂ ಓದಿ: Basavaraj Bommai: ಮಾರ್ಚ್​ ಮೊದಲ ವಾರದಲ್ಲಿ ಅಂಬರೀಷ್​ ಸ್ಮಾರಕ ಉದ್ಘಾಟನೆ: ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ
Image
Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ
Image
‘ಬಟ್ಟೆ ಕಡಿಮೆ ಹಾಕಿ ಬೋಲ್ಡ್​ ಎನಿಸಿಕೊಳ್ಳೋದಲ್ಲ, ಪಾತ್ರವೇ ಬೋಲ್ಡ್ ಆಗಿರಬೇಕು’; ‘ಬೆಂಗಳೂರು 69’ ನಟಿ ಅನಿತಾ ಭಟ್  
Image
‘ಅರ್ಬನ್ ನಕ್ಸಲ್ಸ್​ಗೆ ನಿದ್ದೆ ಬರುತ್ತಿಲ್ಲ’; ‘ಬೊಗಳುತ್ತಾರೆ, ಕಚ್ಚಲ್ಲ’ ಎಂಬ ಪ್ರಕಾಶ್​ ರಾಜ್ ಹೇಳಿಕೆಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ
Image
ಕಪಿಲ್ ಶರ್ಮಾ ಭೇಟಿ ಮಾಡಿದ ಗಣೇಶ್; ಜನಪ್ರಿಯ ಶೋಗೆ ಗೋಲ್ಡನ್ ಸ್ಟಾರ್ ಅತಿಥಿ

ಈ ಹಿಂದೆ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಎಸ್​.ವಿ. ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ, ಕೃಷ್ಣೇಗೌಡ ಅವರನ್ನು ಒಳಗೊಂಡ ಸಮಿತಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತ್ತು. ಆಗ ಹಲವು ವಿಷಯಗಳನ್ನು ಚರ್ಚಿಸಲಾಗಿತ್ತು. ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ವಿಷಯವನ್ನು ಕೂಡ ಅದರಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಕುರಿತು ರಿಪೋರ್ಟ್ ಸಿದ್ಧ ಮಾಡಿಕೊಡುವಂತೆ ಸಿಎಂ ಹೇಳಿದ್ದರು.

ಇದನ್ನೂ ಓದಿ: Vishnuvardhan Memorial: ‘ಕರುನಾಡ ಧ್ವಜವನ್ನು ವಿಷ್ಣುವರ್ಧನ್​ ಎತ್ತಿ ಹಿಡಿದರು’; ಸ್ಮಾರಕ ಉದ್ಘಾಟನೆ ಬಳಿಕ ಸಿಎಂ ಬೊಮ್ಮಾಯಿ ಮಾತು

ರಾಜೇಂದ್ರ ಸಿಂಗ್ ಬಾಬು ಹಾಗೂ ಕೃಷ್ಣೇಗೌಡ ಅವರ ನೇತೃತ್ವದಲ್ಲಿ ಇಂದು (ಫೆ.9) ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗಿದೆ. ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ. ಮನವಿ ಪತ್ರಕ್ಕೆ ಶಿವರಾಜ್​ಕುಮಾರ್, ರಾಕ್ ಲೈನ್ ವೆಂಕಟೇಶ್, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ ಸೇರಿದಂತೆ 20ಕ್ಕೂ ಅಧಿಕ ಗಣ್ಯರು ಸಹಿ ಮಾಡಿದ್ದಾರೆ. ಬಾಲಿವುಡ್​ನ ಖ್ಯಾತ ನಟರಾದ ಧರ್ಮೇಂದ್ರ, ಹೇಮಾ ಮಾಲಿನಿ ಕೂಡ ಸಹಿ‌ ಮಾಡಿ, ಒಂದು ಲೆಟರ್ ಕಳುಹಿಸಿದ್ದಾರೆ‌.

‘ಧರ್ಮೇಂದ್ರ ಅವರಿಗೂ ಮೈಸೂರು ಅಚ್ಚುಮೆಚ್ಚು. ಅವರ ವೃತ್ತಿಜೀವನ ಆರಂಭವಾಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ’ ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ. ಟಾಲಿವುಡ್, ಕಾಲಿವುಡ್,  ಬಾಲಿವುಡ್ ನಟರು ಮತ್ತು ತಂತ್ರಜ್ಞರಿಗೂ ಮೈಸೂರು ಮೆಚ್ಚಿನ ತಾಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:30 pm, Thu, 9 February 23

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ