ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ

ಕೆಲವು ನಟಿಯರ ಫೋಟೋ ಮತ್ತು ವಿಡಿಯೋವನ್ನು ಅಸಭ್ಯ ರೀತಿಯಲ್ಲಿ ವೈರಲ್ ಮಾಡಲಾಗಿದೆ. ಅಂಥವರ ವಿರುದ್ಧ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಗರಂ ಆಗಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ವರ್ತನೆಯನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ
Sapthami Gowda, Ramya, Yuva Rajkumar

Updated on: Mar 03, 2026 | 3:32 PM

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಸೇರಿದಂತೆ ಹಲವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಯಿಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್‌ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ’ ಎಂದು ನಟಿಯರು ಆರೋಪಿಸಿದ್ದಾರೆ.

‘ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್‌ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ’ ಎಂದು ಪೋಸ್ಟ್ ಮಾಡಲಾಗಿದೆ.

Instagram Story

‘ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರಿಯುತ್ತದೆ’ ಎಂದು ಕಲಾವಿದರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ’; ರಾಗಿಣಿ ದ್ವಿವೇದಿ

ಈ ಮೊದಲು ಬಾಲಿವುಡ್​ನಲ್ಲಿ ಕೂಡ ಇದೇ ರೀತಿ ಆಗಿತ್ತು. ನಟಿಯರ ಫೋಟೋ ಮತ್ತು ವಿಡಿಯೋಗಳನ್ನು ಹಿಂಬದಿಯಿಂದ ಚಿತ್ರಿಸುವ ಪಾಪರಾಜಿಗಳ ವಿರುದ್ಧ ಅನೇಕ ಹೀರೋಯಿನ್​ಗಳು ಕಿಡಿಕಾರಿದ್ದರು. ಅದೇ ರೀತಿ ಈಗ ಕನ್ನಡ ಚಿತ್ರರಂಗದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us