ನಟ ಸಂಚಾರಿ ವಿಜಯ್ ಅವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಜುಲೈ 17 ಅವರ ಹುಟ್ಟುಹಬ್ಬ. ಇದಕ್ಕೂ ಮೊದಲೇ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಸಿಕ್ಕಿದೆ. ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ ‘ಲಂಕೆ’ ಚಿತ್ರದಲ್ಲಿ ಸಂಚಾರಿ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಚಾರಿ ವಿಜಯ್ ಹುಟ್ಟುಹಬ್ಬದ ನೆನಪಿಗಾಗಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.
ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್ ಅವರಿಗೆ ಆಕ್ಸಿಡೆಂಟ್ ಆಗಿತ್ತು. ಸ್ನೇಹಿತ ನವೀನ್ ಅವರ ಬೈಕ್ನಲ್ಲಿ ಹಿಂಬದಿ ಕುಳಿತು ವಿಜಯ್ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು. ಈಗ ಅವರ ನೆನಪಿಗೆ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.
ಇತ್ತೀಚೆಗೆ ‘ಲಂಕೆ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿ ಸದ್ದು ಮಾಡಿತ್ತು. ಸರ್ಕಾರ ಚಿತ್ರಮಂದಿರಗಳ ಆರಂಭಕ್ಕೆ ಅನುಮತಿ ನೀಡಿದರೆ, ಸೆಪ್ಟೆಂಬರ್ನಲ್ಲಿ ‘ಲಂಕೆ’ ಚಿತ್ರ ತೆರೆಗೆ ಬರಲಿದೆ. ದಿ ಗ್ರೇಟ್ ಎಂಟರ್ ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್ ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯಿತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: ಸಂಚಾರಿ ವಿಜಯ್ಗೆ ಅಪಘಾತವಾದ ದಿನ ನಿಜಕ್ಕೂ ನಡೆದಿದ್ದೇನು? ಪೊಲೀಸರಿಗೆ ಹೇಳಿಕೆ ನೀಡಿದ ಸ್ನೇಹಿತ ನವೀನ್
ಸಂಚಾರಿ ವಿಜಯ್ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ
Published On - 7:57 pm, Thu, 15 July 21