AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 4ಕ್ಕೆ ‘ಮ್ಯಾರೇಜ್ ಪಾರ್ಟಿ’ ಬಿಡುಗಡೆ; ಗಮನ ಸೆಳೆದ ಟ್ರೇಲರ್

ವಿನೀತ್ ಕುಮಾರ್, ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ ಪಾಣಾಜೆ ಮುಂತಾದವರು ‘ಮ್ಯಾರೇಜ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಡಿಸೆಂಬರ್ 4ರಂದು ಬಿಡುಗಡೆ ಆಗುತ್ತಿರುವ ಈ ಚಿತ್ರಕ್ಕೆ ಚಯನ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ಬಿಡುಗಡೆ ಆಗಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಡಿಸೆಂಬರ್ 4ಕ್ಕೆ ‘ಮ್ಯಾರೇಜ್ ಪಾರ್ಟಿ’ ಬಿಡುಗಡೆ; ಗಮನ ಸೆಳೆದ ಟ್ರೇಲರ್
Marriage Party Still
ಮದನ್​ ಕುಮಾರ್​
|

Updated on: Nov 25, 2026 | 7:41 PM

Share

‘ಮ್ಯಾರೇಜ್ ಪಾರ್ಟಿ’ ಸಿನಿಮಾ ಘೋಷಣೆ ಆದಾಗಿನಿಂದಲೂ ನಿರೀಕ್ಷೆ ಮೂಡಿಸಿತ್ತು. ಚಯನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿರುವ, ‘ಶ್ರೀ ವಾರಾಹಿ ಫಿಲ್ಮ್ಸ್’ ಸಂಸ್ಥೆಯ ಮೂಲಕ ನಿರ್ಮಾಣ ಆಗಿರುವ ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ನಿರ್ಮಾಪಕ ಸಂತೋಷ್ ವಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್ 4ರಂದು ‘ಮ್ಯಾರೇಜ್ ಪಾರ್ಟಿ’ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಈಗ ಟ್ರೇಲರ್ ಮೂಲಕ ಗಮನ ಸೆಳೆಯುತ್ತಿದೆ.

ಈ ಮೊದಲು ಎರಡು ಹಾಡುಗಳ ಮೂಲಕ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ಸದ್ದು ಮಾಡಿತ್ತು. ಬಿಡುಗಡೆಯ ಕ್ಷಣಗಳು ಹತ್ತಿರಾಗುತ್ತಿರುವ ಈ ಹೊತ್ತಿನಲ್ಲಿ ಚಿತ್ರತಂಡವು ಆಕರ್ಷಕ ಟ್ರೇಲರ್ ಅನಾವರಣ ಮಾಡಿದೆ. ಈ ಮೂಲಕ ‘ಮ್ಯಾರೇಜ್ ಪಾರ್ಟಿ’ ಒಳಗೆ ಕಥೆ ಯಾವ ರೀತಿ ಇರಲಿದೆ ಎಂಬುದರ ಝಲಕ್ ತೋರಿಸಿದೆ. ಟ್ರೇಲರ್ ನೋಡಿದ ಎಲ್ಲರೂ ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

ನಿರ್ದೇಶಕ ಚಯನ್ ಶೆಟ್ಟಿ ಅವರು ಈ ಹಿಂದೆ ‘ಅಧಿಪತ್ರ’ ಸಿನಿಮಾದ ಮೂಲಕ ಗಮನ ಸೆಳೆದಿದ್ದರು. ಈಗ ‘ಮ್ಯಾರೇಜ್ ಪಾರ್ಟಿ’ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಲು ಸಿದ್ಧರಾಗಿದ್ದಾರೆ. ಈ ಸಿನಿಮಾದಲ್ಲಿ ಗಟ್ಟಿ ಕಥೆ ಇದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಟ್ರೇಲರ್ ನೋಡಿದ ಅನೇಕರಿಗೆ ‘ಸು ಫ್ರಂ ಸೋ’ ಸಿನಿಮಾ ನೆನಪಾಗುತ್ತಿದೆ. ಅದು ಚಿತ್ರತಂಡಕ್ಕೆ ಪ್ಲಸ್ ಆಗುತ್ತಿದೆ.

ಕರಾವಳಿ ಭಾಗದ ಕಥೆಗಳಿಗೆ ವಿಶೇಷ ಪ್ರೇಕ್ಷಕವರ್ಗವಿದೆ. ಸಾಮಾನ್ಯವಾಗಿ ಕಡಲ ಕಿನಾರೆಯಲ್ಲಿ ಘಟಿಸುವ ಕಥೆಗಳು ಕುತೂಹಲ ಮೂಡಿಸುತ್ತವೆ. ಅದೇ ರೀತಿ ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಕರಾವಳಿ ಸೀಮೆಯ ಒಡಲಿನಲ್ಲಿರುವ ಮತ್ತೊಂದು ರೋಚಕ ಕಥನವಿದೆ ಎಂಬ ವಿಚಾರವೂ ಟ್ರೇಲರ್ ಮೂಲಕವೇ ಜಾಹೀರಾಗಿದೆ. ಕನ್ನಡ ಮಾತ್ರವಲ್ಲದೇ ಮಲಯಾಳಂ ಭಾಷೆಯಲ್ಲಿ ಕೂಡ ಈ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ‘ಮ್ಯಾರೇಜ್ ಪಾರ್ಟಿ’ ಸಿನಿಮಾದಿಂದ ಬಂತು ಮೋಜು ಮಸ್ತಿಯ ‘ಗಲಾಟೆ’ ಹಾಡು

ಸಾಮಾನ್ಯವಾಗಿ ಜಾರಿಯಲ್ಲಿರುವ ವಿಚಿತ್ರ ನಂಬಿಕೆಗಳು, ಒಂದು ಸಾವು, ದೆವ್ವದ ಮದುವೆ ಎಂಬಿತ್ಯಾದಿ ಅಂಶಗಳ ಬಗ್ಗೆ ಕಥೆ ಹೆಣೆಯಲಾಗಿದೆ. ಅವುಗಳ ಜೊತೆಯಲ್ಲಿ ಭರ್ಜರಿ ಹಾಸ್ಯ ಕೂಡ ಇರಲಿದೆ ಎಂಬುದರ ಸುಳಿವು ಸಿಕ್ಕಿದೆ. ಈ ಚಿತ್ರಕ್ಕೆ ಶ್ರೀಕಾಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನೀಡಿದ್ದಾರೆ. ನಿತಿನ್ ಶೆಟ್ಟಿ ಅವರ ಸಂಕಲನ ಈ ಚಿತ್ರಕ್ಕಿದೆ. ವಿನೀತ್ ಕುಮಾರ್, ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ ಪಾಣಾಜೆ, ರಕ್ಷಿತಾ, ನಮಿತಾ ಕಿರಣ್, ಮೈಮ್ ರಾಮ್‌ದಾಸ್, ರಘು ಪಾಂಡೇಶ್ವರ, ಜ್ಯೋತಿ ಶೆಟ್ಟಿ, ರಾಧಾಕೃಷ್ಣ, ಭೀಮ್ ರಾವ್, ಪುಷ್ಪರಾಜ್ ಬೋಳಾರ್, ಪಿ.ಡಿ. ಸತೀಶ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ
ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ:ಈವರೆಗೆ 20 ಮಂದಿ ಅಸ್ವಸ್ಥ
ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ:ಈವರೆಗೆ 20 ಮಂದಿ ಅಸ್ವಸ್ಥ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ